• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರಿನಲ್ಲಿ ಈ ಬಾರಿ 25.09 ಲಕ್ಷ ಮಂದಿಗೆ ಮತದಾನದ ಹಕ್ಕು

|

ಮೈಸೂರು, ಏಪ್ರಿಲ್ 10:ತ್ವರಿತ ಪರಿಷ್ಕರಣೆ ನಂತರ ಮೈಸೂರು ಜಿಲ್ಲೆಯಲ್ಲಿ ಈಗ ಒಟ್ಟು 25,09,232 ಲಕ್ಷ ಮತದಾರರು ಅಂತಿಮ ಪಟ್ಟಿಯಲ್ಲಿದ್ದಾರೆ.ಮೈಸೂರು ಜಿಲ್ಲೆಯಲ್ಲಿ 30 ಸಾವಿರಕ್ಕೂ ಅಧಿಕ ಮಂದಿ ಮತದಾರರ ಪಟ್ಟಿಯಲ್ಲಿ ಹೊಸದಾಗಿ ಸೇರ್ಪಡೆಯಾಗಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಜಿಲ್ಲೆಯಲ್ಲಿ 12.55 ಲಕ್ಷ ಪುರುಷರು, 12.53 ಲಕ್ಷ ಮಹಿಳೆಯರು ಹಾಗೂ 188 ಮಂದಿ ಮತದಾರರ ಪಟ್ಟಿಯಲ್ಲಿದ್ದು, ಏಪ್ರಿಲ್ 18 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಈ ಪೈಕಿ 18 ರಿಂದ 19 ವರ್ಷ ವಯಸ್ಸಿನ ಯುವ ಮತದಾರರು ಹಾಗೂ 19,922 ಮಂದಿ ವಿಕಲಚೇತನರು ಈ ಬಾರಿ ಮತ ಚಲಾಯಿಸುವರು.

ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ 5.10 ಕೋಟಿ ಮತದಾರರು

ಈಗಾಗಲೇ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಸ್ಥಗಿತಗೊಂಡಿದ್ದು, ಅಂತಿಮ ಪಟ್ಟಿ ಸಿದ್ಧತಾ ಕಾರ್ಯ ನಡೆಯುತ್ತಿದೆ. ಮುದ್ರಿತವಾಗಿರುವ ಎಪಿಕ್ ಕಾರ್ಡ್ ಗಳನ್ನು ಮತದಾರರ ಮನೆಗಳಿಗೆ ತಲುಪಿಸಲಾಗುತ್ತಿದ್ದು, 5 ಬೂತ್ ಗಳಿಗೊಬ್ಬರಂತೆ ಸೆಕ್ಟರ್ ಆಫೀಸರ್ ಗಳನ್ನು ನೇಮಕ ಮಾಡಲಾಗಿದೆ.

ಬೂತ್ ಮಟ್ಟದ ಅಧಿಕಾರಿಗಳು ಮೂಲಕ ಮನೆ-ಮನೆಗೆ ಎಪಿಕ್ ಕಾರ್ಡ್ ಗಳನ್ನು ತಲುಪಿಸುವ ವ್ಯವಸ್ಥೆ ಸಹ ಮಾಡುತ್ತಿದ್ದಾರೆ. ಒಂದು ವೇಳೆ ಎಪಿಕ್ ಕಾರ್ಡ್ ತಲುಪದಿದ್ದರೂ, ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಇತರ ಯಾವುದಾದರೂ ಭಾವಚಿತ್ರವಿರುವ ಗುರುತಿನ ಚೀಟಿಯೊಂದಿಗೆ ತೆರಳಿ ಮತ ಚಲಾಯಿಸಬಹುದಾಗಿದೆ ಎಂದು ಚುನಾವಣಾಧಿಕಾರಿ ಅಭಿರಾಮ್ ಶಂಕರ್ ತಿಳಿಸಿದ್ದಾರೆ.

ಮೈಸೂರು ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟ

410 ಜನರಿಂದ ಅರ್ಜಿ ಸಲ್ಲಿಕೆ

ಈಗಾಗಲೇ ಜಿಲ್ಲೆಯಲ್ಲಿ 410 ಸರಕಾರಿ ನೌಕರರು ಚುನಾವಣೆ ಕರ್ತವ್ಯಕ್ಕೆ ವಿನಾಯಿತಿ ನೀಡುವಂತೆ ಚುನವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಅದರಲ್ಲಿ 270 ಅರ್ಜಿಗಳು ಸ್ವೀಕೃತಗೊಂಡಿದ್ದು, 140 ಮಂದಿ ಅರ್ಜಿ ತಿರಸ್ಕೃತವಾಗಿವೆ. ಬಹುತೇಕ ಶಿಕ್ಷಕರಿಂದಲೇ ಹೆಚ್ಚಿನ ವಿನಾಯಿತಿ ಪತ್ರಗಳು ಬಂದಿವೆ.

ಕರ್ನಾಟಕದ ಲೋಕಸಭಾ ಸದಸ್ಯರಲ್ಲಿ ಯಾರು ಎಷ್ಟು ಓದಿದ್ದಾರೆ?

ಅಲ್ಲದೇ, ನಗರದಲ್ಲಿ ಇದೀಗ ವೈದ್ಯಕೀಯ ಪ್ರಮಾಣಪತ್ರ ಮಾಡಿಕೊಡುವ ಬ್ಯುಸಿನೆಸ್ ಶುರುವಾಗಿದೆ. ಇದನ್ನೆಲ್ಲಾ ಗಮನಿಸಿರುವ ಜಿಲ್ಲಾ ಆರೋಗ್ಯಾಧಿಕಾರಿಗಳು ಎಲ್ಲಾ ಅರ್ಜಿಗಳನ್ನು ಸೂಕ್ತವಾಗಿ ಪರಿಶೀಲಿಸಿ, ತುರ್ತು ಅಗತ್ಯತೆ ಹಾಗೂ ಅನಾರೋಗ್ಯ ಸಮಸ್ಯೆ ಇರುವವರಿಗೆ ವಿನಾಯಿತಿ ನೀಡುತ್ತಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Lok Sabha Elections 2019:In Mysuru this time, 25.09 lakh voters will vote for loksabha election.More than 30,000 voters newly added to the list.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more