ಗೂಟದ ಕಾರು ನೆನಪಾಗಿ ಗೀತಾ ಚುನಾವಣೆಗೆ:ಹೇಳಿಕೆ ಹಿಂಪಡೆದ ಪ್ರತಾಪ್ ಸಿಂಹ

ಮೈಸೂರು, ಮಾರ್ಚ್. 26 : ಮಾತಿನ ಲಹರಿಯಲ್ಲಿ ಮಾಜಿ ಸಚಿವ ದಿವಂಗತ ಮಹದೇವ್ ಪ್ರಸಾದ್‌ ಅವರ ಪತ್ನಿ ಗೀತಾ ಅವರ ವಿರುದ್ಧ ಅಸಂಬದ್ಧ ಹೇಳಿಕೆ ನೀಡಿದ್ದ ಮೈಸೂರು ಸಂಸದ ಪ್ರತಾಪ್‌ ಸಿಂಹ ಇದೀಗ ವಿಷಾದ ವ್ಯಕ್ತ ಪಡಿಸಿ ತಮ್ಮ ಹೇಳಿಕೆಯನ್ನು ಹಿಂಪಡೆದುಕೊಂಡಿದ್ದಾರೆ.

ಗೀತಾ ಮಹದೇವ ಪ್ರಸಾದ್ ಅವರಿಗೆ ಅವರ ಪತಿ ಮಾಜಿ ಸಚಿವ ಮಹದೇವ ಪ್ರಸಾದ್ ಮರಣ ಹೊಂದಿದ ಮರುದಿನ ಗೂಟದ ಕಾರು ನೆನಪಾಗಿದೆ ಎಂದು ಪ್ರತಾಪ್‌ ಸಿಂಹ ಶನಿವಾರ ಹೇಳಿಕೆ ನೀಡಿದ್ದರು.[ಗೂಟದ ಕಾರು ನೆನಪಾಗಿದ್ದಕ್ಕೆ ಗೀತಾ ಚುನಾವಣೆಗೆ ನಿಂತಿದ್ದು: ಪ್ರತಾಪ್ ಸಿಂಹ]

Mysuru MP pratap simha expressed regret controversy statement agaisnt Geeta Mahadevaprasad

ಈ ಬಗ್ಗೆ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್‌ ಸಿಂಹ "ನಿಮ್ಮ ನೋವಿಗೆ ನನ್ನ ಸಹ ಮತವಿದೆ. ಸಾಮನ್ಯವಾಗಿ ರಾಜಕಾರಣಿಗಳು ತೀರಿಕೊಂಡಾಗ ಅವರ ಮನೆಯವರನ್ನು ಚುನಾವಣೆಗೆ ನಿಲ್ಲಿಸಿ ಅನುಕಂಪದ ಆಧಾರದಲ್ಲಿ ಮತ ಪಡೆಯಲಾಗುತ್ತದೆ.

ನೋವಿಗಿಂತ ಅಧಿಕಾರವೇ ಮುಖ್ಯವಾಯಿತೇ ಎಂದು ಪ್ರಶ್ನಿಸಿದ್ದೆ. ಅದರಾಚೆಗೆ ನನ್ನ ಹೇಳಿಕೆಯಲ್ಲಿ ಅರ್ಥವಿಲ್ಲ .ನಿಮಗೆ ನೋವಾಗಿದ್ದರೆ ವಿಷಾದ ವ್ಯಕ್ತ ಪಡಿಸುತ್ತೇನೆ, ಹೇಳಿಕೆಯನ್ನೂ ಹಿಂಪಡೆಯುತ್ತೇನೆ' ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+