Mysuru: 'ಸ್ವದೇಶ ದರ್ಶನ್' ಯೋಜನೆಗೆ ಸಾಂಸ್ಕೃತಿಕ ನಗರಿ ಮೈಸೂರು ಆಯ್ಕೆ ಆಗಿದ್ದು ಹೇಗೆ!

ಮೈಸೂರು, ಜನವರಿ, 09: ಮೈಸೂರು-ಬೆಂಗಳೂರು ದಶಪಥ ರಸ್ತೆ ಮಾರ್ಚ್‌ನಲ್ಲಿ ಉದ್ಘಾಟನೆ ನೆರವೇರಲಿದೆ. ಈ ನಡುವೆ ಕೇಂದ್ರದ‌ ಮತ್ತೊಂದು ಯೋಜನೆ‌ ಮೈಸೂರಿಗೆ ಸಿಕ್ಕಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್‌ಪ್ರೆಸ್ ವೇ ಕಾರಿಡಾರ್‌ಗೆ ಚಾಲನೆ ನೀಡಲಿದ್ದಾರೆ. ಜೊತೆಗೆ ವಿಮಾನ ನಿಲ್ದಾಣ ರನ್ ವೇ ಕೂಡ ವಿಸ್ತರಣೆ ಆಗುತ್ತಿದೆ. ಈ ನಡುವೆ ಕೇಂದ್ರ ಸರ್ಕಾರದ 'ಸ್ವದೇಶ ದರ್ಶನ್ 2.0' ಯೋಜನೆಗೆ ಸಾಂಸ್ಕೃತಿಕ ನಗರಿ ಮೈಸೂರು ಆಯ್ಕೆಯಾಗಿದ್ದು, ವರ್ಷಪೂರ್ತಿ ದಸರಾ ವಸ್ತು ಪ್ರದರ್ಶನ ನಡೆಸಬೇಕೆಂಬ ಹಂಬಲಕ್ಕೆ ಮತ್ತಷ್ಟು ಬಲ ಸಿಕ್ಕಿದೆ.

ವಸ್ತು ಪ್ರದರ್ಶನದ ವಿಶೇಷತೆ ಏನು?

ಮೈಸೂರಿಗೆ ಆಗಮಿಸುವ ಪ್ರವಾಸಿಗರಿಗೆ ಮತ್ತೊಂದು ಪ್ರವಾಸಿ ತಾಣವಾಗಿ ವಸ್ತು ಪ್ರದರ್ಶನ ರೂಪುಗೊಳ್ಳಲಿದೆ. ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆಗೆ ಬಂದವರು ಪಕ್ಕದಲ್ಲಿಯೇ ಇರುವ ವಸ್ತುಪ್ರದರ್ಶನಕ್ಕೂ ಭೇಟಿ ನೀಡಬಹುದು. ಹೆಚ್ಚಿನ ಅನುದಾನ ಸಿಗಲಿದ್ದು, ಇದರಿಂದ ಮೂಲ ಸೌಲಭ್ಯ ಕಲ್ಪಿಸಲಾಗುವುದು. ಕೇವಲ ಒಂದೆರಡು ಕಿಲೋ ಮೀಟರ್‌ ಅಂತರದಲ್ಲಿಯೇ ಮೃಗಾಲಯ, ಅರಮನೆ ನಂತರ ಮತ್ತೊಂದು ತಾಣವೂ ಸಿಗಲಿದೆ.

