ಮೈಸೂರು-ತಮಿಳುನಾಡು ಕೆಎಸ್ ಆರ್ ಟಿಸಿ ಬಸ್ ಸಂಚಾರ ಸ್ಥಗಿತ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು. ಕಿಡಿಗೇಡಿಗಳು ಕರ್ನಾಟಕ ಬಸ್ ಮೇಲೆ ಕಲ್ಲು ತೂರಿದ್ದಾರೆ. ಇದರಿಂದ ಮೈಸೂರು-ತಮಿಳುನಾಡು ಬಸ್ ಸಂಚಾರ ಸ್ಥಗಿತಗೊಳಿಸಿದೆ.

ಮೈಸೂರು, ಡಿಸೆಂಬರ್. 05 : ತಮಿಳುನಾಡಿನಲ್ಲಿ ಕರ್ನಾಟಕದ ಬಸ್ಸುಗಳಿಗೆ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ತಮಿಳುನಾಡಿಗೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದ್ದರಿಂದ ಮೈಸೂರಿನಿಂದ ತಮಿಳುನಾಡಿಗೆ ಹೊರಡುವ ಬಸ್​ ಸಂಚಾರವನ್ನು ಕೂಡ ಸ್ಥಗಿತಗೊಳಿಸಲಾಗಿದೆ.

ಜಯಲಲಿತಾ ಅವರ ಆರೋಗ್ಯದಲ್ಲಿ ಏರುಪೇರಾಗಿರುವುದರಿಂದ ಕ್ರುದ್ಧರಾಗಿರುವ ಕೆಲವು ದುಷ್ಕರ್ಮಿಗಳು ನಿನ್ನೆ ರಾತ್ರಿ ಕರ್ನಾಟಕದ ಬಸ್ಸುಗಳ ಮೇಲೆ ಕಲ್ಲು, ಬೀಯರ್ ಬಾಟಲಿಗಳನ್ನು ತೂರಿದ್ದಾರೆ.

Mysuru to Tamil Nadu Bus Services Suspends After Incident of Stone Pelting

ಈ ಕಾರಣದಿಂದ ಮುಂಜಾಗ್ರತಾ ಕ್ರಮಾವಾಗಿ ತಾತ್ಕಾಲಿಕವಾಗಿ ಬಸ್ಸುಗಳ ಸಂಚಾರವನ್ನು ಮೈಸೂರಿನಿಂದ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.

ಪರಿಸ್ಥಿತಿಯನ್ನು ಅವಲೋಕಿಸಿ ಸಂಚಾರವನ್ನು ಪುನಾರಂಭಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಕೆಎಸ್ಸಾರ್ಟಿಸಿ ಭದ್ರತಾ ವಿಭಾಗದ ಮುಖ್ಯಸ್ಥರು ತಿಳಿಸಿದ್ದಾರೆ.

ಚರಂಡಿಗೆ ಬಿದ್ದು ವ್ಯಕ್ತಿ ಸಾವು: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೋರ್ವ ಚರಂಡಿಯೊಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಸಿದ್ದನಾಯಕ(42) ಎಂದು ಗುರುತಿಸಲಾಗಿದೆ.

ಈತ ಕುಡಿದ ನಶೆಯಲ್ಲಿ ಚರಂಡಿಗೆ ಬಿದ್ದಿದ್ದು, ಅಲ್ಲಿಯೇ ಮೃತ ಪಟ್ಟಿದ್ದಾನೆ. ಮೂಲತಃ ಹುಣಸೂರಿನ ಸ್ಟೋರ್ ಬೀದಿಯ ನಿವಾಸಿಯಾದ ಈತ, ಶನಿವಾರ ರಾತ್ರಿ ಮದ್ಯಪಾನ ಮಾಡಿ ಮನೆಗೆ ತೆರಳಿ ಊಟ ಮುಗಿಸಿದ್ದಾನೆ. ಬಳಿಕ ಚರಂಡಿ ಪಕ್ಕದಲ್ಲಿದ್ದ ಕಟ್ಟೆ ಮೇಲೆ ಕುಳಿತುಕೊಂಡಿದ್ದು, ಆಯತಪ್ಪಿ ಚರಂಡಿಗೆ ಬಿದ್ದಿದ್ದಾನೆ.

ಈ ವೇಳೆ ಉಸಿರಾಡಲು ಸಾಧ್ಯವಾಗದ ಹಿನ್ನಲೆಯಲ್ಲಿ ಚರಂಡಿಯೊಳಗೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಹುಣಸೂರಿನ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+