ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking News: ಮೈಸೂರು ಮೇಯರ್ ಚುನಾವಣೆ ಮುಂದೂಡಿಕೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜೂನ್ 10: ಭಾರೀ ಕುತೂಹಲ ಮೂಡಿಸಿರುವ ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಮುಂದೂಡಿಕೆಯಾಗಿದೆ.

ರಾಜ್ಯದಲ್ಲಿ ಹಾಗೂ ಮೈಸೂರು ಜಿಲ್ಲೆಯಲ್ಲಿ ಕೋವಿಡ್- 19 ಮಾರ್ಗಸೂಚಿ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಮೇಯರ್ ಚುನಾವಣೆ ನಡೆಸಲು ಹೈಕೋರ್ಟ್ ತಡೆ ನೀಡಿದೆ.

ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ತಡೆ ಹಿಡಿಯಲು ಕಾಂಗ್ರೆಸ್ ಪಾಲಿಕೆ ಸದಸ್ಯ ಪ್ರದೀಪ್ ಚಂದ್ರ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ಮೇಯರ್ ಆಗಿದ್ದ ರುಕ್ಮಿಣಿ ಮಾದೇಗೌಡ ಅವರು ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ಅವರ ಸದಸ್ಯತ್ವ ರದ್ದುಗೊಳಿಸಲಾಗಿತ್ತು.

Postponed Of Mysuru Mayoral Election

ಮೈಸೂರು ಮೇಯರ್ ಹುದ್ದೆಗೇರಲು ಜೆಡಿಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಇದ್ದು, ಈಗಾಗಲೇ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿವೆ.

ನಿಗದಿಯಂತೆ ಶುಕ್ರವಾರ ಎಲೆಕ್ಷನ್ ನಡೆಯಬೇಕಾಗಿತ್ತು. ಆದರೆ ಲಾಕ್‌ಡೌನ್‌ನಿಂದಾಗಿ ಮುಂದೂಡಿದ್ದು, ಜೂನ್ 21ರ ನಂತರದ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಿ ಎಂದ ಹೈಕೋರ್ಟ್ ಹೇಳಿದೆ.

ಕೋವಿಡ್ ಸಂದರ್ಭದಲ್ಲಿ ಚುನಾವಣೆ ಬೇಡ ಎಂದು ಕಾಂಗ್ರೆಸ್ ಪಾಲಿಕೆ ಸದಸ್ಯ ಪ್ರದೀಪ್ ಚಂದ್ರ ಎಂಬುವರಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್ ನಾಳೆ ನಡೆಯಬೇಕಿದ್ದ ಮೇಯರ್ ಚುನಾವಣೆಗೆ ಬ್ರೇಕ್ ಹಾಕಿದೆ.

ಚುನಾವಣಾ ಆಯೋಗಕ್ಕೆ ಸರಿಯಾದ ಆಸ್ತಿ ವಿವರ ಹಾಗೂ ಜಾತಿ ಪ್ರಮಾಣ ಪತ್ರ ಸಲ್ಲಿಸದ್ದಕ್ಕೆ ರುಕ್ಮಿಣಿ ಮಾದೇಗೌಡ ಅವರ ಸದಸ್ಯತ್ವ ರದ್ದಾಗಿತ್ತು. ಈಗ ಹಂಗಾಮಿ ಮೇಯರ್ ಸ್ಥಾನದಲ್ಲಿ ಉಪಮೇಯರ್ ಅನ್ವರ್ ಬೇಗ್ ಮುಂದುವರಿಯಲಿದ್ದಾರೆ.

English summary
The Karnataka High Court has ordered the postponement of the Mysuru mayor election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X