ಮೈಸೂರಿನಲ್ಲಿ ಬರದ ನಡುವೆಯೇ ರೆಸಾರ್ಟ್ ರಾಜಕಾರಣ!
ಮೈಸೂರು, ಮೇ 02 : ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ ಅಧಿಕಾರ ಹಿಡಿಯಲು ರೆಸಾರ್ಟ್ ರಾಜಕೀಯ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಅಧಿಕಾರದ ಗದ್ದುಗೆ ಏರಲು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. 22 ಸದಸ್ಯ ಬಲ ಹೊಂದಿರುವ ಕಾಂಗ್ರೆಸ್ ಸದಸ್ಯರನ್ನು ಸೆಳೆಯಲು ಪ್ರಯತ್ನ ನಡೆಸಿದೆ.
ಮೈಸೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ಮೇ 7ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಪಕ್ಷದವರು ಬಿಜೆಪಿ ಮತ್ತು ಜೆಡಿಎಸ್ ಸದಸ್ಯರನ್ನು ಸೆಳೆಯಲು ಪ್ರಯತ್ನ ನಡೆಸಿದೆ. ಆದ್ದರಿಂದ, ಸದಸ್ಯರೆಲ್ಲಾ ಬೆಂಗಳೂರು ಸಮೀಪದ ಈಗಲ್ ಟನ್ ರೆಸಾರ್ಟ್ ಸೇರಿದ್ದಾರೆ. [ಧಾರವಾಡ ಜಿಲ್ಲಾ ಪಂಚಾಯಿತಿ ಬಿಜೆಪಿ ಮಡಿಲಿಗೆ]

49 ಸದಸ್ಯ ಬಲದ ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ ಕಾಂಗ್ರೆಸ್ 22 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 18 ಸ್ಥಾನಗಳಲ್ಲಿ ಜಯಗಳಿಸಿರುವ ಜೆಡಿಎಸ್ ಮತ್ತು 8 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರವಿಡಲು ನಿರ್ಧರಿಸಿವೆ. [ಜಿಲ್ಲಾ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಮೀಸಲು ಪಟ್ಟಿ]
ಚುನಾವಣೆಯಲ್ಲಿ ಓರ್ವ ಪಕ್ಷೇತರ ಸದಸ್ಯರು ಸಹ ಗೆಲುವು ಸಾಧಿಸಿದ್ದಾರೆ. ಜಿಲ್ಲಾ ಪಂಚಾಯಿತಿಯ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಆದ್ದರಿಂದ, ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರನ್ನು ಸೆಳೆಯಲು ಕಾಂಗ್ರೆಸ್ ಪ್ರಯತ್ನ ನಡೆಸಿದೆ. [30 ಜಿಲ್ಲೆಗಳ ಪಂಚಾಯ್ತಿ ಫಲಿತಾಂಶ ಸಂಪೂರ್ಣ ವಿವರ]












Click it and Unblock the Notifications