ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಫೆಬ್ರವರಿ 15: ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳ ಚುನಾವಣೆಗೆ ಫೆ.24ಕ್ಕೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಮೈಸೂರಿನ ಪ್ರಥಮ ಪ್ರಜೆಯಾಗಿ ಯಾರು ಆಯ್ಕೆಯಾಗಲಿದ್ದಾರೆ ಎನ್ನುವ ಕುತೂಹಲ ಕೆರಳಿಸುವಂತೆ ಮಾಡಿವೆ.

ಈಗಾಗಲೇ ಹೊಸ ಮೀಸಲಾತಿ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸಾಮಾನ್ಯ ಮಹಿಳೆಗೆ ಮೇಯರ್ ಸ್ಥಾನ ಹಾಗೂ ಉಪ ಮೇಯರ್ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ಮೀಸಲಾಗಿರಿಸಿ ಸರ್ಕಾರ ಆದೇಶ ಹೊರಡಿಸಿದೆ.

ಮೈಸೂರು ಮೇಯರ್ ಚುನಾವಣೆ; ಮೀಸಲಾತಿ ಪ್ರಕಟಮೈಸೂರು ಮೇಯರ್ ಚುನಾವಣೆ; ಮೀಸಲಾತಿ ಪ್ರಕಟ

ಜ.17ರಂದು ಹಾಲಿ ಮೇಯರ್ ತಸ್ನಿಂ ಹಾಗೂ ಉಪ ಮೇಯರ್ ಶ್ರೀಧರ್ ಅವರ ಅಧಿಕಾರದ ಅವಧಿಯು ಅಂತ್ಯವಾಗಿದ್ದು, ಫೆ.24ರಂದು ನೂತನ ಮಹಾಪೌರರ ಆಯ್ಕೆ ನಡೆಯಲಿದೆ. ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿಕಾರಿ ಡಾ.ಜಿ.ಸಿ.ಪ್ರಕಾಶ್ ಅವರು ಚುನಾವಣೆ ದಿನಾಂಕದ ಅಧಿಸೂಚನೆ ಹೊರಡಿಸಿದ್ದು, ಅಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ವಿಶೇಷ ಸಭೆಯಲ್ಲಿ ಹಾಜರಿರುವಂತೆ ಸದಸ್ಯರಿಗೆ ಸಭಾಸೂಚನಾ ಪತ್ರಗಳನ್ನು ಕಳುಹಿಸಿದ್ದಾರೆ.

Mysuru Mahanagara Palike Mayor Election On feb 24th

ಫೆ. 24ರಂದು ಬೆಳಿಗ್ಗೆ 8ರಿಂದ 10 ಗಂಟೆಯವರೆಗೆ ನಾಮಪತ್ರಗಳ ಸ್ವೀಕಾರ ನಡೆಯಲಿದೆ. ನಂತರ, 11 ಗಂಟೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ. ಮೇಯರ್ ಸ್ಥಾನವು ಸಾಮಾನ್ಯ ಮಹಿಳೆಗೆ ಹಾಗೂ ಉಪ ಮಹಾಪೌರ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಈ ಎರಡು ಸ್ಥಾನಗಳಿಗೆ ಚುನಾವಣೆ ನಡೆಯುವ ಜತೆಗೆ ನಾಲ್ಕು ಸ್ಥಾಯಿ ಸಮಿತಿಗಳ ತಲಾ ಏಳು ಸದಸ್ಯರ ಸ್ಥಾನಗಳಿಗೂ ಚುನಾವಣೆ ನಡೆಯಲಿದೆ.

ಈ ನಡುವೆ ಮೇಯರ್ ಚುನಾವಣೆ ದಿನಾಂಕ ನಿಗದಿಯಾಗುತ್ತಿದ್ದಂತೆ, ಚುನಾವಣೆಯಲ್ಲಿ ಮತದಾನ ಮಾಡುವ ಹಕ್ಕು ಹೊಂದಿರುವ ಸದಸ್ಯರಿಗೆ ಸಭಾಸೂಚನಾ ಪತ್ರಗಳನ್ನು ಕಳುಹಿಸಲಾಗಿದೆ.

English summary
The election of the mayor and deputy mayor of Mysuru Mahanagara Palike is set on February 24.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X