Muda: ಸಿಎಂ ಪತ್ನಿಯನ್ನು 4 ಗಂಟೆ ವಿಚಾರಣೆ ನಡೆಸಿದ ತನಿಖಾಧಿಕಾರಿಗಳು
ಮೈಸೂರು, ಅಕ್ಟೋಬರ್ 25: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ವತಿಯಿಂದ ಸಿಎಂ ಸಿದ್ದರಾಮಯ್ಯ ಅವರು ಪಡೆದ ನಿವೇಶನ ಪಡೆಯುವಾಗ ದೊಡ್ಡ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. ಅದರ ತನಿಖೆಗೆ ಹೈಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೆ ಮೈಸೂರು ಪೊಲೀಸ್ ಲೋಕಾಯುಕ್ತ ಅಧಿಕಾರಿಗಳು ನತಿಖೆ ಚುರುಕಗೊಳಿಸಿದ್ದಾರೆ. ಶುಕ್ರವಾರ (ಅಕ್ಟೋಬರ್ 25) ಸಿಎಂ ಸಿದ್ದರಾಮಯ್ಯ ಅವರ ಪತ್ನಿಯಲ್ಲೂ ಸುಮಾರು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದಾರೆ.
ಮುಡಾ ಅಕ್ರಮ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಪೊಲೀಸರು ಶುಕ್ರವಾರ ಮೈಸೂರಿನ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರನ್ನು ವಿಚಾರಣೆ ನಡೆಸಿದರು. ಬೆಳಗ್ಗೆ ಸುಮಾರು 8 ಗಂಟೆಯಿಂದ ಮಧ್ಯಾಹ್ನ 12.30 ಗಂಟೆವರೆಗೆ ಮುಡಾ ಅಕ್ರಮ, ನಿವೇಶನ ವಾಪಾಸ್, ಸಿದ್ದರಾಮಯ್ಯ ಅವರಿಗೆ ನಿವೇಶನ ಪಡೆದಿದ್ದರ ಬಗ್ಗೆ ವಿಚಾರಿಸಿದ್ದರೆ ಎಂದು ತಿಳಿದು ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ತನಿಖಾಧಿಕಾರಿಗಳು ಗುರುವಾರ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾರಜಾಗುವಂತೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ತನಿಖಾಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗಳಿಗೂ ಉತ್ತರಿಸಿದ್ದಾರೆ. ಒಂದಷ್ಟು ದಾಖಲೆಗಳನ್ನು ಅವರು ನೀಡಿದ್ದಾರೆ ಎನ್ನಲಾಗಿದೆ.
ಸಿಎಂ ಪತ್ನಿಗೆ ನೋಟಿಸ್, ವಿಚಾರಣೆಗೆ ಸೂಚನೆ
ಸಿದ್ದರಾಮಯ್ಯ ಅವರಿಗೆ ಸೇರಿದ್ದ ಜಾಗ ಸ್ವಾಧೀನ ಮಾಡಿಕೊಂಡು ಪಯಾರ್ಯವಾಗಿ ಮೈಸೂರಿನ ವಿಜಯನಗರ ಮೂರು ಮತ್ತು ನಾಲ್ಕನೇ ಹಂತದಲ್ಲಿ 14 ಸೈಟ್‌ಗಳನ್ನು ನೀಡಲಾಗಿತ್ತು. ಈ ನಿವೇಶನ ಪಡೆಯುವಾಗ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ಬಳಸಿಕೊಂಡು ಅಕ್ರಮ ವೆಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಎಲ್ಲ ಸೈಟುಗಳನ್ನು ಅವರು ತಮ್ಮ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿ ಪಡೆದಿದ್ದಾರೆ. ಹೀಗಾಗಿ ಪತ್ನಿ ಪಾರ್ವತಿ ಅವರಿಗೂ ನೋಟಿಸ್ ನೀಡಿ ವಿಚಾರಣೆಗೆ ಒಳಪಡಿಸಲಾಗಿದೆ.
ಮುಡಾಗೆ ಸೈಟ್ ವಾಪಾಸ್ ನೀಡಿದ್ದ ಸಿಎಂ ಪತ್ನಿ
ಈ ಮುಡಾ ಪ್ರಕರಣದಲ್ಲಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಹೀಗಾಗಿ ಇತ್ತೀಚೆಗೆ ಸಿಎಂ ಪತ್ನಿ ಪಾರ್ವತಿ ಅವರು, ಮುಡಾ ಎಲ್ಲ ಸೈಟು ವಾಪಾಸ್ ನೀಡಿದ್ದರು. ನನಗೆ ನನ್ನ ಪತಿಯ ಗೌರವ, ಹಿತಕ್ಕಿಂತ ಬೇರೇನೂ ಬೇಕಿಲ್ಲ. ಅವರ ಗೌರವಕ್ಕಿಂತ ಬೇರೇನು ದೊಡ್ಡದಲ್ಲ ಎಂದು ತಿಳಿಸಿದ್ದರು.
ಮುಡಾ ಪ್ರಕರಣಕ್ಕೆ ಸಂಬಂಧಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸೆಪ್ಟೆಂಬರ್ 27 ರಂದು ಎಫ್‌ಐಆರ್ ದಾಖಲಿಸಲಾಗಿತ್ತು. ಅದಕ್ಕು ಮೊದಲು ರಾಜ್ಯಪಾಲರ ಬಳಿಕ ಈ ಸೈಟ್ ಅಕ್ರಮ ಪ್ರಕರಣದ ತನಿಖೆಗೆ ಅನುಮತಿ ನೀಡುವಂತೆ ಸಿಎಂ ವಿರುದ್ಧ ಸಾಮಾಜಿಕ ಕಾರ್ಯಕರ್ತ ದೂರು ನೀಡಿದ್ದರು.
ಮುಡಾ ತನಿಖೆ ಪ್ರಶ್ನಿಸಿ ಸಿಎಂ ಹೈಕೋರ್ಟ್ ಮೆಟ್ಟಿಲು
ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲಿ ವಿಚಾರಣೆ ನಡೆದು, ರಾಜ್ಯಪಾರ ತನಿಖೆಗೆ ಅನುಮತಿ ನೀಡಿ ನಿರ್ಧಾರವನ್ನು ಎತ್ತಿ ಹಿಡಿಯಲಾಗಿತ್ತು. ಕೂಡಲೇ ಸಿಎಂ ವಿರುದ್ಧ ಎಫ್‌ಐಆರ್ ದಾಖಲಾಯಿತು. ಇದೀಗ ಸಿಎಂ ಸಿದ್ದರಾಮಯ್ಯ ಅವರು ಮುಡಾ ಪ್ರಕರಣದ ತನಿಖೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಸದ್ಯ ಈ ಪ್ರಕರಣ ಹೈಕೋರ್ಟ್‌ನಲ್ಲಿದೆ.












Click it and Unblock the Notifications