ರೈಲಿನಲ್ಲಿ ನಗದು, ಚಿನ್ನ ಎಗರಿಸುತ್ತಿದ್ದ ಖದೀಮ ಅಂತೂ ಸೆರೆ

ಮೈಸೂರು, ಮೇ 8:ಕೆಲವು ದಿನಗಳಿಂದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರ ನಗದು ಮತ್ತು ಚಿನ್ನಾಭರಣವನ್ನು ದೋಚುತ್ತಿದ್ದ ದರೋಡೆಕೋರನನ್ನು ಮೈಸೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಕಮಲಾನಗರ ನಿವಾಸಿ ಗಂಗಾಧರ ಎಂಬಾತನನ್ನು ಮೈಸೂರು ರೈಲ್ವೆ ಪೊಲೀಸರು ಬಂಧಿಸಿದ್ದು, ಈತನಿಂದ 1.2 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು 4,270 ನಗದನ್ನು ವಶಪಡಿಸಿಕೊಂಡಿದ್ದಾರೆ. ಮೇ 5ರಂದು ರತ್ನಮ್ಮ ಅವರು ಮೈಸೂರಿನಿಂದ ಬೆಂಗಳೂರಿಗೆ ಟಿಪ್ಪು ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಆರೋಪಿ ಗಂಗಾಧರ ವ್ಯಾನಿಟಿ ಬ್ಯಾಗ್‌ನ್ನು ರತ್ನಮ್ಮ ಅವರಿಂದ ಕಿತ್ತುಕೊಂಡು ಪರಾರಿಯಾಗಿದ್ದ. ಈ ಕುರಿತು ಮಹಿಳೆಯು ರೈಲ್ವೆ ಪೊಲೀಸರಿಗೆ ದೂರು ನೀಡಿದ್ದರು.

ಕಳ್ಳನ ಪತ್ತೆಗೆ ರೈಲ್ವೆ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಎಸ್.ಗುಳೇದ ವಿಶೇಷ ತಂಡವೊಂದನ್ನು ರಚಿಸಿದ್ದರು. ಮಂಗಳವಾರ ಬೆಳಗ್ಗೆ ಕಾವೇರಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಆರೋಪಿಯು ಅನುಮಾನಾಸ್ಪದವಾಗಿ ಓಡಾಡುತ್ತಿದ್ದ. ಈ ವೇಳೆ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಕಳ್ಳತನ ನಡೆಸಿರುವುದು ಪತ್ತೆಯಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Mysuru railway police arrested thieves at rail

ಇಬ್ಬರು ಸರಗಳ್ಳರ ಬಂಧನ

ಕಳವು ಮಾಡಿದ್ದ ಚಿನ್ನದ ಸರವನ್ನು ಮಾರಾಟ ಮಾಡಲೆತ್ನಿಸಿದ ಇಬ್ಬರು ಕಳ್ಳರು ವಿ.ವಿ.ಪುರಂ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಶ್ರೀರಂಗಪಟ್ಟಣ ನಿವಾಸಿ ಆಸೀಫ್ (21) ಹಾಗೂ ತುಮಕೂರು ಜಿಲ್ಲೆಯ ಗಿಡಗನಹಳ್ಳಿ ಗ್ರಾಮದ ನಿವಾಸಿ ಜಿ.ಡಿ.ಜಗದೀಶ್ (28) ಬಂಧಿತ ಆರೋಪಿಗಳು. ಇವರಿಂದ 75 ಸಾವಿರ ಮೌಲ್ಯದ ಚಿನ್ನದ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇವರು ಕಳೆದ ವರ್ಷ ಡಿಸೆಂಬರ್‌ನಲ್ಲಿ ವಿಜಯನಗರದ ನಿವಾಸಿ ಸುಮಾ ಎಂಬುವವರಿಂದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸರವನ್ನು ಮಂಗಳವಾರ ಕಾಳಿದಾಸ ರಸ್ತೆಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಮಫ್ತಿಯಲ್ಲಿದ್ದ ಪೊಲೀಸರ ಬಲೆಗೆ ಬಿದ್ದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+