• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜು.25ರಿಂದ ಮೈಸೂರು ಅರಮನೆ ವಿದ್ಯುತ್ ದೀಪಾಲಂಕಾರ ಪುನರಾರಂಭ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜುಲೈ 24: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಮೈಸೂರು ಅರಮನೆಯ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ಹಾಗೂ ಅರಮನೆ ವಿದ್ಯುತ್ ದೀಪಾಲಂಕಾರವನ್ನು ಪುನರಾರಂಭಿಸಲು ಅರಮನೆ ಆಡಳಿತ ಮಂಡಳಿ ನಿರ್ಧರಿಸಿದೆ.

ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಕಳೆದ 10/04/2021ರಿಂದ ರಾಜ್ಯ ಸರ್ಕಾರದ ಆದೇಶದಂತೆ ಮೈಸೂರು ಆರಮನೆ ಆವರಣದಲ್ಲಿ ಸಂಜೆ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ಹಾಗೂ ಅರಮನೆಯ ದೀಪಾಲಂಕಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಇದೀಗ ಮೈಸೂರು ಸೇರಿದಂತೆ ರಾಜ್ಯಾದ್ಯಂತ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ ಲಾಕ್‌ಡೌನ್ ನಿಯಮ ಸಡಿಲಗೊಳಿಸಲಾಗಿದ್ದು, ಪ್ರವಾಸಿಗರು ಸಹ ಮೈಸೂರು ಅರಮನೆ ವೀಕ್ಷಣೆಗೆ ಆಗಮಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಜುಲೈ 25ರಿಂದ ಮೈಸೂರು ಅರಮನೆಯ ದೀಪಾಲಂಕಾರವನ್ನು ಪ್ರತಿ ಭಾನುವಾರ ಹಾಗೂ ಸಾರ್ವತ್ರಿಕ ರಜಾ ದಿನಗಳಂದು ಈ ಹಿಂದಿನಂತೆ ರಾತ್ರಿ 7 ರಿಂದ 8 ರವರೆಗೆ ಬೆಳಗಿಸಲು ತೀರ್ಮಾನಿಸಲಾಗಿದೆ.

"ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ಪ್ರತಿ ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 7 ರಿಂದ 8 ಹಾಗೂ ಶನಿವಾರ ಸಂಜೆ 7 ರಿಂದ ರಾತ್ರಿ 9.15ರವರೆಗೆ ಪುನರಾರಂಭಿಸಲಾಗುವುದು," ಎಂದು ಅರಮನೆ ಆಡಳಿತ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
The Palace Administration Council has decided to restart the Mysuru Palace's Sound and Light Program and the Electric Lighting, which had been discontinued in the wake of the Corona infection.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X