ರೈತರನ್ನೇ ದಾರಿ ತಪ್ಪಿಸಿದವರು, ನೌಕರರನ್ನು ದಾರಿ ತಪ್ಪಿಸದೇ ಇರುತ್ತಾರಾ?: ಮೈಸೂರು ಸಂಸದ
ಮೈಸೂರು, ಏಪ್ರಿಲ್ 8: ರೈತರನ್ನೇ ದಾರಿ ತಪ್ಪಿಸಿದವರನ್ನು ತಮ್ಮ ನಾಯಕನಾಗಿ ಮಾಡಿಕೊಂಡಿರುವ ಕೆಎಸ್‌ಆರ್‌ಟಿಸಿ ನೌಕರರು ದಾರಿ ತಪ್ಪದೆ ಇರುತ್ತಾರಾ? ಎಂದು ಸಾರಿಗೆ ನೌಕರರ ಹೋರಾಟದ ನೇತೃತ್ವ ವಹಿಸಿರುವ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದರು.
ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಗುರುವಾರ ಮೈಸೂರು ನಗರದ ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರನ್ನು ದಾರಿ ತಪ್ಪಿಸಿದ ರೈತ ಮುಖಂಡರೊಬ್ಬರು ಈಗ ಸಾರಿಗೆ ನೌಕರರ ದಾರಿ ತಪ್ಪಿಸುತ್ತಿದ್ದಾರೆ. ಆ ಮುಖಂಡನನ್ನು ತಮ್ಮ ನಾಯಕ ಎಂದು ಮಾಡಿಕೊಂಡಿದ್ದೇ ಸಾರಿಗೆ ನೌಕರರ ತಪ್ಪು ಎಂದು ಸಾರಿಗೆ ನೌಕರರ ಮುಷ್ಕರದ ಬಗ್ಗೆ ಸಂಸದ ಪ್ರತಾಪ್ ಸಿಂಹ ಸಿಡಿಮಿಡಿಗೊಂಡರು.

ರೈತರ ದನಿಯಾಗಿದ್ದ ಪ್ರೊ.ನಂಜುಂಡಸ್ವಾಮಿ
ರಾಜ್ಯದಲ್ಲಿ ರೈತರ ದನಿಯಾಗಿದ್ದ ಪ್ರೊ.ನಂಜುಂಡಸ್ವಾಮಿ, ಕೆ.ಎಸ್ ಪುಟ್ಟಣ್ಣಯ್ಯ ಅವರಿದ್ದಾಗ ರೈತ ಮುಖಂಡರುಗಳ ಹೋರಾಟದ ಬಗ್ಗೆ ಗೌರವವಿತ್ತು. ಆದರೆ ಅವರಿಬ್ಬರು ಅಸ್ತಂಗತ ಆದ ನಂತರ ಅಂತಹ ಮುಖ ರೈತ ಹೋರಾಟದಲ್ಲಿಲ್ಲ. ಈಗ ಇರುವವರು ಖಾಲಿ ಹೋರಾಟಗಾರರು ಎಂದು ಟೀಕಿಸಿದ ಪ್ರತಾಪ್ ಸಿಂಹ, ಇಂತಹ ಹೋರಾಟಗಾರರನ್ನು ನಂಬಿದರೆ ನೌಕರರು ಸಹ ದಾರಿ ತಪ್ಪುತ್ತಾರೆ ಎಂದರು.

ಎಲ್ಲಾ ವಿಭಾಗಗಳಲ್ಲಿ ಖಾಸಗೀಕರಣದ ಬಗ್ಗೆ ಚರ್ಚೆ
ನಾವು ಎಲ್ಲಾ ವಿಭಾಗಗಳಲ್ಲಿ ಖಾಸಗೀಕರಣದ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಹೀಗಿರುವಾಗ ಸಾರಿಗೆ ನೌಕರರು ರಾಜ್ಯ ಸರ್ಕಾರ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಈ ರೀತಿಯ ಹೋರಾಟಕ್ಕೆ ಇಳಿಯುವುದು ತಪ್ಪು. ಈ ಹೋರಾಟ ಹೀಗೆ ಮುಂದುವರಿದರೆ ಜನರೇ ಸಾರಿಗೆ ವಿಭಾಗದಲ್ಲೂ ಖಾಸಗೀಕರಣದ ಬಗ್ಗೆ ಧ್ವನಿ ಎತ್ತುತ್ತಾರೆ. ಹೀಗಾಗಿ ಜನರೇ ಖಾಸಗೀಕರಣದ ಈ ಬಗ್ಗೆ ಧ್ವನಿ ಎತ್ತುವಂತೆ ಮಾಡಬೇಡಿ ಎಂದು ಹೇಳಿದರು.

