ನಂಜನಗೂಡು ಚುನಾವಣಾ ಫಲಿತಾಂಶ 2023: ಶಾಸಕ ಬಿ ಹರ್ಷವರ್ಧನ್ ಸೋಲಿಸಿದ ದರ್ಶನ್ ಧ್ರುವನಾರಾಯಣ್
ಮೈಸೂರು, ಮೇ 13: ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ಅವರು 72,713 ಮತಗಳನ್ನು ಪಡೆದು ಬಿಜೆಪಿಯ ಹಾಲಿ ಶಾಸಕ ಬಿ ಹರ್ಷವರ್ಧನ್ ಅವರನ್ನು ಸೋಲಿಸಿದ್ದಾರೆ. ಬಿ ಹರ್ಷವರ್ಧನ್ ಅವರು 40,674 ಮತಗಳನ್ನು ಪಡೆದಿದ್ದಾರೆ.
ಈ ಬಾರಿ ಇದೇ ಮೊದಲ ಬಾರಿಗೆ ಹೊಸ ಮುಖ ದರ್ಶನ್ ಧ್ರುವನಾರಾಯಣ್ ಅವರು ಸ್ಪರ್ಧೆ ಮಾಡಿದ್ದಾರೆ. ಅವರಿಗೆ ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ವಿ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಹರ್ಷವರ್ಧನ್ ಅವರು ಸ್ಪರ್ಧೆ ಮಾಡಿದ್ದರು. ಈ ಚುನಾವಣೆಗೆ ಜೆಡಿಎಸ್‌ನಿಂದ ಇಲ್ಲಿ ಅಭ್ಯರ್ಥಿಯನ್ನು ಹಾಕಲಾಗಿರಲಿಲ್ಲ.
ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಹರ್ಷವರ್ಧನ್ ಅವರು ಹಾಲಿ ಶಾಸಕರಾಗಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಹರ್ಷವರ್ಧನ್ ಅವರು 78,030 ಮತಗಳನ್ನು ಪಡೆದು 12,479 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದರು. ಇವರ ವಿರುದ್ಧ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದ್ದ ಕಳಲೆ ಕೇಶವಮೂರ್ತಿ ಅವರು 65,551 ಮತಗಳನ್ನು ಪಡೆದು ಪರಾಭಾವಗೊಂಡಿದ್ದರು. ಇನ್ನು ಜೆಡಿಎಸ್‌ನಿಂದ ದಯಾನಂದಮೂರ್ತಿ ಎಚ್‌ಎಚ್ ಅವರು 13,679 ಮತಗಳನ್ನು ಪಡೆದಿದ್ದರು.

ಇಲ್ಲಿ ಬಿಜೆಪಿಯ ಹರ್ಷವರ್ಧನ್ ಅವರು ಶೇಕಡ 47.59 ರಷ್ಟು ಮತಗಳನ್ನು ಪಡೆದರೆ ಕಾಂಗ್ರೆಸ್‌ನ ಕಳಲೆ ಕೇಶವಮೂರ್ತಿ ಅವರು ಶೇಕಡ 39.98ರಷ್ಟು ಮತಗಳನ್ನು ಪಡೆದಿದ್ದರು, ಇನ್ನು ಜೆಡಿಎಸ್‌ನ ದಯಾನಂದಮೂರ್ತಿ ಅವರು ಶೇಕಡ 8.34 ರಷ್ಟು ಮತಗಳನ್ನು ಪಡೆದಿದ್ದರು. ಈ ಬಾರಿ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಶೇಕಡ 80ರಷ್ಟು ಮತದಾನವಾಗಿದೆ.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಇಬ್ಬರು ಪ್ರಮುಖ ಅಭ್ಯರ್ಥಿಗಳಾದ ಎಚ್‌ಸಿ ಮಹದೇವಪ್ಪ ಅವರು ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಆದರೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್ ಧ್ರುವನಾರಾಯಣ್ ಅವರು ಅಕಾಲಿಕವಾಗಿ ಮರಣ ಹೊಂದಿದರು. ಆದರೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಧ್ರುವನಾರಾಯಣ್ ಅವರ ಮಗ ದರ್ಶನ್ ಧ್ರುವನಾರಾಯಣ್ ಅವರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯ ಮಾಡಿದ್ದರು.
ಡಿಕೆ ಶಿವಕುಮಾರ್ ಅವರ ಆಪ್ತ ಗೆಳೆಯರಾಗಿದ್ದ ಆರ್ ಧ್ರುವನಾರಾಯಣ್ ಅವರು ಅಕಾಲಿಕವಾಗಿ ಮರಣ ಹೊಂದಿದ ಪರಿಣಾಮ ದರ್ಶನ್‌ಗೆ ಟಿಕೆಟ್ ನೀಡಿದ್ದರು. 2018ಕ್ಕಿಂತಲೂ ಮುಂಚೆ ಕಾಂಗ್ರೆಸ್ ಇಲ್ಲಿ ಎರಡು ಬಾರಿ ಅಧಿಕಾರಕ್ಕೆ ಬಂದಿತ್ತು. ಈಗ ಕಾಂಗ್ರೆಸ್‌ನಿಂದ ಯುವ ನಾಯಕ ದರ್ಶನ್ ಅವರು ಕಣದಲ್ಲಿರುವುದು ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಧ್ರುವನಾರಾಯಣ್ ಅವರು ಮರಣದಿಂದ ದರ್ಶನ್ ಪರ ಅನುಕಂಪದ ಅಲೆ ಮೂಡಿತ್ತು.
ನಂಜನಗೂಡಿನಲ್ಲಿ ಈ ಬಾರಿ ದರ್ಶನ್ ಪರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಡಿಕೆ ಸುರೇಶ್, ಚಿತ್ರನಟಿ ರಮ್ಯ ಅವರು ಪ್ರಚಾರ ಮಾಡಿದ್ದರು. ಇದಲ್ಲದೆ ಕ್ಷೇತ್ರದಲ್ಲಿ ಪ್ರಚಾರಕ್ಕೆ ಹೋದಾಗಲೆಲ್ಲಾ ಜನರು ದರ್ಶನ್ ಪರ ಅನುಕಂಪ ತೋರಿದ್ದರು. ಇನ್ನು ಕ್ಷೇತ್ರದಲ್ಲಿ ದರ್ಶನ್‌ಗೆ ಜೆಡಿಎಸ್ ಬೆಂಬಲವನ್ನು ವ್ಯಕ್ತಪಡಿಸಿತ್ತಲ್ಲದೆ ಅವರ ಗೆಲುವಿಗೆ ಪೂರಕವಾಗಿ ಅಭ್ಯರ್ಥಿಯನ್ನೇ ಹಾಕಿರಲಿಲ್ಲ.
ಹೀಗಾಗಿ ದರ್ಶನ್ ಗೆಲ್ಲುತ್ತಾರೆ ಎಂದು ಸಹಜವಾಗಿಯೇ ಎಂದು ಸಮೀಕ್ಷೆಗಳು ಅಂದಾಜು ಮಾಡಿದ್ದವು. ಕ್ಷೇತ್ರದಲ್ಲಿ ಹಾಲಿ ಶಾಸಕ ಹರ್ಷವರ್ಧನ್ ಅವರ ವಿರುದ್ಧ ಆಡಳಿತ ವಿರೋಧಿ ಅಲೆ ಇತ್ತು. ಅನೇಕ ಕಡೆ ಪ್ರಚಾರಕ್ಕೆ ಹೋಗಿದ್ದಾಗ ಅವರಿಗೆ ಜನರ ತೋರಿದ ಪ್ರತಿರೋಧವೂ ಕೂಡ ಇದನ್ನು ತೋರಿಸುತ್ತಿತ್ತು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications