ಮೈಸೂರಿಗೆ ಭೇಟಿ ನೀಡುವ ಪ್ರವಾಸಿಗರ ಗಮನಕ್ಕೆ

ಮೈಸೂರು, ಜುಲೈ 01 : ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯಲು ಕರ್ನಾಟಕ ಸರ್ಕಾರ ಭಾನುವಾರ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ. ಜುಲೈ 5ರ ಭಾನವಾರದಿಂದ ಇದು ಜಾರಿಗೆ ಬರಲಿದೆ.

ಭಾನುವಾರ ಸಂಪೂರ್ಣ ಲಾಕ್ ಡೌನ್ ಇರುವ ಕಾರಣ ಅಂದು ವಾಹನ ಸಂಚಾರ ರದ್ದುಗೊಳ್ಳಲಿದೆ. ಯಾವುದೇ ಪ್ರವಾಸಿತಾಣಗಳಿಗೂ ಭೇಟಿ ನೀಡಲು ಸಾಧ್ಯವಿಲ್ಲ. ಈ ಹಿನ್ನಲೆಯಲ್ಲಿ ಮೈಸೂರು ಮೃಗಾಲಯ ಕೆಲವು ಬದಲಾವಣೆ ಮಾಡಿದೆ.

ಶ್ರೀ ಚಾಮರಾಜೇಂದ್ರ ಮೃಗಾಲಯ, ಕಾರಂಜಿ ಕೆರೆ ಪರಿಸರ ಉದ್ಯಾನಕ್ಕೆ ಇಷ್ಟು ದಿನ ಮಂಗಳವಾರ ರಜೆ ಇತ್ತು. ಭಾನುವಾರ ಮೈಸೂರಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ಕೊಡುವುದರಿಂದ ಭಾನುವಾರ ಅವುಗಳು ತೆರೆದಿರುತ್ತಿತ್ತು.

Mysuru Zoo To Open For People Tuesday Closed On Sunday

ಈಗ ಸಂಪೂರ್ಣ ಲಾಕ್ ಡೌನ್ ನಿಯಮ ಪಾಲನೆ ಮಾಡಬೇಕಾಗಿದೆ. ಆದ್ದರಿಂದ ವಾರದ ರಜೆ ನಿಯಮದಲ್ಲಿ ಬದಲಾವಣೆ ಮಾಡಲಾಗಿದೆ. ಮಂಗಳವಾರ ಪ್ರವಾಸಿಗರು ಮೃಗಾಲಯ ಮತ್ತು ಉದ್ಯಾನಕ್ಕೆ ಭೇಟಿ ನೀಡಬಹುದಾಗಿದೆ. ಭಾನುವಾರ ರಜೆ ಇರುತ್ತದೆ.

ಮುಂದಿನ ಆದೇಶದ ತನಕ ಶ್ರೀ ಚಾಮರಾಜೇಂದ್ರ ಮೃಗಾಲಯ, ಕಾರಂಜಿ ಕೆರೆ ಪರಿಸರ ಉದ್ಯಾನಕ್ಕೆ ಭಾನುವಾರ ಪ್ರವಾಸಿಗರ ಭೇಟಿ ನಿರ್ಬಂಧಿಸಲಾಗಿದೆ. ಮಂಗಳವಾರ ಜನರು ಭೇಟಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರವಾಸಿಗರ ಆರೋಗ್ಯದ ಹಿತದೃಷ್ಟಿಯಿಂದ ಸಹಕಾರ ನೀಡಬೇಕು ಎಂದು ಜನರಿಗೆ ಮನವಿ ಮಾಡಲಾಗಿದೆ. ಭಾನುವಾರ ಸಂಪೂರ್ಣ ಲಾಕ್ ಡೌನ್ ಇರುವ ಕಾರಣ ಮೈಸೂರಿಗೆ ಯಾವುದೇ ಪ್ರವಾಸಿಗರು ಭೇಟಿ ನೀಡುವಂತಿಲ್ಲ. ಸಂಪೂರ್ಣ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತದೆ ಎಂದು ಸರ್ಕಾರ ಈಗಾಗಲೇ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+