ಸಿದ್ದರಾಮಯ್ಯ ಅವರ ಮಾತನ್ನು ಜನರು ಮೆಚ್ಚಲ್ಲ
ಜಾಸ್ತಿ ಕೆಲಸ ಮಾಡುವ ನಿಮ್ಮ ಮೇಲೆ ಜನ ಪ್ರೀತಿ ಇಟ್ಟಿದ್ದಾರೆ. ಆ ಪ್ರೀತಿ ಕಳೆದುಕೊಳ್ಳಬೇಡಿ. ಎಸ್ಮಾ ಜಾರಿ ಮಾಡಿ ಬಲವಂತವಾಗಿ ಕೆಲಸಕ್ಕೆ ಹಾಜರಾಗುವಂತಹ ಪರಿಸ್ಥಿತಿ ತಂದುಕೊಳ್ಳಬೇಡಿ. ಆ ಮೂಲಕ ಎಸ್ಮಾ ಜಾರಿಗೊಳಿಸುವ ಅನಿರ್ವಾಯತೆಯನ್ನು ಸರ್ಕಾರಕ್ಕೆ ತಂದಿಡಬೇಡಿ ಎಂದು ಮನವಿ ಮಾಡಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈಗ ಬೇಡಿಕೆ ಈಡೇರಿಸಿ ಎನ್ನುತ್ತಿದ್ದಾರೆ. ಆದರೆ ಈ ಕೆಲಸವನ್ನು ಈ ಹಿಂದೆಯೇ ಅವರ ಅಧಿಕಾರವಧಿಯಲ್ಲೇ ಮಾಡಬಹುದಿತ್ತಲ್ಲವೇ? ಎಂದು ಪ್ರಶ್ನಿಸಿದ ಅವರು, ಸಿದ್ದರಾಮಯ್ಯ ಅವರ ಇವತ್ತಿನ ಮಾತನ್ನು ಜನರು ಮೆಚ್ಚಲ್ಲ, ಅವರ ಆತ್ಮಸಾಕ್ಷಿಯೂ ಮೆಚ್ಚಲ್ಲ ಎಂದರು.

ಪ್ರಯಾಣಿಕರಿಂದ ಹೆಚ್ಚಿನ ಹಣ ವಸೂಲಿ ಬೇಡ
ಇದಕ್ಕೂ ಮುನ್ನ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಮೈಸೂರು ನಗರದ ಕೇಂದ್ರಿಯ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಪ್ರತಾಪ್ ಸಿಂಹ, ಪರ್ಯಾಯ ಬಸ್ ವ್ಯವಸ್ಥೆ ಹಾಗೂ ಮುಷ್ಕರದ ಕುರಿತು ಮಾಹಿತಿ ಸಂಗ್ರಹಿಸಿದರು. ಇದೇ ವೇಳೆ ಖಾಸಗಿ ಬಸ್ ಮಾಲೀಕರು ಹಾಗೂ ಚಾಲಕರನ್ನು ಮಾತನಾಡಿಸಿದ ಅವರು, ವೇಗವಾಗಿ ಬಸ್ ಡ್ರೈವಿಂಗ್ ಮಾಡಬೇಡಿ ಹಾಗೂ ಪ್ರಯಾಣಿಕರಿಂದ ಹೆಚ್ಚಿನ ಹಣ ವಸೂಲಿ ಮಾಡಬೇಡಿ. ನಿಮಗೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಅಧಿಕಾರಿಗಳೇ ಮಾಡಿಕೊಡುತ್ತಾರೆ ಎಂದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications