Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್‌ಗೆ ಶಾಕ್ ಕೊಟ್ಟ ಒಕ್ಕಲಿಗರು!
ಮೈಸೂರು, ಏಪ್ರಿಲ್. 19: ಸದ್ಯ ಕರ್ನಾಟಕದ ಹೈ ಪ್ರೊಫೈಲ್ ಕ್ಷೇತ್ರವಾಗಿರುವ ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯ ಯಾರ ಬೆಂಬಲಕ್ಕೆ ನಿಲ್ಲುತ್ತಾರೊ ಅವರಿಗೆ ಗೆಲುವು ಖಚಿತ ಎನ್ನುವಂತಿದೆ. ಬಿಜೆಪಿ ರಾಜವಂಶಸ್ಥ ಯದುವೀರ್ ಒಡೆಯರ್ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ಎಂ.ಲಕ್ಷ್ಮಣ್ ಅವರನ್ನು ಕಣಕ್ಕಿಳಿಸಿದೆ.
ತಮ್ಮ ತವರು ಜಿಲ್ಲೆಯಾದ ಮೈಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲೇಬೇಕು ಎಂಬ ಹಠದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದಾರೆ. ಇದೇ ಕಾರಣಕ್ಕೆ ವಾರಗಟ್ಟಲೆ ಅಲ್ಲೇ ಇದ್ದು ಅಭ್ಯರ್ಥಿ ಪರ ಮತಬೇಟೆಗೆ ಇಳಿದಿದ್ದಾರೆ. ಹಲವು ರಣತಂತ್ರ ಹೆಣೆಯುತ್ತಿದ್ದಾರೆ. ಇದು ಬಿಜೆಪಿಗೆ ತಲೆ ನೋವಾಗಿದೆ. ಇದರ ನಡುವೆ ಒಕ್ಕಲಿಗ ಸಮುದಾಯ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರಿಗೆ ದೊಡ್ಡ ಶಾಕ್ ನೀಡಿದೆ.

ಒಕ್ಕಲಿಗರಿಂದ ಯದುವೀರ್ ಒಡೆಯರ್‌ಗೆ ಶಾಕ್!
ಮೈಸೂರು- ಕೊಡಗು ಹಾಲಿ ಸಂಸದ, ಒಕ್ಕಲಿಗ ಸಮುದಾಯದ ನಾಯಕ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಿಲ್ಲ. ಅವರಿಗೆ ಟಿಕೆಟ್ ನಿರಾಕರಿಸಿದ್ದಕ್ಕಾಗಿ ಈಗಾಗಲೇ ಮೈಸೂರಿನಲ್ಲಿ ಮತ್ತು ಒಕ್ಕಲಿಗ ಸಮುದಾಯದಲ್ಲಿ ಅಸಮಾಧಾನ ಇತ್ತು ಇದನ್ನು ಕಾಂಗ್ರೆಸ್ ತನ್ನ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಇದರ ಪರಿಣಾಮವಾಗಿಯೇ ಒಕ್ಕಲಿಗ ಸಮುದಾಯ ಪಕ್ಷದ ವಿರುದ್ಧ ತಿರುಗಿಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಿದೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿದ್ದ ಪ್ರತಾಪ್ ಸಿಂಹ ಅವರ ಬದಲಿಗೆ ಬಿಜೆಪಿ ರಾಜವಂಶಸ್ಥ ಯದುವೀರ್ ಒಡೆಯರ್ ಅವರನ್ನು ಕಣಕ್ಕಿಳಿಸಿದೆ. ಒಕ್ಕಗಲೊಗ ಅಭ್ಯರ್ಥಿಯನ್ನು ಕಡೆಗಣಿಸಿದ ಬಿಜೆಪಿಯ ವಿರುದ್ಧ ಅಸ್ತ್ರ ಪ್ರಯೋಗಿಸಿದ ಕಾಂಗ್ರೆಸ್ ಒಕ್ಕಲಿಗ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಕಟವರ್ತಿ ಎಂ ಲಕ್ಷ್ಮಣ್ ಅವರನ್ನು ಕಣಕ್ಕೆ ಇಳಿಸಿ ಆಟವಾಡುತ್ತಿದೆ.
ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡಿದ ಒಕ್ಕಲಿಗರು!
ಮೈಸೂರು ಒಕ್ಕಲಿಗ ಸಂಘದ ಅಧ್ಯಕ್ಷ ಮರಿ ಸ್ವಾಮಿ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ಅವರನ್ನು ಬೆಂಬಲಿಸುವುದಾಗಿ ಘೋಷಣೆ ಮಾಡಿದ್ದಾರೆ. 'ಹಾಲಿ ಸಂಸದ ಪ್ರತಾಪ್ ಸಿಂಹ ಅವರು ಒಕ್ಕಲಿಗ ಸಮುದಾಯದಿಂದ ಬಂದಿದ್ದರಿಂದ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಒಕ್ಕಲಿಗರನ್ನು ವ್ಯವಸ್ಥಿತವಾಗಿ ಬದಿಗೊತ್ತಲಾಗಿದೆ ಮತ್ತು ಆದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ" ಎಂದು ತಿಳಿಸಿದ್ದಾರೆ.

ಇನ್ನು, "ಎಂ ಲಕ್ಷ್ಮಣ್ ಅವರು ಕಾಂಗ್ರೆಸ್ ಅಭ್ಯರ್ಥಿ ಎಂಬ ಕಾರಣಕ್ಕೆ ನಾವು ಅವರನ್ನು ಬೆಂಬಲಿಸುತ್ತಿಲ್ಲ. ಲಕ್ಷ್ಮಣ್ ಅವರು ಒಕ್ಕಲಿಗರು, ಅವರು ಒಕ್ಕಲಿಗರ ಸಂಘದಿಂದಲು ಸ್ಪರ್ಧೆ ಮಾಡಿದ್ದಾರೆ. ಹೀಗಾಗಿ ಪಕ್ಷಾತೀತವಾಗಿ ಒಕ್ಕಲಿಗ ಅಭ್ಯರ್ಥಿಗೆ ಮತ ನೀಡುತ್ತೇವೆ" ಎಂದು ಮಾಹಿತಿ ನೀಡಿದ್ದಾರೆ.
ಲಕ್ಷ್ಮಣ್ ಒಕ್ಕಲಿಗರಲ್ಲ: ವಿವಾದ
ಇತ್ತೀಚೆಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮಣ್ ಪರ ಪ್ರಚಾರ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಲಕ್ಷ್ಮಣ್ ಒಕ್ಕಲಿಗ ಸಮುದಾಯದವರು ಎಂದು ಒತ್ತಿ ಹೇಳಿದ್ದರು. ಇದಕ್ಕೆ ಬಿಜೆಪಿ ಅವರು ಒಕ್ಕಲಿಗರಲ್ಲ ಎಂದು ಆರೋಪಿಸಿತ್ತು. ಇದಕ್ಕೆ ತಿರುಗೇಟು ನೀಡಿದ್ದ ಸಿಎಂ ಸಿದ್ದರಾಮಯ್ಯ, ಲಕ್ಷ್ಮಣ್ ಒಕ್ಕಲಿಗರಾಗಿ ಹುಟ್ಟಿ ಕುವೆಂಪು ಆಶಯ ಪಾಲಿಸುತ್ತಿದ್ದಾರೆ ಎಂದಿದ್ದರು.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸುಮಾರು 15 ಲಕ್ಷ ಮತದಾರರು ಇದ್ದಾರೆ. ಅವರಲ್ಲಿ 4 ಲಕ್ಷಕ್ಕೂ ಹೆಚ್ಚು ಒಕ್ಕಲಿಗರು ಬಳಿಕ ಲಿಂಗಾಯತರು, ದಲಿತರು ಮತ್ತು ಒಬಿಸಿಗಳು ಇದದ್ದಾರೆ. ಅಲ್ಲದೆ, 1.5 ಲಕ್ಷ ಮುಸ್ಲಿಂ ಸಮುದಾಯದ ಮತಗಳು ಮತ್ತು 1 ಲಕ್ಷ ಬ್ರಾಹ್ಮಣ ಮತದಾರರಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications