ಮೈಸೂರು ಅರಮನೆಗೆ ಹುಸಿ ಬಾಂಬ್ ಕರೆ ಬೆದರಿಕೆ
ಮೈಸೂರು, ಜ. 23: ನಗರದಲ್ಲಿರುವ ಅಂಬಾವಿಲಾಸ ಅರಮನೆಯ ಪಾರ್ಕಿಂಗ್ ಪ್ರದೇಶದಲ್ಲಿ ಬಾಂಬ್ ಇದೆ ಎಂದು ದೂರವಾಣಿ ಕರೆ ಬಂದ ಹಿನ್ನೆಲೆಯಲ್ಲಿ ನಗರ ಪೊಲೀಸರು ತಪಾಸಣೆ ನಡೆಸಿದರು.
ಪೊಲೀಸ್ ಇಲಾಖೆಯ ಶ್ವಾನದಳ ಹಾಗೂ ಬಾಂಬ್ ಪತ್ತೆ ದಳ ಸ್ಥಳದಲ್ಲಿ ಪರಿಶೀಲನೆ ನಡೆಸಿದವು. ಆದರೆ, ಯಾವುದೇ ಬಾಂಬ್ ಪತ್ತೆಯಾಗಿಲ್ಲ ಎಂದು ಪೊಲೀಸ್ ಆಯುಕ್ತ ಡಾ. ಎಂ.ಎ. ಸಲೀಂ ತಿಳಿಸಿದ್ದಾರೆ.

ಪರಿಶೀಲನೆಯಲ್ಲಿ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಆದ್ದರಿಂದ ಬಾಂಬ್ ಬೆದರಿಕೆ ಸುಳ್ಳು ಎಂಬುದು ಸ್ಪಷ್ಟವಾಗಿದೆ. ನಾವೀಗ ಬಾಂಬ್ ಇದೆ ಎಂದು ಸುಳ್ಳು ಕರೆ ಮಾಡಿದ ವ್ಯಕ್ತಿಗಾಗಿ ಹುಡುಕುತ್ತಿದ್ದೇವೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.












Click it and Unblock the Notifications