ಗಾಯಾಳು ಜೀವ ಉಳಿಸಿದ ಮೈಸೂರು ಪೊಲೀಸ್
ಮೈಸೂರು, ಜೂನ್ 26: ಗಾಯಗೊಂಡು ನರಳಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರೇ ಪೊಲೀಸ್ ವಾಹನದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ರಕ್ಷಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಜೆ.ಎಲ್.ಬಿ. ರಸ್ತೆಯ ಮುಡಾ ಸರ್ಕಲ್ ಬಳಿ ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ನರಳಾಡುತ್ತಿದ್ದರು. ತಕ್ಷಣವೇ ಗಾಯಾಳು ಉಮಾಶಂಕರ್ ಅವರನ್ನು ಕೆ.ಆರ್. ಸಂಚಾರಿ ಇನ್ಸ್ ಪೆಕ್ಟರ್ ಶಿವಕುಮಾರ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಆಂಬ್ಯುಲೆನ್ಸ್ ಗೆ ಕರೆ ಮಾಡಿದರೂ ಸಕಾಲಕ್ಕೆ ಬಾರದ ಕಾರಣ ತಮ್ಮ ಇಂಟರ್ ಸೆಪ್ಟರ್ ವಾಹನದಲ್ಲಿ ಗಾಯಾಳುವನ್ನು ಕೂರಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಕಾಲಕ್ಕೆ ಚಿಕಿತ್ಸೆ ದೊರೆತ ಕಾರಣ ಉಮಾಶಂಕರ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.












Click it and Unblock the Notifications