ಕೊರೊನಾ ಆತಂಕದಲ್ಲಿಯೂ ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಬಂದ ಕಾಣಿಕೆ ಹಣವೆಷ್ಟು?
ಮೈಸೂರು, ಡಿಸೆಂಬರ್ 25: ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ಮೈಸೂರು ಜಿಲ್ಲೆಯ ಪ್ರಮುಖ ಧಾರ್ಮಿಕ ಕೇಂದ್ರ ನಂಜನಗೂಡಿನ ಶ್ರೀಕಂಠೇಶ್ವರನ ದೇವಸ್ಥಾನಕ್ಕೆ ಕೋಟ್ಯಂತರ ರೂಪಾಯಿ ಆದಾಯ ಹರಿದು ಬಂದಿದೆ.
ಕೊರೊನಾ ಸೋಂಕು ಆತಂಕದ ನಡುವೆಯೂ ಅಪಾರ ಸಂಖ್ಯೆಯ ಭಕ್ತರು ನಂಜುಂಡೇಶ್ವರನ ದರ್ಶನಕ್ಕಾಗಿ ನಂಜನಗೂಡಿಗೆ ಬಂದಿದ್ದು, ಇದರ ಪರಿಣಾಮವಾಗಿ ಭಕ್ತರು ಶ್ರೀಕಂಠೇಶ್ವರನ ದೇವಸ್ಥಾನಕ್ಕೆ 2.15 ಕೋಟಿಗೂ ಹೆಚ್ಚು ಕಾಣಿಕೆ ನೀಡಿದ್ದಾರೆ.
ದೇವಸ್ಥಾನದಲ್ಲಿ ನಡೆದ ಹುಂಡಿ ಎಣಿಕೆಯಲ್ಲಿ ಒಟ್ಟು 21 ಹುಂಡಿಗಳ ಎಣಿಕೆ ನಡೆದಿದ್ದು, 2,15,80,467 ರೂ. ಹಣ ಸಂಗ್ರಹವಾಗಿದೆ. ಕಳೆದ ತಿಂಗಳಿಗೆ ಹೋಲಿಸಿದರೆ ಈ ಬಾರಿ 57 ಲಕ್ಷ ರೂ. ಹಣ ಹೆಚ್ಚುವರಿವಾಗಿ ಸಂಗ್ರಹವಾಗಿದೆ. ಕೊರೊನಾ ಮುಕ್ತವಾದ ನಂತರ ನಂಜನಗೂಡಿಗೆ ಬರುವ ಭಕ್ತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಕಾಣಿಕೆ ಹುಂಡಿಯಲ್ಲೂ ಹೆಚ್ಚು ಹಣ ಸಂಗ್ರಹವಾಗಿದೆ.

ಇನ್ನು ದೇಶದಲ್ಲಿ ನೋಟ್ ಬ್ಯಾನ್ ಜಾರಿಗೊಂಡು ಸುಮಾರು ಐದು ವರ್ಷಗಳೇ ಕಳೆದರೂ, ಈಗಲೂ ಭಕ್ತರು ನಿಷೇಧಿತ ನೋಟುಗಳನ್ನು ನಂಜುಂಡೇಶ್ವರನಿಗೆ ಕಾಣಿಕೆಯಾಗಿ ಅರ್ಪಿಸಿದ್ದಾರೆ. ಒಟ್ಟು 42 ಸಾವಿರ ರೂ. ಮೌಲ್ಯದ ನಿಷೇಧಿತ ನೋಟುಗಳು ಕಾಣಿಕೆ ರೂಪದಲ್ಲಿ ಸಿಕ್ಕಿವೆ.
ಅಷ್ಟೇ ಅಲ್ಲದೇ, ವಿದೇಶಿ ಭಕ್ತರಿಂದಲು ನಂಜುಂಡನಿಗೆ ಕಾಣಿಕೆ ಅರ್ಪಣೆ ಮಾಡಲಾಗಿದ್ದು, 29 ವಿದೇಶಿ ಕರೆನ್ಸಿಗಳು ಹುಂಡಿಯಲ್ಲಿ ಸಂಗ್ರಹವಾಗಿದೆ. ಇವೆಲ್ಲದರ ಜೊತೆಗೆ 108 ಗ್ರಾಂ ಚಿನ್ನ ಹಾಗೂ 5 ಕೆಜಿ 750 ಗ್ರಾಂ ಬೆಳ್ಳಿ ಕೂಡ ಸಂಗ್ರಹವಾಗಿದೆ. ಹುಂಡಿ ಎಣಿಕೆ ಕಾರ್ಯದಲ್ಲಿ ಬ್ಯಾಂಕ್ ಸಿಬ್ಬಂದಿ ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.

