ನಂಜನಗೂಡಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳ ರಕ್ಷಣೆ
ಮೈಸೂರು, ಜುಲೈ 9: ಆತ್ಮಹತ್ಯೆಗೆ ಯತ್ನಿಸಿದ ಇಬ್ಬರು ಪ್ರೇಮಿಗಳನ್ನು ಪೊಲೀಸರು ರಕ್ಷಿಸಿದ ಘಟನೆ ನಂಜನಗೂಡು ಸಮೀಪದ ದುಗ್ಗಹಳ್ಳಿ ಗ್ರಾಮದಲ್ಲಿ ನಡೆದಿದೆ. ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದವರನ್ನು ಗ್ರಾಮದ ಕಾವ್ಯಾ ಮತ್ತು ಕುರಿಹುಂಡಿ ಗ್ರಾಮದ ರವಿ ಎಂದು ಗುರುತಿಸಲಾಗಿದೆ.
ಕಾವ್ಯಾ ಮತ್ತು ರವಿ ಇಬ್ಬರೂ ಕಳೆದ 5 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇಬ್ಬರ ಜಾತಿ ಬೇರೆ ಬೇರೆಯಾದ ಕಾರಣ, ಎರಡೂ ಮನೆಯವರು ಇವರಿಬ್ಬರ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಗುರುವಾರ ದುಗ್ಗಹಳ್ಳಿ ಗ್ರಾಮದ ಕಾವ್ಯಾ ಮನೆಯಲ್ಲಿ ಯಾರು ಇಲ್ಲದ ವೇಳೆ ಪ್ರಿಯತಮ ರವಿ ಆಗಮಿಸಿದ್ದಾನೆ. ಇಬ್ಬರೂ ಅಲ್ಲೇ ಮಾತನಾಡಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹುಲ್ಲಹಳ್ಳಿ ಪೊಲೀಸರು ಘಟನೆ ಬಗ್ಗೆ ಮಾಹಿತಿ ಪಡೆದು, ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಇಬ್ಬರು ಪ್ರೇಮಿಗಳನ್ನು ರಕ್ಷಿಸಿ, ಆ್ಯಂಬುಲೆನ್ಸ್ ಮೂಲಕ ಮೈಸೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ.












Click it and Unblock the Notifications