• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನಂಜುಡೇಶ್ವರನಿಗೆ ಒಂದು ತಿಂಗಳಲ್ಲೇ ಕೋಟಿ ರುಪಾಯಿಗೂ ಹೆಚ್ಚು ಕಾಣಿಕೆ

By ಮೈಸೂರು ಪ್ರತಿನಿಧಿ
|

ಮೈಸೂರು, ಜನವರಿ 30: ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ಮೈಸೂರು ಜಿಲ್ಲೆಯ ನಂಜನಗೂಡಿನ ನಂಜುಂಡೇಶ್ವರ ದೇವಾಲಯದ ಹುಂಡಿಗಳ ಕಾಣಿಕೆ ಎಣಿಕೆ ಮಾಡಲಾಗಿದ್ದು, ಒಂದು ಕೋಟಿ ರುಪಾಯಿಗೂ ಹೆಚ್ಚಿನ ಕಾಣಿಕೆ ಸಂಗ್ರಹವಾಗಿದೆ.

ಕಳೆದ ಒಂದು ತಿಂಗಳ ಅವಧಿಯಲ್ಲಿ ಒಂದು ಕೋಟಿ ಒಂದು ಲಕ್ಷ ಎಪ್ಪತ್ತೊಂದು ಸಾವಿರದ ಒಂಬತ್ತು ನೂರಾ ಹತ್ತು (1,01,71,910) ರೂಪಾಯಿ ಕಾಣಿಕೆ ಹಣದ ಜೊತೆಗೆ 70 ಗ್ರಾಂ ಚಿನ್ನ, 3 ಕೆಜಿ 50 ಗ್ರಾಂ ಬೆಳ್ಳಿ ಕೂಡಾ ಸಂಗ್ರಹವಾಗಿದೆ. ಜೊತೆಗೆ 13 ನಿಷೇಧಿತ ನೋಟುಗಳು, 2 ವಿದೇಶಿ ಕರೆನ್ಸಿ ಕೂಡ ಇದೆ.

ಪ್ರಸಿದ್ಧ ಚಿಕ್ಕತಿರುಪತಿ ದೇವಾಲಯ ಹುಂಡಿಯಲ್ಲಿ ಸಂಗ್ರಹವಾದ ಕಾಣಿಕೆ ಎಷ್ಟು?ಪ್ರಸಿದ್ಧ ಚಿಕ್ಕತಿರುಪತಿ ದೇವಾಲಯ ಹುಂಡಿಯಲ್ಲಿ ಸಂಗ್ರಹವಾದ ಕಾಣಿಕೆ ಎಷ್ಟು?

ನಂಜುಡೇಶ್ವರ ದೇವಾಲಯದ ಕಾಣಿಕೆ ಹುಂಡಿಯಲ್ಲಿ 7,500 ರೂ. ಮೌಲ್ಯದ ನಿಷೇಧಿತ ನೋಟುಗಳು ಪತ್ತೆಯಾಗಿದ್ದು, ಅದರಲ್ಲಿ 1,000 ರೂ. ಮುಖಬೆಲೆಯ 2 ನೋಟುಗಳು ಹಾಗೂ 500 ರೂ. ಮುಖಬೆಲೆಯ 11 ನಿಷೇಧಿತ ನೋಟುಗಳು ಪತ್ತೆಯಾಗಿವೆ.

ನಂಜನಗೂಡಿನ ನಂಜುಂಡೇಶ್ವರ ದೇವಾಲಯದ 20ಕ್ಕೂ ಹೆಚ್ಚು ಹುಂಡಿಗಳ ಕಾಣಿಕೆ ಎಣಿಕೆ ಮಾಡಲಾಯಿತು. 50ಕ್ಕೂ ಹೆಚ್ಚು ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗಿಯಾಗಿದ್ದರು. ಮುಜರಾಯಿ ಇಲಾಖೆಗೆ ಈ ದೇವಾಲಯ ಒಳಪಟ್ಟಿದೆ. ತಹಶೀಲ್ದಾರ ಅವರ ನೇತೃತ್ವದಲ್ಲಿ ಹುಂಡಿ ಕಾಣಿಕೆ ಎಣಿಕಾ ಮಾಡಲಾಯಿತು.

English summary
The Hundi collection of the Nanjundeshwara Temple in Nanjanagud in Mysuru district has been counted and more than Rs 1 crore has been collected.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X