• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರು ಮೃಗಾಲಯದಲ್ಲಿ ಆಫ್ರಿಕನ್ ಚೀತಾ ವೀಕ್ಷಣೆಗೆ ಮುಕ್ತಗೊಳಿಸಿದ ಸಚಿವ ಎಸ್.ಟಿ.ಎಸ್

By ಮೈಸೂರು ಪ್ರತಿನಿಧಿ
|

ಮೈಸೂರು, ಅಕ್ಟೋಬರ್ 15: ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯಕ್ಕೆ ಆಫ್ರಿಕಾದಿಂದ ಕರೆತರಲಾಗಿರುವ ಮೂರು ಚಿರತೆಗಳನ್ನು ಸಾರ್ವಜನಿಕ ವೀಕ್ಷಣೆಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ ಸೋಮಶೇಖರ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಮೈಸೂರು ಮೃಗಾಲಯಕ್ಕೆ ಮೂರು ಹೊಸ ಚೀತಾಗಳನ್ನು ಮೈಸೂರಿಗೆ ಕರೆತರಲಾಗಿದೆ. ದೇಶದಲ್ಲಿ ಹೈದರಾಬಾದ್ ಬಿಟ್ಟರೆ ಮೈಸೂರಿನಲ್ಲಿ ಮಾತ್ರ ಇದೆ. ಆಗಸ್ಟ್ 17 ರಂದು ಪ್ರಾಣಿ ವಿನಿಮಯ ಯೋಜನೆಯಡಿ ದಕ್ಷಿಣ ಆಫ್ರಿಕಾದಿಂದ ಒಂದು ಗಂಡು, ಎರಡು ಹೆಣ್ಣು ಚೀತಾಗಳು ಮೈಸೂರು ಮೃಗಾಲಯಕ್ಕೆ ಆಗಮಿಸಿವೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

ದಸರಾ ದೀಪಾಲಂಕಾರ ತೆರವುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಮುಖ್ಯಮಂತ್ರಿಗಳಿಂ ನಾಡಹಬ್ಬ ದಸರಾಕ್ಕೆ ಚಾಲನೆ

ಮುಖ್ಯಮಂತ್ರಿಗಳಿಂ ನಾಡಹಬ್ಬ ದಸರಾಕ್ಕೆ ಚಾಲನೆ

ಈ ಬಾರಿ ಸರಳ ದಸರಾವನ್ನು ಮಾತ್ರ ಆಚರಿಸಲಾಗುವುದು, ನಾಳೆ ಮೈಸೂರಿಗೆ ಮುಖ್ಯಮಂತ್ರಿಗಳು ಆಗಮಿಸುತ್ತಿದ್ದಾರೆ. ಜಿಲ್ಲಾಡಾಳಿತದಿಂದ ಈಗಾಗಲೇ ಎಲ್ಲ ಸಿದ್ಧತೆಗಳು ಆಗಿದ್ದು, ನಾಡಿದ್ದು ಮುಖ್ಯಮಂತ್ರಿಗಳು ನಾಡಹಬ್ಬ ದಸರಾಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸಚಿವರು ತಿಳಿಸಿದರು.

ಕೊರೊನಾ ಕಾರಣ ಸಾರ್ವಜನಿಕ ನಿರ್ಬಂಧ ಅನಿವಾರ್ಯ

ಕೊರೊನಾ ಕಾರಣ ಸಾರ್ವಜನಿಕ ನಿರ್ಬಂಧ ಅನಿವಾರ್ಯ

ಮೈಸೂರು ಮೃಗಾಲಯ, ಚಾಮುಂಡಿ ಬೆಟ್ಟ ಹಾಗೂ ದಸರಾ ಕಾರ್ಯಕ್ರಮಕ್ಕೆ ಹೆಚ್ಚಿನ ಜನ ಬರುವ ಹಿನ್ನೆಲೆಯಲ್ಲಿ ನಿರ್ಬಂಧವನ್ನು ಹೇರಲಾಗುತ್ತದೆ. ಕೇಂದ್ರ ಸರ್ಕಾರ ಹಾಗೂ ತಜ್ಞರ ತಂಡ ನೀಡಿರುವ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡುತ್ತೇವೆ. ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಸಾರ್ವಜನಿಕ ನಿರ್ಬಂಧ ಅನಿವಾರ್ಯ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.

ಅ.17ರಿಂದ ಮೈಸೂರಿನ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ

ರಾಜರಾಜೇಶ್ವರಿನಗರ ಸಹ ನನ್ನ ಕ್ಷೇತ್ರದ ಪಕ್ಕವೇ ಇದೆ

ರಾಜರಾಜೇಶ್ವರಿನಗರ ಸಹ ನನ್ನ ಕ್ಷೇತ್ರದ ಪಕ್ಕವೇ ಇದೆ

ರಾಜರಾಜೇಶ್ವರಿ ನಗರ ಚುನಾವಣೆ ಸಂಬಂಧ ಬಿಜೆಪಿ ಪಕ್ಷದ ಅಭ್ಯರ್ಥಿಗಳಾದ ಮುನಿರತ್ನ ಅವರ ನಾಮಪತ್ರ ಸಲ್ಲಿಕೆ ವೇಳೆ ನಾನು ಉಪಸ್ಥಿತನಿದ್ದೆ. ಚುನಾವಣೆಯಲ್ಲಿ ಅವರು 30 ರಿಂದ 40 ಸಾವಿರ ಲೀಡ್ ನೊಂದಿಗೆ ಗೆಲುವು ಸಾಧಿಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ. ನನಗೆ ದಸರಾ ಇರುವುದರಿಂದ ಎಲ್ಲ ಸಮಯ ಅಲ್ಲಿ ಇರಲು ಆಗುತ್ತಿಲ್ಲ. ರಾಜರಾಜೇಶ್ವರಿ ನಗರ ಸಹ ನನ್ನ ಕ್ಷೇತ್ರದ ಪಕ್ಕವೇ ಇರುವುದರಿಂದ ಗೆಲುವಿಗೆ ಇನ್ನಷ್ಟು ಹೆಚ್ಚಿಗೆ ಕೆಲಸ ಮಾಡಬಹುದಾಗಿದೆ ಎಂದು ಸಚಿವರು ಹೇಳಿದರು.

ಸಚಿವ ಸ್ಥಾನ ಕೊಡುವುದು ಮುಖ್ಯಮಂತ್ರಿಗಳ ಪರಮಾಧಿಕಾರ

ಸಚಿವ ಸ್ಥಾನ ಕೊಡುವುದು ಮುಖ್ಯಮಂತ್ರಿಗಳ ಪರಮಾಧಿಕಾರ

ಎಚ್.ವಿಶ್ವನಾಥ್ ಅವರಿಗೆ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ಸಿಗಲು ನಾನು ಸಹ ಬಹಳಷ್ಟು ಪ್ರಯತ್ನಪಟ್ಟಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಅವರಿಗೆ ಸಚಿವ ಸ್ಥಾನ ಕೊಡುವುದು ಮುಖ್ಯಮಂತ್ರಿಗಳ ಪರಮಾಧಿಕಾರ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

English summary
The three leopards brought from Africa to the Jayachamarajendra Zoo in Mysore were put for public viewing. District Inchage Minister ST Somashekhar gives green signal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X