ಜು.25ರಿಂದ ಮೈಸೂರು ಅರಮನೆ ವಿದ್ಯುತ್ ದೀಪಾಲಂಕಾರ ಪುನರಾರಂಭ
ಮೈಸೂರು, ಜುಲೈ 24: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಮೈಸೂರು ಅರಮನೆಯ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ಹಾಗೂ ಅರಮನೆ ವಿದ್ಯುತ್ ದೀಪಾಲಂಕಾರವನ್ನು ಪುನರಾರಂಭಿಸಲು ಅರಮನೆ ಆಡಳಿತ ಮಂಡಳಿ ನಿರ್ಧರಿಸಿದೆ.
ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಕಳೆದ 10/04/2021ರಿಂದ ರಾಜ್ಯ ಸರ್ಕಾರದ ಆದೇಶದಂತೆ ಮೈಸೂರು ಆರಮನೆ ಆವರಣದಲ್ಲಿ ಸಂಜೆ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ಹಾಗೂ ಅರಮನೆಯ ದೀಪಾಲಂಕಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
ಇದೀಗ ಮೈಸೂರು ಸೇರಿದಂತೆ ರಾಜ್ಯಾದ್ಯಂತ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ ಲಾಕ್ಡೌನ್ ನಿಯಮ ಸಡಿಲಗೊಳಿಸಲಾಗಿದ್ದು, ಪ್ರವಾಸಿಗರು ಸಹ ಮೈಸೂರು ಅರಮನೆ ವೀಕ್ಷಣೆಗೆ ಆಗಮಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಜುಲೈ 25ರಿಂದ ಮೈಸೂರು ಅರಮನೆಯ ದೀಪಾಲಂಕಾರವನ್ನು ಪ್ರತಿ ಭಾನುವಾರ ಹಾಗೂ ಸಾರ್ವತ್ರಿಕ ರಜಾ ದಿನಗಳಂದು ಈ ಹಿಂದಿನಂತೆ ರಾತ್ರಿ 7 ರಿಂದ 8 ರವರೆಗೆ ಬೆಳಗಿಸಲು ತೀರ್ಮಾನಿಸಲಾಗಿದೆ.
"ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ಪ್ರತಿ ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 7 ರಿಂದ 8 ಹಾಗೂ ಶನಿವಾರ ಸಂಜೆ 7 ರಿಂದ ರಾತ್ರಿ 9.15ರವರೆಗೆ ಪುನರಾರಂಭಿಸಲಾಗುವುದು," ಎಂದು ಅರಮನೆ ಆಡಳಿತ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಕರ್ನಾಟಕದಲ್ಲಿ ಜೀವ ಬಲಿ ಪಡೆಯುತ್ತಿರುವ ಖಾಸಗಿ ಬಸ್ಗಳು: 6 ವರ್ಷಗಳಲ್ಲಿ 3,823 ಅಪಘಾತ ಪ್ರಕರಣಗಳು ವರದಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications