ಮೈಸೂರು ವಿವಿಯಿಂದ ಆರಂಭವಾಗಲಿದೆ ಫಾರ್ಮಸಿ, ಎಂಜನಿಯರಿಂಗ್ ಕಾಲೇಜು

ಮೈಸೂರು, ಆಗಸ್ಟ್ 24: ಮೈಸೂರು ವಿಶ್ವವಿದ್ಯಾಲಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಎಂಜಿನಿಯರಿಂಗ ಹಾಗೂ ಫಾರ್ಮಸಿ ಕಾಲೇಜು ಆರಂಭಿಸಲು ಮೈಸೂರು ವಿವಿ ಸಿಂಡಿಕೇಟ್ ಸಭೆ ಅನುಮೋದನೆ ನೀಡಿದೆ.

ಈ ಕುರಿತು ಮಾಹಿತಿ ನೀಡಿದ ಮೈಸೂರು ವಿವಿ ಕುಲಪತಿ ಹೇಮಂತ್ ಕುಮಾರ್, "ವಿದ್ಯಾಲಯದ ವ್ಯಾಪ್ತಿಯಲ್ಲೇ ಸುಮಾರು 10 ಎಕರೆ ಪ್ರದೇಶದಲ್ಲಿ ಎಂಜಿನಿಯರಿಂಗ್ ಮತ್ತು ಫಾರ್ಮಸಿ ಕಾಲೇಜು ಆರಂಭಿಸಲು ತೀರ್ಮಾನಿಸಲಾಗಿದೆ. ಮಾನಸ ಗಂಗೋತ್ರಿ ಕ್ಯಾಂಪಸ್ ನ ಸ್ಕೂಲ್ ಆಫ್ ಆರ್ಕಿಟೆಕ್ಟ್ ಸಮೀಪದ ಜಾಗವನ್ನು ಇದಕ್ಕಾಗಿ ಗುರುತಿಸಲಾಗಿದೆ. ಪ್ರವೇಶಾತಿಯಲ್ಲಿ ಶೇ.50 ರಷ್ಟು ಸೀಟುಗಳನ್ನು ಕರ್ನಾಟಕದ ವಿದ್ಯಾರ್ಥಿಗಳಿಗೆ, ಉಳಿದ ಶೇ.50ರಷ್ಟನ್ನು ರಾಷ್ಟ್ರೀಯ ಪರೀಕ್ಷೆ ಮೂಲಕ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ನೀಡಲು ತೀರ್ಮಾನಿಸಿದೆ" ಎಂದರು.

Mysuru university syndicate members approved open engineering college

ನೂತನ ಕಾಲೇಜು ನಿರ್ಮಾಣಕ್ಕೆ ತಜ್ಞರ ಸಮಿತಿ ರಚಿಸಲಾಗಿದೆ. ಅವರಿಂದ ವರದಿ ಪಡೆದು ಬಳಿಕ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು. 5 ವಿಭಾಗಗಳಲ್ಲಿ ಎಂಜಿನಿಯರಿಂಗ್ ಕೋರ್ಸ್ ಆರಂಭಿಸಲು ಉದ್ದೇಶಿಸಲಾಗಿದೆ. ಮಾಮೂಲಿ ವಿಭಾಗಗಳ ಬದಲಿಗೆ ಪ್ರಸ್ತುತ ಚಾಲ್ತಿಯಲ್ಲಿರುವ, ಬೇಡಿಕೆಯಲ್ಲಿರುವ ವಿಷಯಗಳಿಗೆ ಸಂಬಂಧಿಸಿದ ಕೋರ್ಸ್ ಆರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

Mysuru university syndicate members approved open engineering college

ಮೈಸೂರು ವಿವಿ ಆಡಳಿತ ವ್ಯವಸ್ಥೆಯನ್ನು ಪೇಪರ್ ರಹಿತವಾಗಿಸುವ ನಿಟ್ಟಿನಲ್ಲಿ ಇ-ಮೀಟಿಂಗ್ ಪದ್ಧತಿ ಜಾರಿಗೆ ತರಲು ಚಿಂತಿಸಲಾಗಿದೆ. ಮುಂದಿನ ಸಭೆಗಳಲ್ಲಿ ಟ್ಯಾಲ್, ಲ್ಯಾಪ್ ಟಾಪ್ ಗಳ ಮೂಲಕವೇ ಸಂಪರ್ಕ ಸಾಧಿಸಿ ಸಭೆಯ ನಡಾವಳಿ ದಾಖಲಿಸಲಾಗುತ್ತದೆ. ಅಲ್ಲದೇ ವಿವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪ್ಲೆಸ್ಮೆಂಟ್ ತರಬೇತಿ ಕೇಂದ್ರ ಆರಂಭಿಸಲು ವಿಶ್ವವಿದ್ಯಾನಿಲಯ ಮುಂದಾಗಿದೆ. ಈ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರುವಂತೆ ತರಬೇತಿ ಕೇಂದ್ರಗಳನ್ನು ಆರಂಭಿಸಲಾಗುತ್ತದೆ ಎಂಬ ಮಾಹಿತಿಯನ್ನೂ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+