• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೆರೆಯಲ್ಲಿ ಶವವಾಗಿ ಪತ್ತೆಯಾದ ನಾಗರಹೊಳೆಯ ರಾತ್ರಿ ಪಾಳಿ ವಾಚರ್

By ಮೈಸೂರು ಪ್ರತಿನಿಧಿ
|

ಮೈಸೂರು, ಏಪ್ರಿಲ್ 18: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಾಚರ್ ಶುಕ್ರವಾರ ಬೆಳಗಿನ ಜಾವ ಅರಣ್ಯದ ಕೆರೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಮೃತರನ್ನು ಉದ್ಯಾನವನದ ಎಚ್.ಡಿ.ಕೋಟೆ ತಾಲೂಕು ವ್ಯಾಪ್ತಿಯ ಕಳ್ಳಬೇಟೆ ತಡೆ ಶಿಬಿರದಲ್ಲಿ ಗುತ್ತಿಗೆ ಆಧಾರದಡಿ ವಾಚರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಹದೇವನಾಯ್ಕ್(48) ಎಂದು ಗುರುತಿಸಲಾಗಿದೆ.

 ನೇತ್ರಾವತಿ ಸೇತುವೆ ಬಳಿ ನಿಗೂಢವಾಗಿ ನಾಪತ್ತೆಯಾಗಿದ್ದ ವ್ಯಕ್ತಿ ಶವ ಪತ್ತೆ; ಆತ್ಮಹತ್ಯೆ ಶಂಕೆ ನೇತ್ರಾವತಿ ಸೇತುವೆ ಬಳಿ ನಿಗೂಢವಾಗಿ ನಾಪತ್ತೆಯಾಗಿದ್ದ ವ್ಯಕ್ತಿ ಶವ ಪತ್ತೆ; ಆತ್ಮಹತ್ಯೆ ಶಂಕೆ

ಮಹದೇವನಾಯ್ಕ್ ಗುರುವಾರ ರಾತ್ರಿ ಪಾಳಿಯಲ್ಲಿ ಆನೆಪಹರೆ ನಡೆಸಲು ಶಿಬಿರದಿಂದ ತೆರಳಿದ್ದರು. ಬೆಳಗಿನ ಜಾವ ಅವರು ಶಿಬಿರಕ್ಕೆ ಬರಬೇಕಿತ್ತು. ಆದರೆ ಬಂದಿರಲಿಲ್ಲ. ಅನುಮಾನಗೊಂಡು ಸಿಬ್ಬಂದಿ ಕಾಡಿನೊಳಗೆ ತೆರಳಿ ನೋಡಿದಾಗ ಕೆರೆಯಲ್ಲಿ ಅವರ ಮೃತದೇಹ ತೇಲುತ್ತಿದ್ದುದು ಕಂಡುಬಂದಿದೆ.

ಸ್ಥಳಕ್ಕೆ ಹುಲಿ ಯೋಜನೆ ನಿರ್ದೇಶಕ ಮಹೇಶ್ ಕುಮಾರ್, ಎಸಿಎಫ್ ಪ್ರಸನ್ನ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Nagarahole forest night duty watcher Mahadeva Naika dead body found in lake today,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X