ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೈ - ತೆನೆ ಮೈತ್ರಿ ಪಾಲಾದ ಮೈಸೂರು ಜಿ.ಪಂ ಅಧ್ಯಕ್ಷ- ಉಪಾಧ್ಯಕ್ಷರ ಗಾದಿ

|
Google Oneindia Kannada News

ಮೈಸೂರು, ಫೆಬ್ರವರಿ 23 : ಮೈಸೂರು ಜಿಲ್ಲಾ ಪಂಚಾಯತ್ ನ ಅಧಿಕಾರದ ಗದ್ದುಗೆಯನ್ನು ಕೈ - ತೆನೆ ಮೈತ್ರಿ ಪಕ್ಷಗಳು ಮುಡಿಗೇರಿಸಿಕೊಂಡಿದೆ. ಜಿ.ಪಂನ ನೂತನ ಅಧ್ಯಕ್ಷರಾಗಿ ಜೆಡಿಎಸ್ ನ ಪರಿಮಳ ಶ್ಯಾಮ್ ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್ ನ ಗೌರಮ್ಮ ಸೋಮಶೇಖರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಯಾದ ಕುರಿತು ಚುನಾವಣಾಧಿಕಾರಿ ಯಶ್ವಂತ್ ಕುಮಾರ್ ಅಧಿಕೃತ ಘೋಷಣೆ ಮಾಡಿದ್ದಾರೆ.

ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಹಳೇ ದೊಸ್ತಿ ಮುಂದುವರೆಸಲು ಬಿಜೆಪಿ ಜತೆ ಮೈತ್ರಿಗೆ ಮುಂದಾಗಿದ್ದ ಜೆಡಿಎಸ್ ದಿಢೀರ್ ಬೆಳವಣಿಗೆಯಿಂದಾಗಿ ಬಿಜೆಪಿಗೆ ಕೈಕೊಟ್ಟು ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡಿತು.

ಮೈಸೂರು ಜಿಲ್ಲಾ ಪಂಚಾಯ್ತಿ: ಕೈ-ತೆನೆ ಮೈತ್ರಿಗೆ ಗ್ರೀನ್ ಸಿಗ್ನಲ್ ಮೈಸೂರು ಜಿಲ್ಲಾ ಪಂಚಾಯ್ತಿ: ಕೈ-ತೆನೆ ಮೈತ್ರಿಗೆ ಗ್ರೀನ್ ಸಿಗ್ನಲ್

ಈ ಹಿನ್ನೆಲೆ ಅಧ್ಯಕ್ಷ ಸ್ಥಾನ ಜೆಡಿಎಸ್ ಗೆ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಹಂಚಿಕೊಂಡವು. ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ನಿಂದ ಪರಿಮಳಾ ಶಾಮ್ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾವ ಅಭ್ಯರ್ಥಿಯೂ ನಾಮಪತ್ರ ಸಲ್ಲಿಸದ ಹಿನ್ನೆಲೆ ಪರಿಮಳ ಶಾಮ್ ಅವಿರೋಧವಾಗಿ ಆಯ್ಕೆಯಾದರು.

Mysuru zilla panchayth president and vice president elected

ಇನ್ನು ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಗೌರಮ್ಮ ಸೋಮಶೇಖರ್ ರನ್ನ ಅಭ್ಯರ್ಥಿಯನ್ನಾಗಿ ಮಾಡಲಾಗಿತ್ತು. ಬಿಜೆಪಿ ಕೊನೆ ಕ್ಷಣದಲ್ಲಿ ತಮ್ಮ ಅಭ್ಯರ್ಥಿಯನ್ನ ಕಣಕ್ಕಿಳಿಸಿದರು. ಅಂತರಸಂತೆ ಕ್ಷೇತ್ರದ ಜೆಡಿಎಸ್ ಸದಸ್ಯೆಯಾಗಿರುವ ಪರಿಮಳಾ ಶ್ಯಾಮ್ ವಿರುದ್ಧವಾಗಿ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮೈಸೂರು ಜಿ.ಪಂ.ನಲ್ಲಿ ಮೈತ್ರಿ ಕಗ್ಗಂಟು:ನಾಳೆ ಸಿಗಲಿದೆಯಾ ಉತ್ತರ? ಮೈಸೂರು ಜಿ.ಪಂ.ನಲ್ಲಿ ಮೈತ್ರಿ ಕಗ್ಗಂಟು:ನಾಳೆ ಸಿಗಲಿದೆಯಾ ಉತ್ತರ?

ಇವರು ನಾಮಧಾರಿಗೌಡ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಮೀಸಲಾತಿ ಅಭ್ಯರ್ಥಿ ಇಲ್ಲದ ಕಾರಣ ಅಧ್ಯಕ್ಷ ಸ್ಥಾನದಿಂದ ಬಿಜೆಪಿ ದೂರ ಉಳಿದಿತ್ತು. ಈ ಹಿನ್ನೆಲೆಯಲ್ಲಿ ಜೆಡಿಎಸ್‍ನ ಪರಿಮಳಾ ಶ್ಯಾಮ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಮೈಸೂರು ಜಿಪಂ ಉಪಾಧ್ಯಕ್ಷರ ಆಯ್ಕೆ: ಅಸಮಾಧಾನ ಶಮನಕ್ಕೆ ಹರಸಾಹಸ ಮೈಸೂರು ಜಿಪಂ ಉಪಾಧ್ಯಕ್ಷರ ಆಯ್ಕೆ: ಅಸಮಾಧಾನ ಶಮನಕ್ಕೆ ಹರಸಾಹಸ

ಮೈಸೂರು ಜಿಲ್ಲಾ ಪಂಚಾಯತ್‍ನಲ್ಲಿ ಒಟ್ಟು 49 ಸ್ಥಾನಗಳಿದ್ದು, ಈ ಚುನಾವಣೆಯಲ್ಲಿ ಕಾಂಗ್ರೆಸ್ 22, ಜೆಡಿಎಸ್ 18, ಬಿಜೆಪಿ 8 ಹಾಗೂ ಪಕ್ಷೇತರ 1 ಸ್ಥಾನ ಗಳಿಸಿದೆ. ಶಾಸಕ ಅನಿಲ್ ಚಿಕ್ಕಮಾದುವಿಂದ ತೆರವಾದ ಸ್ಥಾನ ಕಾಂಗ್ರೆಸ್ ಪಾಲಾಗಿದೆ. ಚುನಾವಣೆ ನಂತರ ಕಾಂಗ್ರೆಸ್ಸಿನ 3 ಸದಸ್ಯರು ಜೆಡಿಎಸ್ ಬೆಂಬಲಿಸಿದ್ದರಿಂದ ಜೆಡಿಎಸ್ 20 ಸ್ಥಾನ ಹಾಗೂ ಕಾಂಗ್ರೆಸ್ 20 ಸ್ಥಾನ ಗಳಿಸಿದೆ.

English summary
JD(S) Candidate Parimala Shyam president and congress candidate gowramma Elected as vice president Unanimously as The Mysuru Zilla Panchayath.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X