MUDA Scam: ಮೈಸೂರಿನಲ್ಲಿ ಬಿಜೆಪಿ, ಕಾಂಗ್ರೆಸ್‌ ಪ್ರತ್ಯೇಕ ಪ್ರತಿಭಟನೆ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದರು. ಪರಿಣಾಮ ನಗರದಲ್ಲಿ ಟ್ರಾಫಿಕ್ ಜಾಮ್‌ನಿಂದ ನಾಗರಿಕರು ಪರಡಾಡುವಂತಾಯಿತು.

ಸಂಸದ ಯದುವೀರ್, ಶಾಸಕ ಟಿ.ಎಸ್.ಶ್ರೀವತ್ಸ, ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ಜಿಲ್ಲಾಧ್ಯಕ್ಷ ಮಹದೇವಸ್ವಾಮಿ ಸೇರಿದಂತೆ ನೂರಾರು ಬಿಜೆಪಿ ಮುಖಂಡರು, ಕಾರ್ಯಕರ್ತರು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾವೇಶಗೊಂಡರು.

Mysuru Sees Traffic Disruption Amid MUDA Scam Protests by BJP Congress

ಈ ವೇಳೆ ಬಿಜೆಪಿ ಮುಖಂಡರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಈ ಸಂದರ್ಭ ಮಾಜಿ ಶಾಸಕ, ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಪೊಲೀಸ್ ಬ್ಯಾರಿಕೇಡ್ ಭೇದಿಸಿ ನುಗ್ಗಲು ಪ್ರಯತ್ನಿಸಿದರು. ಆಗ ಪೊಲೀಸರು ಸುತ್ತುವರಿದು ಬ್ಯಾರಿಕೇಡ್ ಜತೆಗೆ ಅವರನ್ನು ತಳ್ಳಿಕೊಂಡು ಹೋಗಿ ಪೊಲೀಸ್ ಬಸ್ ಹತ್ತಿಸಿದರು.

ಪ್ರತಿಪಕ್ಷದ ನಾಯಕ ಆರ್.ಅಶೋಕ್, ಡಾ.ಅಶ್ವತ್ಥ ನಾರಾಯಣ ಸೇರಿದಂತೆ ಹಲವು ಬಿಜೆಪಿ ನಾಯಕರು ಪೊಲೀಸರ ಕಣ್ಣು ತಪ್ಪಿಸಿ ಗೂಡ್ಸ್ ಆಟೋ ಮೂಲಕ ನಗರಕ್ಕೆ ಆಗಮಿಸಿ ಸ್ಥಳಕ್ಕೆ ಬಂದರು. ಆರ್.ಅಶೋಕ್ ಅವರು ಆಟೋ ಏರಿ ಮಹಾರಾಜ ಕಾಲೇಜು ಮೈದಾನದಿಂದ ಮುಡಾದತ್ತ ಹೊರಟಾಗ ಅವರನ್ನು ಮಹಾರಾಜ ಕಾಲೇಜು ಬಳಿ ಪೊಲೀಸರು ತಡೆದು ವಶಕ್ಕೆ ಪಡೆದರು. ಬಿಜೆಪಿ ಮುಖಂಡರು, ನಾಯಕರನ್ನು ಬಂಧಿಸಿದ ಪೊಲೀಸರು ಬಳಿಕ ಕಾರ್ಯಕರ್ತರನ್ನು ಸ್ಥಳದಿಂದ ಚದುರಿಸಿದರು.

ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿಯಿಂದ ಮೈಸೂರು ನಗರದಲ್ಲಿ ನಡೆದ ಬೃಹತ್ ಪ್ರತಿಭಟನಾ ರ್‍ಯಾಲಿಗೆ ಬಿಜೆಪಿ ನಾಯಕ ಆರ್.ಅಶೋಕ್ ಮತ್ತು ಅಶ್ವತ್ಥ ನಾರಾಯಣ ಗೂಡ್ಸ್ ಆಟೋದಲ್ಲಿ ಆಗಮಿಸುವ ಮೂಲಕ ಪಾಲ್ಗೊಂಡರು. ಮೈಸೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬರುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ಮಂದಿ ನಾಯಕರು ಮತ್ತು ಮುಖಂಡರನ್ನು ಮಾರ್ಗ ಮಧ್ಯೆಯೇ ಪೊಲೀಸರು ವಶಕ್ಕೆ ಪಡೆದು ಮೈಸೂರಿಗೆ ಬರುವುದಕ್ಕೆ ತಡೆಯೊಡ್ಡಿದ್ದರು.

ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50:50 ನಿವೇಶನ ಹಂಚಿಕೆಯ ವಿಷಯದಲ್ಲಿ ಅನಗತ್ಯವಾಗಿ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ತರುವ ಮೂಲಕ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ನಗರ ಮತ್ತು ಗ್ರಾಮಾಂತರ ಕಾಂಗ್ರೆಸ್ ಸಮಿತಿ ವತಿಯಿಂದ ಶುಕ್ರವಾರ ಬೃಹತ್ ಪ್ರತಿಭಟನಾ ಧರಣಿ ನಡೆಯಿತು.

'ಬಿಜೆಪಿ ಹೋರಾಟ ಭ್ರಷ್ಟಾಚಾರದ ಕಡೆ', 'ಕಾಂಗ್ರೆಸ್ ಜನಪರ ಆಡಳಿತದ ವಿರೋಧಿ ಬಿಜೆಪಿ' ಎಂಬ ಭಿತ್ತಿಪತ್ರಗಳನ್ನು ಹಿಡಿದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ನಾಯಕರ ವಿರುದ್ಧ ಧಿಕ್ಕಾರ ಕೂಗಿದರು.

ಬಿಜೆಪಿ ನಾಯಕರ ಮುಡಾ ಮುತ್ತಿಗೆ ಖಂಡಿಸಿ ಕಾಂಗ್ರೆಸ್‌ನಿಂದ ಬಿಜೆಪಿ ನಾಯಕರ ಘೇರಾವ್‌ಗಾಗಿ ಬಿಜೆಪಿ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ತೆರಳಲು ಮುಂದಾದ ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ವೇಳೆ ಪೊಲೀಸರೊಂದಿಗೆ ವಾಗ್ವಾದ ನಡೆಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+