ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶೇ.100 ಬಯೋಮೆಟ್ರಿಕ್ ನತ್ತ ಮೈಸೂರಿನ ಸರ್ಕಾರಿ ಕಚೇರಿಗಳು

|
Google Oneindia Kannada News

ಮೈಸೂರು, ಮೇ 25: ರಾಜ್ಯ ಸರ್ಕಾರದ ಸಚಿವಾಲಯ ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಈಗಾಗಲೇ ಸರ್ಕಾರಿ ಅಧಿಕಾರಿಗಳ ಮತ್ತು ನೌಕರರ ಹಾಜರಾತಿಗೆ ಬಯೋಮೆಟ್ರಿಕ್ ಪದ್ಧತಿಯನ್ನು ಜಾರಿಗೊಳಿಸಲಾಗಿದೆ. ಸರ್ಕಾರದ ವ್ಯಾಪ್ತಿಗೆ ಒಳಪಡುವ ಪದವಿಪೂರ್ಣ ಶಿಕ್ಷಣ ಇಲಾಖೆಯಲ್ಲೂ ಬಯೋಮೆಟ್ರಿಕ್ ಹಾಜರಾತಿ ಪದ್ಧತಿಗೆ ಸೂಚನೆ ನೀಡಲಾಗಿತ್ತಾದರೂ ಕಾರಣಾಂತರಗಳಿಂದ ಜಾರಿಯಾಗಿರಲಿಲ್ಲ. ಇದೀಗ ಶಿಕ್ಷಣ ಇಲಾಖೆ ಈ ಬಗ್ಗೆ ಅಂತಿಮ ಹೆಜ್ಜೆ ಇಟ್ಟಿದೆ.

ಕಳೆದ ವರ್ಷವೇ ಬಯೋಮೆಟ್ರಿಕ್ ಅಳವಡಿಕೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿತ್ತು. ಎಲ್ಲ ಉಪನಿರ್ದೇಶಕರಿಗೆ ಕಳೆದ ಏಪ್ರಿಲ್ ನಲ್ಲಿಯೇ ಸುತ್ತೋಲೆ ನೀಡಿತ್ತು. ಮೈಸೂರು ಜಿಲ್ಲೆಯಲ್ಲಿ ಇದನ್ನು ಈಗಾಗಲೇ ಗಂಭೀರವಾಗಿ ಪರಿಗಣಿಸಿದ್ದು, ಬಹುತೇಕ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಬಯೋ ಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ದಯಾನಂದ್ ತಿಳಿಸಿದರು.

ಪಿಯು ಕಾಲೇಜುಗಳು ಬಯೋ ಮೆಟ್ರಿಕ್ ಅಳವಡಿಸಿಕೊಳ್ಳುವುದು ಕಡ್ಡಾಯ ಪಿಯು ಕಾಲೇಜುಗಳು ಬಯೋ ಮೆಟ್ರಿಕ್ ಅಳವಡಿಸಿಕೊಳ್ಳುವುದು ಕಡ್ಡಾಯ

ಜಿಲ್ಲೆಯಲ್ಲಿ ಇನ್ನೂ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಿದ್ದು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ, ಶೇ 90ಕ್ಕೂ ಹೆಚ್ಚು ಶಾಲೆಗಳಲ್ಲಿ ಬಯೋಮೆಟ್ರಿಕ್ ಪದ್ಧತಿ ಅಳವಡಿಸಲಾಗಿದೆ.

Mysuru government offices schools colleges adopting bio metric system

ಸರ್ಕಾರದಿಂದ ಈ ಹಿಂದೆಯೇ ಸುತ್ತೋಲೆ ಬಂದಿತ್ತು. ಅದರ ಪ್ರಕಾರ ಬಯೋಮೆಟ್ರಿಕ್ ಉಪಕರಣಗಳನ್ನು ಎಲ್ಲಾ ಕಾಲೇಜುಗಳಿಗೂ ಸರಬರಾಜು ಮಾಡಲಾಗಿದೆ. ಸುಮಾರು 65ಕ್ಕೂ ಹೆಚ್ಚು ಕಾಲೇಜುಗಳಲ್ಲಿ ಅಳವಡಿಸಲಾಗಿದೆ. ಕೆಲವು ಕಡೆ ತಾಂತ್ರಿಕ ಸಮಸ್ಯೆ ಎದುರಾಗಿದೆ. ಒಂದೆರಡು ಕಡೆ ಸುರಕ್ಷತೆ ದೃಷ್ಟಿಯಿಂದ ಅಳವಡಿಸಿಲ್ಲ. ಇಲ್ಲಿ ಪದೇ ಪದೇ ಕಳ್ಳತನವಾಗುತ್ತಿರುವುದರಿಂದ ಪರ್ಯಾಯ ಮಾರ್ಗಕ್ಕೆ ಚಿಂತಿಸಲಾಗುತ್ತಿದೆ. ಒಂದೆರಡು ಕಡೆ ವಿದ್ಯುತ್ ಸಮಸ್ಯೆ ಎದುರಾಗಿದೆ. ಕಾಲೇಜು ಪ್ರಾರಂಭವಾಗುತ್ತಿದ್ದಂತೆ ಎಲ್ಲ ಅನುದಾನ ರಹಿತ ಖಾಸಗಿ ಕಾಲೇಜುಗಳಿಂದಲೂ ವರದಿ ಪಡೆಯಲಾಗುವುದು ಎಂದು ಮಾಹಿತಿ ನೀಡಿದರು.

ರೋಹಿಂಗ್ಯಾ ನಿರಾಶ್ರಿತರ ಬಯೋಮೆಟ್ರಿಕ್ ಮಾಹಿತಿ ಸಂಗ್ರಹಕ್ಕೆ ಸೂಚಿಸಿದ ಕೇಂದ್ರರೋಹಿಂಗ್ಯಾ ನಿರಾಶ್ರಿತರ ಬಯೋಮೆಟ್ರಿಕ್ ಮಾಹಿತಿ ಸಂಗ್ರಹಕ್ಕೆ ಸೂಚಿಸಿದ ಕೇಂದ್ರ

ಬಯೋಮೆಟ್ರಿಕ್ ಪದ್ಧತಿ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆ ಅಧೀನದಲ್ಲಿ ಬರುವ ಎಲ್ಲ ಸರ್ಕಾರಿ ಕಚೇರಿಗಳಿಗೆ, ಶಿಕ್ಷಣ ಸಂಸ್ಥೆಗಳಿಗೆ ಪ್ರತಿ ತಿಂಗಳು ವರದಿ ನೀಡುವಂತೆ ಸೂಚಿಸಲಾಗಿದೆ. ಈ ಮೂಲಕ ಮೈಸೂರಿನ ಸರ್ಕಾರಿ ಕಚೇರಿಗಳಲ್ಲಿ ಶೇ 100ರಷ್ಟು ಬಯೋಮೆಟ್ರಿಕ್ ಪದ್ಧತಿ ಜಾರಿಯಾಗುವ ನಿರೀಕ್ಷೆಯಿದೆ.

English summary
Mysuru government offices including schools and colleges also adopting bio metric system for attendance. On this year, 100% government offices will get bio metric system for accuracy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X