ಮೈಸೂರಿನಲ್ಲಿ ಬೆಳ್ಳಂಬೆಳಿಗ್ಗೆ ಅಗ್ನಿಯ ರುದ್ರನರ್ತನ : 2 ಮಳಿಗೆ ಭಸ್ಮ
ಮೈಸೂರು, ಸೆಪ್ಟೆಂಬರ್ 8 : ಮೈಸೂರಿನ ಅಗ್ರಹಾರ ವೃತ್ತದಲಲ್ಲಿರವ ಚಿಕ್ಕ ಮಾರ್ಕೆಟ್ ನಲ್ಲಿ ಏಕಾಏಕಿ ಅಗ್ನಿ ಅವಘಡ ಸಂಭವಿಸಿದ್ದು, ಮಾರುಕಟ್ಟೆಯಲ್ಲಿನ ಎರಡು ತರಕಾರಿ ಅಂಗಡಿಗಳು ಸುಟ್ಟು ಭಸ್ಮವಾಗಿದೆ.
ಇಂದು(ಸೆ.8) ಬೆಳಿಗ್ಗೆ 6:30 ರ ಸುಮಾರಿಗೆ ಈ ಘಟನೆ ನಡೆದಿದೆ. ಅಗ್ನಿ ಆಕಸ್ಮಿಕದಿಂದ ಎರಡು ಮಳಿಗೆಗಳಿಗೆ ಬೆಂಕಿ ಬಿದ್ದಿದ್ದು, ಬೆಂಕಿಯನ್ನು ನೋಡುತ್ತಿದ್ದಂತೆ ತಕ್ಷಣ ಆಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ರವಾನಿಸಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಮೋದ್ ಎಂಬುವರಿಗೆ ಸೇರಿದ ತರಕಾರಿ ಮಳಿಗೆ. ಯು.ಪಿ.ಎಸ್., ತರಕಾರಿ ತೂಗುವ ಎಲೆಕ್ಟ್ರಾನಿಕ್ ಯಂತ್ರ ಹಾಗೂ ತರಕಾರಿ ಸೇರಿದಂತೆ ಸುಮಾರು ಒಂದು ಲಕ್ಷ ರೂಪಾಯಿ ಮೌಲ್ಯದ ಪದಾರ್ಥಗಳು ಬೆಂಕಿಗೆ ಆಹುತಿಯಾಗಿದೆ ಎಂದು ಹೇಳಲಾಗುತ್ತಿದೆ. ಪ್ರತಿನಿತ್ಯ ಜನರಿಂದ ಗಿಜಿಗುಡುವ ಮಿನಿ ಮಾರುಕಟ್ಟೆ ಇದಾಗಿತ್ತು. ವಿದ್ಯುತ್ ಶಾರ್ಟ್ ಸಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗುತ್ತಿದೆ. ಬೆಂಕಿಯ ಕೆನ್ನಾಲಿಗೆ ತೀವ್ರವಾಗಿ ವ್ಯಾಪಿಸಿದ್ದು, ದಟ್ಟ ಹೊಗೆ ಆವರಿಸಿಕೊಂಡಿತ್ತು.

ಘಟನಾ ಸ್ಥಳಕ್ಕೆ ತಕ್ಷಣ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಅಂಗಡಿಗಳಿಗೆ ಹರಡದಂತೆ ಯಶಸ್ವಿಯಾಗಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications