ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆನೆದಾಳಿ ನಿಯಂತ್ರಣಕ್ಕೆ ನಾಗರಹೊಳೆಯಲ್ಲಿ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜೂನ್ 22: ಕಾಡಿನಿಂದ ಬರುವ ಆನೆಗಳ ದಾಳಿ ನಿಯಂತ್ರಣಕ್ಕಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅಳವಡಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪರಿಶೀಲಿಸಿದರು.

ಮೈಸೂರು ಆಷಾಢ ಮಾಸದಲ್ಲಿ ಚಾಮುಂಡೇಶ್ವರಿ ದರ್ಶನಕ್ಕೆ ಹೊಸ ನಿಯಮಮೈಸೂರು ಆಷಾಢ ಮಾಸದಲ್ಲಿ ಚಾಮುಂಡೇಶ್ವರಿ ದರ್ಶನಕ್ಕೆ ಹೊಸ ನಿಯಮ

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಹಳ್ಳಿ ವಲಯ ವ್ಯಾಪ್ತಿಯಲ್ಲಿ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅನ್ನು ಅಳವಡಿಕೆ ಮಾಡಲಾಗಿದೆ. ರೈಲ್ವೆ ಹಳಿ ಬ್ಯಾರಕೇಡ್ ಗಳನ್ನೇ ಆನೆಗಳು ದಾಟಿ ಬರುವುದರಿಂದ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅಳವಡಿಕೆ, ಆನೆಗಳ ತಡೆಗೆ ಹೇಗೆ ಸಹಕಾರಿಯಾಗಲಿದೆ ಎಂಬುದನ್ನು ಸಚಿವರಿಗೆ ಅರಣ್ಯ ಅಧಿಕಾರಿಗಳು ಪ್ರಾತ್ಯಕ್ಷಿಕೆ ಮೂಲಕ‌ ವಿವರಿಸಿದರು.

Mysuru: Steel wire rope barricade in nagarahole: Minister ST Somashekhar review

ರಾಜ್ಯದಲ್ಲಿ ಇದೇ ಪ್ರಥಮ ಬಾರಿಗೆ ರೋಪ್ ಬ್ಯಾರಿಯರ್ ಅಳವಡಿಕೆ

ರೈಲ್ವೆ ಬ್ಯಾರಿಕೇಡ್ ಗೆ ಹಳಿಗಳ ಕೊರತೆ ಹಾಗೂ ದುಬಾರಿ ವೆಚ್ಚ ತಗುಲುವುದರಿಂದ ರಾಜ್ಯದಲ್ಲಿ ಇದೇ ಪ್ರಥಮ ಬಾರಿಗೆ ರೋಪ್ ಬ್ಯಾರಿಯರ್ ಅಳವಡಿಸಲಾಗಿದೆ. 13 ಅಡಿ ಉದ್ದದ 1.5 ಟನ್ ತೂಕದ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಸಿಮೆಂಟ್ ಕಂಬಗಳನ್ನು ನಿರ್ಮಿಸಿ ಅದನ್ನು ಭೂಮಿಯಿಂದ 5 ಅಡಿ ಆಳದಲ್ಲಿ ನೆಡಲಾಗುತ್ತದೆ. ನಾಗರಹೊಳೆಯಲ್ಲಿ ಪ್ರಥಮ ಪ್ರಯೋಗ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಇತ್ತೀಚಿನ ದಿನಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ಕಾಡಿನಿಂದ ನಾಡಿಗೆ ಆನೆಗಳ ದಾಳಿ ತಡೆಗೆ ರೈಲ್ವೆ ಹಳಿಗಳ ಬ್ಯಾರಿಕೇಡ್, ಸೋಲಾರ್ ತಂತಿ ಬೇಲಿ ಸೇರಿದಂತೆ ಹಲವು ಕ್ರಮಗಳನ್ನು ಅರಣ್ಯ ಇಲಾಖೆ ಕೈಗೊಂಡಿದೆ. ಈಗ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅಳವಡಿಕೆ ಮಾಡಿದ್ದು ಇದರಿಂದ ಆನೆಗಳು ನಾಡಿಗೆ ಆಗಮಿಸುವುದನ್ನು ತಡೆಯಲು ಸಹಕಾರಿಯಾಗುತ್ತದೆ ಎಂದರು.

Mysuru: Steel wire rope barricade in nagarahole: Minister ST Somashekhar review

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಹಳ್ಳಿ ವಲಯ ವ್ಯಾಪ್ತಿಯಲ್ಲಿ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ. ಇದೊಂದು ಹೊಸತನದ ಪ್ರಯೋಗವಾಗಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

English summary
The Steel Wire Rope Barricade was installed at the Nagarahole National Park for the first time in the state for control of wild elephants, inspected by District Superintendent ST Somashekhar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X