Bengaluru-Mysuru Metro: ಬೆಂಗಳೂರು-ಮೈಸೂರು ಮೆಟ್ರೋ ಸೇವೆ ಆರಂಭ ಯಾವಾಗ?-ಪ್ರತಾಪ್ ಸಿಂಹ ಹೇಳಿದ್ದೇನು?
ಮೈಸೂರು, ಫೆಬ್ರವರಿ, 15: ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಕಂಪನಿಗಳಿಗೆ ಹೋಗುವ ಉದ್ಯೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಪ್ರಮುಖ ಸಾರಿಗೆಯಾಗಿದೆ. ಇದೀಗ ಮೈಸೂರಿನಲ್ಲೂ ಕೂಡ ಮೆಟ್ರೋ ರೈಲು ಬರಲಿದೆ ಪ್ರತಾಪ್ ಸಿಂಹ ಅವರು ಭರವಸೆ ನೀಡಿದ್ದಾರೆ. ಹಾಗಾದರೆ ಇದೆ ಯಾವಾಗ ಮೆಟ್ರೋ ಸಂಚಾರ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
2014ಕ್ಕೂ ಮೊದಲು ಒಂದು ರೈಲು ಬಂದಿಲ್ಲ. ನಾನು 11 ರೈಲುಗಳನ್ನು ತಂದಿದ್ದೇನೆ. ಶೀಘ್ರದಲ್ಲೇ 12ನೇ ರೈಲು ಬರಲಿದೆ. ಮೈಸೂರು-ರಾಮೇಶ್ವರಂ ರೈಲು ಬರಲಿದೆ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಭರವಸೆ ನೀಡಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಸಾಕಷ್ಟು ಅನುದಾನ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಬೆಂಗಳೂರು-ಮೈಸೂರಿಗೂ ಮೆಟ್ರೋ ಬರಲಿದೆ ಎಂದು ಹೇಳಿದ್ದಾರೆ.

ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಮೈಸೂರು ಕೊಡಗು ಲೋಕಸಭಾ ಚುನಾವಣಾ ಕಾರ್ಯಾಲಯ ಉದ್ಘಾಟನೆ ಮಾಡಿ ಮಾತನಾದ ಪ್ರತಾಪ್ ಸಿಂಹ, ಈ ವೇಳೆ ಮುಂದೆ ಬೆಂಗಳೂರು-ಮೈಸೂರು ಮೆಟ್ರೋ ಬರಲಿದೆ ಎಂದು ಭರವಸೆ ನೀಡಿದರು. ಚುನಾವಣೆಗೆ ಹೋಗಬೇಕಾದರೆ ಏನು ಮಾಡುತ್ತೇವೆ? ಅಧಿಕಾರದಲ್ಲಿ ಇದ್ದಾಗ ಏನು ಮಾಡಿದ್ದೇವೆ? 10 ವರ್ಷದಲ್ಲಿ ನಾನು ಕೆಲಸ ಮಾಡಿದ ರಿಪೋರ್ಟ್ ಕಾರ್ಡ್ ನೀಡಿದ್ದೇನೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ಕೊಟ್ಟಿದ್ದೇನು? ಪ್ರತಾಪ್ ಸಿಂಹ ತಂದಿದ್ದೇನು? ಅನ್ನುವ ಬುಕ್‌ಲೆಟ್ ಇದರಲ್ಲಿ ಕೇಂದ್ರದ ಡಿಪಾಲ್ಟ್ ಯೋಜನೆ ಪಟ್ಟಿ ಇಲ್ಲಿ ಮಾಡಿಲ್ಲ. 2014ರ ಹಿಂದೆ ಒಂದು ರೈಲು ಬಂದಿಲ್ಲ. ನಾನು 11 ರೈಲುಗಳನ್ನು ತಂದಿದ್ದೇನೆ. 12ನೇ ರೈಲು ಸದ್ಯದಲ್ಲೇ ಬರಲಿದೆ ಎಂದು ಭರವಸೆ ಕೊಟ್ಟರು.
ಮೈಸೂರು ಚೆನ್ನೈ ಬುಲೆಟ್ ರೈಲು ಶೀಘ್ರವಾಗಿ ಆಗಲಿದೆ. ನಾನು ಮತ್ತೊಮ್ಮೆ ಆಶೀರ್ವಾದ ಕೇಳುತ್ತಿದ್ದೇನೆ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ. 2014, 2019ರಲ್ಲಿ ಗೆಲ್ಲಿಸಿದ್ದಾರೆ. ಸತತವಾಗಿ ಆಯ್ಕೆಯಾಗಿ ದಾಖಲೆ ಮಾಡಿದ್ದೇನೆ. ಪಕ್ಷ ಆಶೀರ್ವಾದ, ತೀರ್ಮಾನ ಮಾಡಿದರೆ ಜನರು ಆಶೀರ್ವಾದ ಮಾಡಲಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದರು.











Click it and Unblock the Notifications