ತಮ್ಮ ಫ್ಯಾನ್ಸ್ ವಿರುದ್ಧ ಸಿಡಿದೆದ್ದ ಎಸ್ಪಿ ರವಿ ಡಿ.ಚೆನ್ನಣ್ಣನವರ್
ಮೈಸೂರು, ಸೆಪ್ಟೆಂಬರ್ 4 : ತಮ್ಮ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳನ್ನು ತೆರೆದವರಿಗೆ ಮೈಸೂರು ಜಿಲ್ಲೆಯ ಎಸ್ಪಿ ರವಿ ಡಿ.ಚೆನ್ನಣ್ಣನವರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಫೇಸ್‍ಬುಕ್, ಟ್ವಿಟ್ಟರ್, ಇನ್ ಸ್ಟಾಗ್ರಾಮ್ ನಲ್ಲಿ ನನ್ನ ಹೆಸರಿನಲ್ಲಿ ನಕಲಿ ಖಾತೆಗಳಿದ್ದು, ಆ ವ್ಯಕ್ತಿಗಳ ವಿರುದ್ಧ ಕ್ರಮಗಳನ್ನು ಕೈಗೊಳ್ಳುತ್ತೇನೆ ಎಂದು ಎಸ್ಪಿ ರವಿ ಡಿ.ಚನ್ನಣನವರ್ ತಮ್ಮ ಫೇಸ್ ಬುಕ್ ನಲ್ಲಿ ಸ್ಟೇಟಸ್ ಹಾಕಿದ್ದಾರೆ.

ಫೇಸ್‍ಬುಕ್ ಸ್ಟೇಟಸ್ ನಲ್ಲಿ ಏನಿದೆ?
ಟ್ವಿಟ್ಟರ್, ಫೇಸ್ ಬುಕ್, ಇನ್ ಸ್ಟಾಗ್ರಾಮ್, ವಾಟ್ಸಪ್ ನಲ್ಲಿ ನನ್ನ ಹೆಸರಿನಲ್ಲಿ ನಕಲಿ ಖಾತೆಗಳು ನಿರ್ವಹಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ನನ್ನ ಫೋಟೋ ಮತ್ತು ಹೆಸರನ್ನು ಹಾಕಿ ಖಾತೆ ತೆರೆದಿರುವುದು ಸರಿಯಲ್ಲ.
ಇದು ಕ್ರಿಮಿನಲ್ ಅಪರಾಧ. ಯಾರು ಈ ಖಾತೆಗಳನ್ನು ತೆರೆದು ಓಪನ್ ಮಾಡಿದ್ದಾರೋ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ.
ನಾನು ಜನರ ಸೇವೆ ಮಾಡುವ ಸಾಮಾನ್ಯ ಮನುಷ್ಯನಾಗಿದ್ದು, ನನಗೆ ಯಾವುದೇ ಪ್ರಚಾರದ ಅಗತ್ಯವಿಲ್ಲ. ನಿಮ್ಮ ಸಲಹೆ ಮತ್ತು ಬೆಂಬಲ ನನಗಿರಲಿ. ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.












Click it and Unblock the Notifications