ಭೀಕರ ಅಪಘಾತ: ಮೈಸೂರು ಲೋಕಾಯುಕ್ತ ಎಸ್ಪಿ ರವಿಕುಮಾರ್ ನಿಧನ

ಬೆಂಗಳೂರಿನ ಕುಂಬಗೋಡಿಯಲ್ಲಿ ಟಿಪ್ಪರ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೈಸೂರಿನ ಲೋಕಾಯುಕ್ತ ಎಸ್ಪಿ ರವಿಕುಮಾರ್ ಸೇರಿ ಮೂವರು ಸಾವನ್ನಪ್ಪಿದ್ದಾರೆ.

ಮೈಸೂರು, ಫೆಬ್ರವರಿ 22: ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಬುಧವಾರ ಟಿಪ್ಪರ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೈಸೂರಿನ ಲೋಕಾಯುಕ್ತ ಎಸ್ಪಿ ರವಿಕುಮಾರ್ ಸಾವನ್ನಪ್ಪಿದ್ದಾರೆ.

ರವಿಕುಮಾರ್ ಕೆ.ಎ 01 5856 ನೋಂದಣಿಯ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದರು. ಈ ಸಂದರ್ಭ ರಾಜರಾಜೇಶ್ವರಿ ನಗರದ ದ್ವಾರದ ಬಳಿ ಬರುವಾಗ ಕಾರು ಮತ್ತು ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿವೆ. [ಆಂಧ್ರದಲ್ಲೂ ಸಾರಿಗೆ ಸಂಸ್ಥೆ ಬಸ್ ಸುಟ್ಟು ಭಸ್ಮ!!]

Mysuru Lokayukta SP Ravi Kumar killed in a road accident at Bengaluru

ಡಿಕ್ಕಿಯ ರಭಸಕ್ಕೆ ಕಾರು ಚಾಲಕ ಕಿರಣ್ ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡಿದ್ದ ಪೊಲೀಸ್ ವರಿಷ್ಠಾಧಿಕಾರಿ ರವಿಕುಮಾರ್ ರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಇನ್ನೋರ್ವ ವ್ಯಕ್ತಿಯೂ ಮೃತರಾಗಿದ್ದಾರೆ. [ನೆಲಮಂಗಲ:ಕೆಎಸ್ ಆರ್ ಟಿಸಿ ಬಸ್ ಗೆ ಬೆಂಕಿ,1 ಸಾವು,10 ಜನರಿಗೆ ಗಾಯ]

Mysuru Lokayukta SP Ravi Kumar killed in a road accident at Bengaluru

ರವಿಕುಮಾರ್ ಈ ಹಿಂದೆ ಮಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು. ಅಪಘಾತಕ್ಕೆ ಸಂಬಂಧಿಸಿದಂತೆ ಕುಂಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+