ಮೈಸೂರಿನಲ್ಲಿ ಭಕ್ತಿಭಾವದ ವೈಕುಂಠ ಏಕಾದಶಿ

ಮೈಸೂರು, ಜನವರಿ 6: ಇಂದು ಎಲ್ಲೆಡೆ ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದೆ. ಭಕ್ತರು ಮುಂಜಾನೆಯೇ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.

ಮೈಸೂರಿನಲ್ಲಿಯೂ ವಿವಿಧ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ ಆಯೋಜಿಸಲಾಗಿತ್ತು. ವೆಂಕಟರಮಣ ದೇಗುಲಗಳಲ್ಲಿ, ಲಕ್ಷ್ಮಿ ನರಸಿಂಹ, ಯೋಗಾ ನರಸಿಂಹ ದೇವಸ್ಥಾನಗಳಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು.

Mysuru People Celebrate Vaikunta Ekadashi

ಟಿ.ನರಸೀಪುರದ ಶ್ರೀ ಗುಂಜಾನರಸಿಂಹ ಸ್ವಾಮಿ ದೇವಾಲಯಕ್ಕೆ ಭಕ್ತ ಸಾಗರ ಹರಿದುಬಂದಿದ್ದು, ವಿವಿಧ ಪುಷ್ಪಾಲಂಕಾರದಿಂದ ಶ್ರೀ ಗುಂಜಾನರಸಿಂಹ ಸ್ವಾಮಿ ಕಂಗೊಳಿಸುತ್ತಿದ್ದಾನೆ. ಬ್ರಾಹ್ಮಿ ಮುಹೂರ್ತದಲ್ಲಿ ದೇವಸ್ಥಾನದಲ್ಲಿ ನಿರ್ಮಿಸಲಾದ ಸ್ವರ್ಗದ ಬಾಗಿಲನ್ನು ಸಹಸ್ರಾರು ಭಕ್ತರು ಪ್ರವೇಶ ಮಾಡಿದ್ದಾರೆ. ಈ ಬಾಗಿಲನ್ನು ಪ್ರವೇಶ ಮಾಡಿದರೆ ಸ್ವರ್ಗ ಪ್ರಾಪ್ತಿಯಾಗಲಿದೆ ಎನ್ನುವುದು ಭಕ್ತರ ನಂಬಿಕೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಲಡ್ಡು ವಿತರಿಸಲಾಗುತ್ತಿದೆ. ವಿಷ್ಣು ಸಹಸ್ರ ನಾಮ ಚಾರಿಟಬಲ್ ಟ್ರಸ್ಟ್ ಸದಸ್ಯರು ಲಡ್ಡು ವಿತರಿಸುತ್ತಿದ್ದಾರೆ. ವಿಶೇಷ ಪೂಜೆ ಪುನಸ್ಕಾರದಿಂದ ದೇಗುಲದಲ್ಲಿ ಸಂಭ್ರಮ ಮನೆ ಮಾಡಿದೆ

ವೈಕುಂಠ ಏಕಾದಶಿಯ ದಿನ ಬಹಳಷ್ಟು ಭಕ್ತರು ಉಪವಾಸವಿದ್ದು, ದೇವರ ಪೂಜೆ ಕೈಗೊಳ್ಳುತ್ತಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+