ಮೈಸೂರಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮೈಸೂರು. ಏಪ್ರಿಲ್ 20: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿದ್ದ ಆರೋಪದಡಿ ಯುವಕನೊಬ್ಬನನ್ನು ಎಚ್.ಡಿ ಕೋಟೆ ತಾಲ್ಲೂಕಿನ ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.

ಎಚ್.ಡಿ ಕೋಟೆ ತಾಲ್ಲೂಕಿನ ಹಂಪಾಪುರ ಹೋಬಳಿ ವ್ಯಾಪ್ತಿಯ ಗ್ರಾಮವೊಂದರಲ್ಲಿನ ಅಪ್ರಾಪ್ತೆ ಹಾಗೂ ಯುವಕ ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಯುವಕನು ಅಪ್ರಾಪ್ತೆಯನ್ನು ಮದುವೆಯಾಗುವ ಭರವಸೆಯನ್ನೂ ನೀಡಿದ್ದನು.

ಬಾಲಕಿಯು ಮೂರು ದಿನಗಳ ಹಿಂದೆ ಯುವಕನ ಮನೆಗೆ ಬಂದಿದ್ದು, ಯುವಕನ ತಂದೆಯ ಜೊತೆ ನಿಮ್ಮ ಮಗನ ಜೊತೆ ಮದುವೆ ಮಾಡಿಸುವಂತೆ ದುಂಬಾಲು ಬಿದ್ದಿದ್ದಳು ಎನ್ನಲಾಗಿದೆ.

 Mysuru Rape Case: Accused Arrested

ಬಾಲಕಿಯ ತಂದೆ ಕೂಡ ಹಂಪಾಪುರ ಗ್ರಾಮದಲ್ಲಿ ಪಂಚಾಯಿತಿ ನಡೆಸಿ ಮಗಳ ಮದುವೆ ಮಾಡಿಸಿ ಕೊಡುವಂತೆ ಗ್ರಾಮದ ಮುಖಂಡರಲ್ಲಿ ಮನವಿ ಮಾಡಿದ್ದರು. ಇದಕ್ಕೆ ಯುವಕನ ತಂದೆ ಒಪ್ಪಿರಲಿಲ್ಲ. ಹಾಗಾಗಿ ಬಾಲಕಿಯ ತಂದೆ ಯುವಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

ಈ ಸಂಬಂಧ ತನಿಖೆ ನಡೆಸಿದ ವೃತ್ತ ನಿರೀಕ್ಷಕ ಪುಟ್ಟಸ್ವಾಮಿ, ಬಾಲಕಿ ವಿಚಾರಣೆ ನಡೆಸಿ ಪೋಕ್ಸೋ ಕಾಯ್ದೆಯಡಿ ಯುವಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವಕನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+