ಮೈಸೂರು ಜಿ.ಪಂ.ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ದಿನಾಂಕ ನಿಗದಿ
ಮೈಸೂರು, ಫೆಬ್ರವರಿ 15:ಈ ಹಿಂದೆ ಕಲಾಪ ಇದೆಯೆಂದು ಮುಂದೂಡಲಾಗಿದ್ದ ಮೈಸೂರು ಜಿ.ಪಂ. ಅಧ್ಯಕ್ಷ - ಉಪಾಧ್ಯಕ್ಷ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಇದೇ ಫೆಬ್ರವರಿ 23ಕ್ಕೆ ಚುನಾವಣೆ ನಡೆಯಲಿದೆ.
ದಿಢೀರ್ ಬೆಳವಣಿಗೆಯಲ್ಲಿ ಮೈಸೂರಿನ ಜಿ.ಪಂ. ಚುನಾವಣೆ ಮುಂದೂಡಿಕೆ
ಚುನಾವಣೆ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ಮೈಸೂರು ಪ್ರಾದೇಶಿಕ ಆಯುಕ್ತರ ಕಛೇರಿಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು, ಚುನಾವಣೆ ಬಗ್ಗೆ ಮಾಹಿತಿ ನೀಡಿದ ಜಿ.ಪಂ.ಸಿಇಓ ಕೆ ಜ್ಯೋತಿ, ಫೆಬ್ರವರಿ 23ರಂದು ಬೆಳಗ್ಗೆ 8 ರಿಂದ 10 ಗಂಟೆಯೊಳಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, 10ಗಂಟೆ ನಂತರ ಚುನಾವಣೆ ಪ್ರಕ್ರಿಯೆ ಆರಂಭವಾಗಲಿದೆ.
ಮೈಸೂರು ಜಿಪಂ ಹಂಗಾಮಿ ಅಧ್ಯಕ್ಷರಾಗಿ ಸಾರಾ ನಂದೀಶ್ ಆಯ್ಕೆ
ಜಿ.ಪಂ.ಸಭಾಂಗಣದಲ್ಲಿ ಚುನಾವಣೆ ನಡೆಯಲಿದ್ದು, ಪ್ರಾದೇಶಿಕ ಆಯುಕ್ತರೇ ಚುನಾವಣಾಧಿಕಾರಿಯಾಗಲಿದ್ದು, ಅವರ ಸಮ್ಮುಖದಲ್ಲೇ ಚುನಾವಣೆ ನಡೆಯಲಿದೆ ಎಂದರು.
ಈ ಹಿಂದೆ ಫೆಬ್ರವರಿ 6ಕ್ಕೆ ನಿಗದಿಯಾಗಿದ್ದ ಚುನಾವಣೆಯನ್ನು ಮುಂದೂಡಲಾಗಿತ್ತು. ಈಗಾಗಲೇ ಸಚಿವ ಸಾ.ರಾ ಮಹೇಶ್ ಸಹೋದರ ಸಾ.ರಾ ನಂದೀಶ್ ಹಂಗಾಮಿ ಅಧ್ಯಕ್ಷರಾಗಿದ್ದಾರೆ .