ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ಮೇಯರ್ ಚುನಾವಣೆ; ಬಿಜೆಪಿ-ಜೆಡಿಎಸ್ ಮೈತ್ರಿ ಇಲ್ಲ?

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಫೆಬ್ರವರಿ 24; ಮೈಸೂರು ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು,ಮೈತ್ರಿ ಮಾತುಕತೆ ಕ್ಷಣ-ಕ್ಷಣಕ್ಕೂ ಕುತೂಹಲ ಮೂಡುಸುತ್ತಿದೆ.

ಪಾಲಿಕೆಯ ಅಧಿಕಾರ ಹಿಡಿಯಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಳ್ಳಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಅದು ಸಾಧ್ಯವಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

ಮೈಸೂರು ಮೇಯರ್ ಚುನಾವಣೆ: ಹೈಕೋರ್ಟ್ ನಿಂದ ಗ್ರೀನ್ ಸಿಗ್ನಲ್ಮೈಸೂರು ಮೇಯರ್ ಚುನಾವಣೆ: ಹೈಕೋರ್ಟ್ ನಿಂದ ಗ್ರೀನ್ ಸಿಗ್ನಲ್

ಮೈತ್ರಿಗೆ ಸಮ್ಮತಿ ಇಲ್ಲವೆಂದೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಸುಳಿವು ಕೊಟ್ಟಿದ್ದಾರೆ. ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದ ಬಿಜೆಪಿ ಸದಸ್ಯರ ಭೇಟಿ ಬಳಿಕ ಮಾತನಾಡಿದ ಸಚಿವರು, "ಜೆಡಿಎಸ್‌ನಿಂದ ಯಾವುದೇ ನಿರ್ಧಾರ ಬಂದಿಲ್ಲ. ಹೀಗಾಗಿ ಮತ್ತೊಮ್ಮೆ ಮಾತುಕತೆ ಹೊರಟಿದ್ದೇನೆ" ಎಂದರು.

ಮೈಸೂರು ಮೇಯರ್ ಚುನಾವಣೆ: ದಳಪತಿಗಳೇ ಕಿಂಗ್ ಮೇಕರ್! ಮೈಸೂರು ಮೇಯರ್ ಚುನಾವಣೆ: ದಳಪತಿಗಳೇ ಕಿಂಗ್ ಮೇಕರ್!

Mysuru Mayor Elections No Clarity In BJP And JD(S) Alliance

ಈ ನಡುವೆ ಮಹತ್ವದ ಬೆಳವಣಿಗೆಯಲ್ಲಿ ಮೇಯರ್ ಚುನಾವಣೆ ಅಖಾಡಕ್ಕೆ ಪಕ್ಷೇತರ ಸದಸ್ಯರ ಪ್ರವೇಶವಾಗಿದೆ. ಸ್ವತಂತ್ರವಾಗಿ ಗೆಲುವು ಸಾಧಿಸಿರುವ ಸಮೀವುಲ್ಲಾ ಹಾಗೂ ಕೆ. ವಿ. ಶ್ರೀಧರ್ ಅವರು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ.

ಮೈಸೂರು ಪಾಲಿಕೆಯಲ್ಲಿ ಮೈತ್ರಿ; ಇಂದು ಅಂತಿಮ ಚಿತ್ರಣ! ಮೈಸೂರು ಪಾಲಿಕೆಯಲ್ಲಿ ಮೈತ್ರಿ; ಇಂದು ಅಂತಿಮ ಚಿತ್ರಣ!

ಪಾಲಿಕೆ ಮೇಯರ್ ಚುನಾವಣಾ ಅಖಾಡ ಮತ್ತಷ್ಟು ಕುತೂಹಲ ಕೆರಳಿಸಿದೆ. ಈ ನಡುವೆ ಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಪಾಲಿಕೆ ಸದಸ್ಯೆ ರುಕ್ಮಿಣಿ ಮಾದೇಗೌಡ ಅವರಿಗೆ ಮೇಯರ್ ಸ್ಥಾನ ಹಾಗೂ ಪಕ್ಷೇತರ ಅಭ್ಯರ್ಥಿ ಸಮೀವುಲ್ಲಾ ಅವರಿಗೆ ಉಪ ಮೇಯರ್ ಸ್ಥಾನಕ್ಕೆ ಬೆಂಬಲ ನೀಡಲಿದೆ ಎಂಬ ಸುದ್ದಿಗಳು ಹಬ್ಬಿವೆ.

ಬೆಳಗ್ಗೆ 11 ಗಂಟೆಗೆ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ನಡೆಯಲಿದೆ. ಮೇಯರ್ ಸ್ಥಾನಕ್ಕೆ ರುಕ್ಮಿಣಿ ಮದೇಗೌಡ ಮತ್ತು ಉಪ ಮೇಯರ್ ಸ್ಥಾನಕ್ಕೆ ಪಕ್ಷೇತರ ಅಭ್ಯರ್ಥಿ ಸಮಿವುಲ್ಲಾ ಸ್ಪರ್ಧೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಎಚ್. ಡಿ. ಕುಮಾರಸ್ವಾಮಿ ಜೊತೆ ಸಭೆ ನಡೆಸಿದ ಬಳಿಕ ನಾಮಪತ್ರ ಸಲ್ಲಿಸಲು ಪಾಲಿಕೆ ಕಚೇರಿಗೆ ರುಕ್ಮಿಣಿ ಮಾದೇಗೌಡ ಹೊರಟಿದ್ದಾರೆ. ಉಪ ಮೇಯರ್ ಸ್ಥಾನಕ್ಕೆ ಪಕ್ಷೇತರ ಅಭ್ಯರ್ಥಿ ಸಮಿವುಲ್ಲಾ ನಾಮಪತ್ರ ಹಾಕಲಿದ್ದಾರೆ.

English summary
No clarity in BJP and JD(S) alliance in Mysuru city corporation mayor and deputy mayor election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X