ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು; ಸಿದ್ದರಾಮಯ್ಯ ಧಿಕ್ಕಾರ ಕೂಗಿದ 'ಕೈ' ಕಾರ್ಯಕರ್ತರು!

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಫೆಬ್ರವರಿ 26: ಮೈಸೂರು ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ ಮುಗಿದ ಬೆನ್ನಲ್ಲೇ ಜಿಲ್ಲಾ ಕಾಂಗ್ರೆಸ್‌ನಲ್ಲಿ ಸಂಚಲನ ಉಂಟಾಗಿದೆ. ಜೆಡಿಎಸ್ ಜೊತೆ ಕಾಂಗ್ರೆಸ್ ಮೈತ್ರಿಗೆ ಅಪಸ್ವರ ಕೇಳಿಬಂದಿದ್ದು, ಕಾಂಗ್ರೆಸ್ ಒಡೆದ ಮನೆ ಎನ್ನುವ ವಿಚಾರ ಮತ್ತೊಮ್ಮೆ ಸಾಬೀತಾಗಿದೆ.

ಶಾಸಕ ತನ್ವೀರ್ ಸೇಠ್‌ಗೆ ಕೆಪಿಸಿಸಿ ವತಿಯಿಂದ ನೋಟಿಸ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ವೀರ್ ಬೆಂಬಲಿಗರು ರೊಚ್ಚಿಗೆದ್ದಿದ್ದಾರೆ. ಸ್ವಂತ ತಮ್ಮದೇ ಪಕ್ಷದ ಮೈಸೂರಿನ ಪ್ರಭಾವಿ ರಾಜಕಾರಣಿ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಿದರು. ಅಲ್ಲದೇ ಸಿದ್ದರಾಮಯ್ಯ ವಿರುದ್ಧ ತನ್ವೀರ್ ಬೆಂಬಲಿಗರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು ಮೇಯರ್ ಚುನಾವಣೆ: ದೋಸ್ತಿಗೆ 'ಕೈ' ನಾಯಕರ ಭಿನ್ನರಾಗ! ಮೈಸೂರು ಮೇಯರ್ ಚುನಾವಣೆ: ದೋಸ್ತಿಗೆ 'ಕೈ' ನಾಯಕರ ಭಿನ್ನರಾಗ!

ತಮ್ಮ ನಿವಾಸದ ಮುಂದೆ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆದ ವೇಳೆ ಅಭಿಮಾನಿಗಳನ್ನು ಸಮಾಧಾನಪಡಿಸಲು ಶಾಸಕ ತನ್ವೀರ್ ಸೇಠ್ ಪ್ರಯತ್ನಪಟ್ಟರು. ಸ್ಥಳೀಯವಾಗಿ ಮೈಸೂರಲ್ಲಿ ಮೈತ್ರಿ ಆಗಿದೆ. ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಶಾಸಕ ತನ್ವೀರ್ ತಂತ್ರ ಉಪಯೋಗಿಸಿ ಪಾಲಿಕೆಯಲ್ಲಿ ಜೆಡಿಎಸ್ ಜತೆ ಮೈತ್ರಿಗೆ ಒಪ್ಪಿಕೊಂಡರು, ಅಂಥವರಿಗೆ ಕೆಪಿಸಿಸಿಯಿಂದ ನೋಟಿಸ್ ಕೊಡಿ ಎಂದು ಸಿದ್ದರಾಮಯ್ಯ ಹೇಳುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು ಮೇಯರ್ ಚುನಾವಣೆ; ಬಿಜೆಪಿಯ ಸುನಂದಾ ಪಾಲನೇತ್ರ ರಾಜೀನಾಮೆ? ಮೈಸೂರು ಮೇಯರ್ ಚುನಾವಣೆ; ಬಿಜೆಪಿಯ ಸುನಂದಾ ಪಾಲನೇತ್ರ ರಾಜೀನಾಮೆ?

 Mysuru MLA Tanveer Sait Followers Protest Against Siddaramaiah

ಸಿದ್ದರಾಮಯ್ಯಗೆ ಸ್ಥಳೀಯವಾಗಿ ಅಷ್ಟೊಂದು ಮಾಹಿತಿ ಇಲ್ಲ, ಕೆಳಮಟ್ಟದ ನಾಯಕರನ್ನ ಸಿದ್ದರಾಮಯ್ಯ ಬೆಳೆಯಲು ಬಿಡುತ್ತಿಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ಅಲ್ಲದೇ ನೋಟಿಸ್ ಕೊಟ್ಟರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ಕೊಟ್ಟರು.

ಮೈಸೂರು ಪಾಲಿಕೆ ನೂತನ ಮೇಯರ್ ಆಗಿ ರುಕ್ಮಿಣಿ ಮಾದೇಗೌಡ ಆಯ್ಕೆ; ಬಿಜೆಪಿಗೆ ಮುಖಭಂಗ ಮೈಸೂರು ಪಾಲಿಕೆ ನೂತನ ಮೇಯರ್ ಆಗಿ ರುಕ್ಮಿಣಿ ಮಾದೇಗೌಡ ಆಯ್ಕೆ; ಬಿಜೆಪಿಗೆ ಮುಖಭಂಗ

ಕಾಂಗ್ರೆಸ್‌ನ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಯಾರೂ ಅಂತಾನೆ ಗೊತ್ತಿಲ್ಲ. ಅವರು ತನ್ವೀರ್ ಸೇಠ್ ಬಗ್ಗೆ ಮಾತಾಡಿರೋದು ಅಸಹ್ಯಕರ. ರಮೇಶ್ ಕುಮಾರ್ ಧೋರಣೆ ಬದಲಿಸಿಕೊಳ್ಳದಿದ್ದರೆ ತಕ್ಕಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

 Mysuru MLA Tanveer Sait Followers Protest Against Siddaramaiah

ಯಾವುದೇ ಕಾರಣಕ್ಕೂ ಜೆಡಿಎಸ್ ಜೊತೆ ಮೈತ್ರಿ ಬೇಡವೇ ಬೇಡ ಅಂದಿದ್ದ ಸಿದ್ದರಾಮಯ್ಯ ಮಾತನ್ನು ವಿರೋಧಿಸಿ ಶಾಸಕ ತನ್ವೀರ್ ಸೇಠ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಜುಗಲ್ಬಂದಿಯಲ್ಲಿ ಮೈಸೂರು ಪಾಲಿಕೆಯಲ್ಲಿ ದೋಸ್ತಿ ರಚನೆಯಾಗಿತ್ತು.

English summary
Congress MLA Tanveer Sait followers protest against Siddaramaiah in Mysuru. After alliance with JD(S) in Mysuru city corporation election Siddaramaiah upset with Mysuru local leaders.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X