ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ಕಾರ್ಮಿಕ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ರಾಜನಬಿಳುಗೂಲಿ ಗ್ರಾಮದಲ್ಲಿ ನಡೆದಿದೆ.

ಮಂಡ್ಯ, ಏಪ್ರಿಲ್ 5: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ರಾಜನಬಿಳುಗೂಲಿ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ರಾಜನಬಿಳುಗೂಲಿ ಗ್ರಾಮದ ವೀರರಾಜ ಅರಸ್‍ರವರ ಪುತ್ರ ಕೃಷ್ಣರಾಜ ಅರಸ್(35) ಸಿಡಿಲು ಬಡಿದು ಮೃತಪಟ್ಟ ದುರ್ದೈವಿ. ಈತ ಇದೇ ಗ್ರಾಮದ ಈಶ್ವರಪ್ಪ ಎಂಬುವವರ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದು, ಮಳೆ ಬಂದ ಸಂದರ್ಭದಲ್ಲಿ ಸಮೀಪದಲ್ಲಿದ್ದ ಮರದ ಕೆಳಗೆ ನಿಂತಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.[ಉಪಚುನಾವಣೆ: ಕಾಂಗ್ರೆಸ್ ಗೆ ಸಾಹಿತಿ, ಕಲಾವಿದರ ಬೆಂಬಲ]

Mysuru: Worker dies after lightning strike

ಇವರೊಡನೆ ಕೆಲಸ ಮಾಡುತ್ತಿದ್ದ ಜಮೀನಿನ ಮಾಲೀಕರಾದ ಈಶ್ವರಪ್ಪರವರ ಸಹ ಸಿಡಿಲಿಗೆ ಸಿಕ್ಕಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಪಿರಿಯಾಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಲಾಗಿದೆ.

ಕಾರ್ಮಿಕ ಸಿಡಿಲು ಬಡಿದು ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ತಹಸೀಲ್ದಾರ್ ಮಹೇಶ್, ಉಪತಹಸೀಲ್ದಾರ್ ಕುಬೇರ್, ಶಿರಸ್ತೇದಾರ್ ಪ್ರಕಾಶ್ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಕೊಡಿಸುವುದಾಗಿ ಅವರು ಭರವಸೆಯನ್ನೂ ನೀಡಿದ್ದಾರೆ.[ಮತ ಕೇಳುವ ನೈತಿಕತೆ ಯಡಿಯೂರಪ್ಪನವರಿಗೆಲ್ಲಿದೆ ?: ಸಿದ್ದರಾಮಯ್ಯ]

ಇನ್ನು ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+