Mysuru selected for swadesh darshan scheme, here see details

ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಸ್ವದೇಶ ದರ್ಶನ್ ಯೋಜನೆಯಡಿ ದೇಶದ 19 ರಾಜ್ಯಗಳ 30 ತಾಣಗಳು ಆಯ್ಕೆ ಮಾಡಿದೆ. ಇದರಲ್ಲಿ ಮೈಸೂರಿನ ದಸರಾ ವಸ್ತು ಪ್ರದರ್ಶನ ಕೂಡ ಒಂದು ಎನ್ನುವುದೇ ಹೆಮ್ಮೆಯ ಸಂಗತಿಯಾಗಿದೆ. ಇದಕ್ಕೆ ಮೈಸೂರಿನ ವಸ್ತು ಪ್ರದರ್ಶನ ಅಭಿವೃದ್ಧಿಪಡಿಸುವ ಯೋಜನೆಯನ್ನೂ ಆಯ್ಕೆ ಮಾಡಿಕೊಳ್ಳುವಂತೆ ರಾಜ್ಯ ಪ್ರವಾಸೋದ್ಯಮ ಇಲಾಖೆ ಮುಖಾಂತರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಇದೀಗ ಮೈಸೂರು ಸ್ವದೇಶ ದರ್ಶನ್ ಯೋಜನೆಗೆ ಮೈಸೂರನ್ನು ಆಯ್ಕೆ ಮಾಡಿರುವುದರಿಂದ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ನೀಡಿದಂತಾಗಿದೆ.

ದಸರಾ ವಸ್ತು ಪ್ರದರ್ಶನ ಆಯ್ಕೆ, ಹೇಗೆ?

ಮೈಸೂರಿನ ದಸರಾ ವಸ್ತು ಪ್ರದರ್ಶನವನ್ನು ವರ್ಷದ 365 ದಿನಗಳೂ ನಡೆಯುವಂತಹ ಯೋಜನೆಯನ್ನು ರೂಪಿಸಲಾಗಿದೆ. ವಿಶೇಷವಾಗಿ ಪ್ರವಾಸಿಗರನ್ನು ಆಕರ್ಷಿಸುವ ವಸ್ತು ಪ್ರದರ್ಶನವಾಗಿ ರೂಪಿಸಲು ಪ್ರಸ್ತಾವನೆ ಸಿದ್ಧಪಡಿಸಲು ಕಳೆದ ತಿಂಗಳು ಬೆಂಗಳೂರಿನಲ್ಲಿ ನಡೆದ ಪ್ರವಾಸೋದ್ಯಮ ಇಲಾಖೆ ಹಿರಿಯ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಅಲ್ಲದೆ ಅದಕ್ಕಾಗಿ ಸಮಿತಿ ನೇಮಕ ಮಾಡಿ ಒಂದು ತಿಂಗಳಲ್ಲಿ ಪ್ರಸ್ತಾವ ಸಿದ್ಧಪಡಿಸಿ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಅಂತಿಮವಾಗಿ ಕೇಂದ್ರ ಸರ್ಕಾರ ಈ ಪ್ರಸ್ತಾವನೆಯನ್ನು ಪರಿಶೀಲಿಸಿ ಯೋಜನೆಗೆ ದಸರಾ ವಸ್ತು ಪ್ರದರ್ಶನವನ್ನು ಆಯ್ಕೆ ಮಾಡಿದೆ.

ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ

ಸ್ವದೇಶ ದರ್ಶನ್ 2.0 ಯೋಜನೆಗೆ ಸಾಂಸ್ಕೃತಿಕ ನಗರ ಮೈಸೂರು, ಪಾರಂಪರಿಕ ನಗರ ಹಂಪಿ ಸೇರ್ಪಡೆ ಆಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಯೋಜನೆಯಿಂದ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ಸಿಗುವುದರ ಜೊತೆಗೆ ಸಾಕಷ್ಟು ಉದ್ಯೋಗ ಸೃಷ್ಟಿಯಾಗಲಿದೆ. ಕೇಂದ್ರೀಯ ಸ್ವದೇಶ್ ದರ್ಶನ್ ಯೋಜನೆಯಡಿಯಲ್ಲಿ ಪ್ರವಾಸೋದ್ಯಮ ಸಚಿವಾಲಯವು ಕೇಂದ್ರ ಹಣಕಾಸು ನೆರವನ್ನು ರಾಜ್ಯ ಸರ್ಕಾರಗಳಿಗೆ, ಸರ್ಕಿಟ್‌ಗಳ ಮೂಲಸೌಕರ್ಯ ಅಭಿವೃದ್ಧಿಗೆ ಒದಗಿಸುತ್ತದೆ. ಇದರಿಂದ ಆಯಾ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿಯಾಗಿ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+