2020ರ ಮೈಸೂರು ವಿವಿ ಶತಮಾನೋತ್ಸವಕ್ಕೆ ಪ್ರಧಾನಿ ಮೋದಿಗೆ ಆಹ್ವಾನ

ಮೈಸೂರು, ಜುಲೈ 18: 2020ರಂದು ನಡೆಯಲಿರುವ ಮೈಸೂರು ವಿವಿ ಘಟಿಕೋತ್ಸವಕ್ಕೆ ಪ್ರಧಾನಿ ಮೋದಿಯವರನ್ನು ಮೈಸೂರು ವಿವಿ ಕುಲಪತಿ ಪ್ರೊ. ಹೇಮಂತ್ ಕುಮಾರ್ ಆಹ್ವಾನಿಸಿದ್ದಾರೆ.

ನವದೆಹಲಿಯಲ್ಲಿರುವ ಪ್ರಧಾನಿ ಕಚೇರಿಗೆ ಭೇಟಿ ನೀಡಿದ ಅವರು, ನರೇಂದ್ರ ಮೋದಿಯವರಿಗೆ ವಿವಿಯ ಶತಮಾನೋತ್ಸವದ ಘಟಿಕೋತ್ಸವ ಸಮಾರಂಭಕ್ಕೆ ಸಾಕ್ಷಿಯಾಗಬೇಕೆಂದು ಅಧಿಕೃತವಾಗಿ ಆಹ್ವಾನ ನೀಡಿದರು.

ಆಹ್ವಾನ ಸ್ವೀಕರಿಸಿದ ಮೋದಿ ಅವರು ತಮ್ಮ ಕಾರ್ಯಕ್ರಮದ ಒತ್ತಡವನ್ನು ಗಮನಿಸಿ ಘಟಿಕೋತ್ಸವಕ್ಕೆ ಆಗಮಿಸುವ ಸಾಧ್ಯತೆ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ನೂರು ವರ್ಷಗಳನ್ನು ಪೂರೈಸಿದ ಮೈಸೂರು ವಿಶ್ವವಿದ್ಯಾಲಯದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

Mysuru University Vice Chancellor invited modi to vv centenary

ಇದೇ ವೇಳೆ ಹೇಮಂತ್ ಕುಮಾರ್ ಅವರು ವಿವಿಯ ಹಿನ್ನೆಲೆ, ಕಾರ್ಯವೈಖರಿಯ ಬಗ್ಗೆ ಮಾಹಿತಿ ನೀಡಿದರು. ಇನ್ಸ್ಟಿಟ್ಯೂಟ್ ಆಫ್ ಮಿಸೆಲ್ಸ್ ಪ್ರಾಜೆಕ್ಟ್ ಗೆ ಮೈಸೂರು ವಿಶ್ವವಿದ್ಯಾನಿಲಯವನ್ನು ಆಯ್ಕೆ ಮಾಡುವಂತೆ ಮನವಿಯನ್ನೂ ಮಾಡಿದರು. ಈ ಯೋಜನೆಯಡಿ ಈಗಾಗಲೇ ಅನೇಕ ವಿವಿಗಳಿಗೆ ಕೇಂದ್ರ ಸರ್ಕಾರದ ವತಿಯಿಂದ ನೆರವು ನೀಡಲಾಗುತ್ತಿದ್ದು, ಮೈಸೂರು ವಿವಿಗೂ ಸಾವಿರ ಕೋಟಿ ರೂಪಾಯಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದನ್ನು ಪರಿಶೀಲಿಸಿ ಅನುದಾನ ನೀಡುವಂತೆ ಕೋರಿಕೊಂಡರು.

ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಹಾಗೂ ಸಂಸದ ತೇಜಸ್ವಿ ಸೂರ್ಯ ಕೂಡ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+