• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರು ಪಾಲಿಕೆಯಲ್ಲಿ ಮೈತ್ರಿ; ಇಂದು ಅಂತಿಮ ಚಿತ್ರಣ!

By ಮೈಸೂರು ಪ್ರತಿನಿಧಿ
|

ಮೈಸೂರು, ಫೆಬ್ರವರಿ 23: ಕುತೂಹಲ ಮೂಡಿಸಿರುವ ಮೈಸೂರು ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಅಂತಿಮ ಚಿತ್ರಣ ಲಭ್ಯವಾಗಲಿದೆ. ಫೆ.24ರಂದು ಚುನಾವಣೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ.

ಸೋಮವಾರ ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಸಭೆ ಅಂತ್ಯಗೊಂಡಿದೆ. ದಳಪತಿಗಳ ನಿರ್ಧಾರಕ್ಕೆ ಎಲ್ಲರೂ ಕಾದು ಕುಳಿತಿದ್ದಾರೆ. ಮಂಗಳವಾರ ದೋಸ್ತಿ ಕುರಿತ ಅಂತಿಮ ಚಿತ್ರಣ ಹೊರ ಬೀಳುವ ಎಲ್ಲಾ ಸಾಧ್ಯತೆಗಳಿವೆ.

ಮೈಸೂರು ಮೇಯರ್ ಚುನಾವಣೆ: ದಳಪತಿಗಳೇ ಕಿಂಗ್ ಮೇಕರ್!

ಬಿಜೆಪಿ ಅಭ್ಯರ್ಥಿಗಳನ್ನೇ ಮೇಯರ್ ಮಾಡಬೇಕೆಂಬ ಉದ್ದೇಶದಿಂದ ಜೆಡಿಎಸ್ ನಾಯಕ ಹಾಗೂ ಶಾಸಕ ಸಾ. ರಾ. ಮಹೇಶ್ ಅವರನ್ನು ಭೇಟಿ ಮಾಡಿದ ಬಿಜೆಪಿ ನಾಯಕರು, ದೋಸ್ತಿ ಕುರಿತಂತೆ ಚರ್ಚಿಸಿದರು.

ಈ ನಡುವೆ ಮೈತ್ರಿ ಪ್ರಸ್ತಾಪದ ಕುರಿತು ಮಾಹಿತಿ ನೀಡಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್, "ಮೈತ್ರಿ ಕುರಿತು ಜೆಡಿಎಸ್ ನಾಯಕರೊಂದಿಗೆ ಮಾತುಕತೆ ನಡೆಸಲಾಗಿದೆ. ಅವರು ಸಹ ಅವರ ಪಕ್ಷದ ಹೈಕಮಾಂಡ್ ಜತೆ ಚರ್ಚಿಸಿ ತೀರ್ಮಾನ ಪ್ರಕಟಿಸಲಿದ್ದಾರೆ" ಎಂದರು.

ಮೈಸೂರು ಮೇಯರ್ ಚುನಾವಣೆ; ಕಾಂಗ್ರೆಸ್, ಜೆಡಿಎಸ್ ಮೈತ್ರಿ?

ಮಂಗಳವಾರ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮೈಸೂರಿಗೆ ಆಗಮಿಸಲಿದ್ದಾರೆ. ಸಾ. ರಾ. ಮಹೇಶ್ ಅವರ ಜೊತೆ ಚರ್ಚೆ ನಡೆಸಲಿದ್ದು, ಬಳಿಕ ತೀರ್ಮಾನಕ್ಕೆ ಬರಲಾಗುತ್ತದೆ.

"ನಮಗೆ ಒಂದು ಬಾರಿ ಅವಕಾಶ ಕೊಡಿ ಎಂದು ಜೆಡಿಎಸ್ ಬಳಿ ನಾವು ಮನವಿ ಮಾಡಿದ್ದೇವೆ. ಇನ್ನು ಅವರು ತೀರ್ಮಾನ ಕೈಗೊಳ್ಳಬೇಕು. ಜೆಡಿಎಸ್ ಜತೆ ಮೊದಲಿನಿಂದಲೂ ಋಣಾನುಬಂಧವಿದೆ. ಕಾಂಗ್ರೆಸ್ಸಿನವರೊಂದಿಗೆ ಹೋಗುವುದಿಲ್ಲ. ಹೀಗಾಗಿ ಇಲ್ಲಿ ಚರ್ಚೆ ನಡೆಸಿದ್ದೇವೆ" ಎಂದು ಸಚಿವ ಸೋಮಶೇಖರ್ ಹೇಳಿದ್ದಾರೆ.

ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್

ಸಾ. ರಾ. ಮಹೇಶ್ ಮಾತನಾಡಿ, "ಈ ಬಾರಿ ಮೇಯರ್ ಹುದ್ದೆ ಸಂಬಂಧ ಯಾರ ಜೊತೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಇನ್ನೂ ತೀರ್ಮಾನವಾಗಿಲ್ಲ. ಈ ಬಗ್ಗೆ ಎಚ್. ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು" ಎಂದರು.

ಮೊದಲಿನ ಮಾತಿನಂತೆ ಕಾಂಗ್ರೆಸ್‌ ಅಧಿಕಾರ ಬಿಟ್ಟು ಕೊಡಬೇಕಿತ್ತಲ್ಲವೇ? ಎಂಬ ಪ್ರಶ್ನೆಗೆ ಉತ್ತರಿಸಿದ ಸಾ. ರಾ. ಮಹೇಶ್, "ನಮಗೆ ಜೆಡಿಎಸ್ ಪಕ್ಷವೇ ಅಲ್ಲ. ನಮ್ಮೊಂದಿಗೆ ಹೊಂದಾಣಿಕೆ ಸಾಧ್ಯವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಇಷ್ಟೆಲ್ಲ ಬೆಳವಣಿಗೆಗಳು ಆಗುತ್ತಿವೆ" ಎಂದು ಹೇಳಿದರು.

English summary
Former CM H. D. Kumaraswamy will visit Mysuru today. He will chair meeting of JD(S) members of Mysuru city corporation on the issue of mayor and deputy mayor election scheduled on February 24.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X