ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ಮೇಯರ್ ಚುನಾವಣೆ ದಿನಾಂಕ ಫಿಕ್ಸ್

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜೂನ್ 2: ಮೈಸೂರು ಮಹಾನಗರ ಪಾಲಿಕೆ ಮೇಯರ್ ರುಕ್ಮಿಣಿ ಮಾದೇಗೌಡ ಸದಸ್ಯತ್ವ ರದ್ದು ಹಿನ್ನೆಲೆಯಲ್ಲಿ ಮೇಯರ್ ಸ್ಥಾನಕ್ಕೆ ಇದೇ ಜೂನ್ 11ರಂದು ಚುನಾವಣೆ ನಡೆಸಲು ದಿನಾಂಕ ಫಿಕ್ಸ್ ಮಾಡಲಾಗಿದೆ.

ಮೇಯರ್ ರುಕ್ಮಿಣಿ ಮಾದೇಗೌಡರ ಸದಸ್ಯತ್ವ ರದ್ದುಗೊಳಿಸಿ ಹೈಕೋರ್ಟ್ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ರುಕ್ಮಿಣಿ ಮಾದೇಗೌಡರ ಸದಸ್ಯ ರದ್ದತಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶ ಕೈ ಸೇರಿದ್ದು, ಈ ಬಗ್ಗೆ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರೊಂದಿಗೆ ನಡೆದ ಸಭೆಯಲ್ಲಿ ಜೂನ್ 11ರಂದು ಮೇಯರ್ ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ತಿಳಿಸಿದ್ದಾರೆ.

ಕಾಯ್ದೆಯಲ್ಲಿ ಮತ್ತೆ ಚುನಾವಣೆ ನಡೆಸಲು ಅವಕಾಶ ಇದೆ. ಈ ಬಗ್ಗೆ ಸ್ಪಷ್ಟತೆ ತೆಗೆದುಕೊಂಡು ಈ ತೀರ್ಮಾನ ಮಾಡಲಾಗಿದೆ. ಕೊರೊನಾ ನಿಯಮಗಳನ್ನು ಪಾಲಿಸಿ ಚುನಾವಣೆ ನಡೆಸಲಿದ್ದು, ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ RT-PCR ಟೆಸ್ಟ್ ಮಾಡಿಸಿ ಚುನಾವಣೆ ನಡೆಸುತ್ತೇವೆ ಎಂದರು.

Mysuru Mayor Election On June 11: Commissioner Shilpa Nag

ಮೇಯರ್ ಚುನಾವಣೆ ನಡೆಯುವವರೆಗೂ ಉಪ ಮೇಯರ್ ಅವರೇ ಹಂಗಾಮಿ ಮೇಯರ್ ಆಗಿ ಕಾರ್ಯ ನಿರ್ವಹಿಸಲಿದ್ದು, ಉಪ ಮೇಯರ್ ಅನ್ವರ್ ಬೇಗ್ ಹಂಗಾಮಿ ಮೇಯರ್ ಅಧಿಕಾರ ಚಲಾಯಿಸುತ್ತಾರೆ ಎಂದು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಹೇಳಿದರು.

English summary
Mysuru Mayor Election: The exercise to elect Mayor and Deputy Mayor for Mysuru will be held on June 11.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X