ಇಂದಿನಿಂದ ಮೈಸೂರಿನಲ್ಲಿ ಫಲಪುಷ್ಪ ಪ್ರದರ್ಶನ
ಪ್ರತಿ ವರ್ಷದಂತೆ ಕ್ರಿಸ್‌ಮಸ್ ಹಾಗೂ ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಆವರಣದಲ್ಲಿ ಇಂದಿನಿಂದ ಜನವರಿ 2ರವರೆಗೆ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ.
ಪುಷ್ಪ ಪ್ರದರ್ಶನದ ಹಿನ್ನೆಲೆಯಲ್ಲಿ ಪ್ರತಿ ದಿನ ಸಂಜೆ 7ರಿಂದ 8.30ರವರೆಗೆ ಅರಮನೆಗೆ ವಿದ್ಯುತ್ ದೀಪಾಲಂಕಾರ ರಚಿಸಲು ತೀರ್ಮಾನ ಮಾಡಲಾಗಿದ್ದು, ಈಗಾಗಲೇ ಮೈಸೂರು ಅರಮನೆ ಆವರಣದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಮೈಸೂರಿನಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ.
ಈ ವರ್ಷ ತಮಿಳುನಾಡಿನಲ್ಲಿ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಭಾರತೀಯ 3 ಸೇನಾ ಪಡೆಗಳ ಮುಖ್ಯಸ್ಥ ಜನರು ಬಿಪಿನ್ ರಾವತ್ ಹಾಗೂ ಹೃದಯಾಘಾತದಿಂದ ನಿಧನರಾದ ನಟ ಪುನೀತ್ ರಾಜಕುಮಾರ್ ಅವರಿಗೆ ವಿಶೇಷವಾಗಿ ಪುಷ್ಪ ನಮನವನ್ನು ಫಲಪುಷ್ಪ ಪ್ರದರ್ಶನದಲ್ಲಿ ಮಾಡಲಾಗಿದೆ.
ಅದೇ ರೀತಿ ಈ ವರ್ಷ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ತಂದುಕೊಟ್ಟ ನೀರಜ್ ಚೋಪ್ರಾರ ಪುಷ್ಪ ಮೂರ್ತಿಯನ್ನು ಸಿದ್ಧ ಮಾಡಲಾಗಿದೆ. ಅಲ್ಲದೆ ಅಯೋಧ್ಯೆ ರಾಮ ಮಂದಿರ, ಚಾಮುಂಡೇಶ್ವರಿ ದೇವತೆ, ನಂದಿ ಮತ್ತು ಮಹಿಷಾಸುರನ ಮಾದರಿ ಚಿತ್ರಗಳು, ಮಹಾತ್ಮ ಗಾಂಧೀಜಿ ನಡೆಸಿದ ಕ್ವಿಟ್ ಇಂಡಿಯಾ ಚಳವಳಿ ಮಾದರಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮಾದರಿಯ ಪ್ರತಿಮೆಗಳು ಮೈಸೂರು ಅರಮನೆ ಆವರಣದಲ್ಲಿ ಸಿದ್ಧವಾಗಿವೆ.

ಮೈಸೂರು ಒಡೆಯರ ಫೋಟೋಗ್ಯಾಲರಿ
ಫಲಪುಷ್ಪ ಪ್ರದರ್ಶನಕ್ಕೆ ಬರುವ ಸೆಲ್ಫಿ ಪ್ರಿಯರಿಗಾಗಿ ಸೆಲ್ಫಿ ಪಾಯಿಂಟ್ ಕೂಡ ಸ್ಥಾಪನೆ ಮಾಡಲಾಗಿದೆ. ಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ನಡೆಯುತ್ತಿರುವುದರಿಂದ ಮೈಸೂರು ಮಹಾರಾಜ ಜಯಚಾಮರಾಜ ಒಡೆಯರ್ ಮಾದರಿ ಚಿತ್ರವನ್ನು ಹೂವುಗಳಿಂದ ಅಲಂಕರಿಸಲಾಗಿದೆ. ಮೈಸೂರು ಅರಮನೆ ಯದುವಂಶವನ್ನು ಆಳಿದ ದೊರೆಗಳು ಇತಿಹಾಸವನ್ನು ಪರಿಚಯಿಸುವ ಫೋಟೋ ಗ್ಯಾಲರಿ ಕೂಡ ನಿರ್ಮಾಣ ಮಾಡಲಾಗಿದೆ.
ಬೆಳಗ್ಗೆ 10ರಿಂದ 8.30ರವರೆಗೆ ವೀಕ್ಷಣೆಗೆ ಅವಕಾಶ
ಇನ್ನು ಕೋವಿಡ್ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಯಾರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದುಕೊಂಡಿರುತ್ತಾರೋ ಅವರಿಗೆ ಮಾತ್ರ ಫಲಪುಷ್ಪ ಪ್ರದರ್ಶನ ವೀಕ್ಷಣೆ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಅಲ್ಲದೆ ಫಲಪುಷ್ಪ ಪ್ರದರ್ಶನವನ್ನು ಬೆಳಗ್ಗೆ 10 ರಿಂದ ರಾತ್ರಿ 8.30ರ ವರೆಗೆ ವೀಕ್ಷಿಸಬಹುದಾಗಿದೆ. ಇನ್ನು ಫಲಪುಷ್ಪ ಪ್ರದರ್ಶನಕ್ಕೆ ಪ್ರವೇಶ ಉಚಿತವಾಗಿದೆ. ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಪ್ರತಿ ದಿನ 500 ಮಂದಿಗೆ ಮಾತ್ರ ಪ್ರವೇಶ ನೀಡಲಾಗುವುದು ಎಂದು ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್. ಸುಬ್ರಹ್ಮಣ್ಯ ತಿಳಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications