ಸಿಎಂ ಪ್ರೇರಣೆ; ಮೈಸೂರು ಜಿಪಂ ಅಧ್ಯಕ್ಷೆಯಿಂದಲೂ ಗ್ರಾಮ ವಾಸ್ತವ್ಯದ ಚಿಂತನೆ
ಮೈಸೂರು, ಜೂನ್ 27: ಸಿಎಂ ಕುಮಾರಸ್ವಾಮಿಯವರ ಗ್ರಾಮ ವಾಸ್ತವ್ಯದಿಂದ ಪ್ರೇರಣೆ ಪಡೆದು ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ನಡೆಸಲು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪರಿಮಳಾ ಶ್ಯಾಮ್ ಮುಂದಾಗಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜನರನ್ನು ನೇರವಾಗಿ ಕಂಡು ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ಗ್ರಾಮ ವಾಸ್ತವ್ಯವನ್ನು ನಡೆಸಲು ತೀರ್ಮಾನಿಸಿದ್ದೇನೆ. ಇದಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ ನನಗೆ ಪ್ರೇರಣೆ ಎಂದಿದ್ದಾರೆ.
ಈ ಹಿಂದೆ ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ ಮಹೇಶ್ ಅವರು ಗ್ರಾಮ ವಾಸ್ತವ್ಯ ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದರು. ಸಾ.ರಾ. ಮಹೇಶ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡರ ಮಾರ್ಗದರ್ಶನ ಪಡೆದು ವಾಸ್ತವ್ಯ ಹೂಡಲಿದ್ದೇನೆ ಎಂದು ತಿಳಿಸಿದರು.

ಸಾ.ರಾ ನಂದೀಶ್ ಅವರು ಜಿಲ್ಲಾ ಪಂಚಾಯತ್ ಹಂಗಾಮಿ ಅಧ್ಯಕ್ಷರಾಗಿದ್ದ ವೇಳೆ ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ನಡೆಸಿದ್ದರು. ಇದಕ್ಕೆ ಸ್ಥಳೀಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು ಎಂಬುದನ್ನು ಗಮನಿಸಬಹುದು.












Click it and Unblock the Notifications