ನಂಜನಗೂಡು ಟಿಕೆಟ್: ಧ್ರುವನಾರಾಯಣ್ ಸಾವಿನಿಂದ ಇಕ್ಕಟ್ಟಿಗೆ ಸಿಲುಕಿದ ಕಾಂಗ್ರೆಸ್
ಮೈಸೂರು, ಮಾರ್ಚ್ 14: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದ ಕಾಂಗ್ರೆಸ್ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರ ಅಕಾಲಿಕ ಮರಣದಿಂದ ಕಾಂಗ್ರೆಸ್ ಸಂಕಷ್ಟಕ್ಕೆ ಸಿಲುಕಿದೆ.
ಚಾಮರಾಜನಗರದ ಮಾಜಿ ಸಂಸದರೂ ಆಗಿದ್ದ ಆರ್. ಧ್ರುವನಾರಾಯಣ್ ಅವರ ನಿಧನದ ನಂತರ ಅವರ ಪುತ್ರ ದರ್ಶನ್‌ಗೆ ನಂಜನಗೂಡು ಟಿಕೆಟ್ ನೀಡುವಂತೆ ಅವರ ಬೆಂಬಲಿಗರು ಕಾಂಗ್ರೆಸ್ ಮೇಲೆ ಒತ್ತಡ ಹೇರುತ್ತಿದ್ದಾರೆ. ಆದರೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆಪ್ತರಾಗಿರುವ ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ ಕೂಡ ನಂಜನಗೂಡು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಆದರೆ ಈ ಬಗ್ಗೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ ಎಂದು ಮಹದೇವಪ್ಪ ಹೇಳಿದರೆ, ಧ್ರುವನಾರಾಯಣ ಅವರ ಆತ್ಮಕ್ಕೆ ಶಾಂತಿ ನೀಡಲು ಏನು ಬೇಕಾದರೂ ಮಾಡಲಾಗುವುದು ಎಂದು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಹೀಗಾಗಿ ನಂಜನಗೂಡು ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಬಗ್ಗೆ ಕಾಂಗ್ರೆಸ್ ತಲೆಕೆಡಿಸಿಕೊಂಡಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಧ್ರುವನಾರಾಯಣ್ ಅವರ ನಿಕಟವರ್ತಿಯಾಗಿದ್ದು, ಟಿಕೆಟ್ ನಿರ್ಧಾರವನ್ನು ಖರ್ಗೆ ಅವರೇ ಮಾಡಲಿದ್ದಾರೆ. ನಾನು ಈ ವಿಚಾರದಲ್ಲಿ ನನ್ನ ಅಭಿಪ್ರಾಯವನ್ನು ನೀಡಿದ್ದೇನೆ. ಧ್ರುವನಾರಾಯಣ್ ಅವರ ಸಾವಿನ ಆಘಾತದಲ್ಲಿ ನಾವು ಇನ್ನೂ ಇದ್ದೇವೆ. ಅವರ ಆತ್ಮಕ್ಕೆ ಶಾಂತಿ ನೀಡಲು ನಾವು ಏನು ಬೇಕಾದರೂ ಮಾಡುತ್ತೇವೆ ಎಂದು ಶಿವಕುಮಾರ್ ಹೇಳಿದ್ದಾರೆ.

ದರ್ಶನ್‌ಗೆ ಟಿಕೆಟ್ ಕೊಡಬೇಕು
ಈ ಮಧ್ಯೆ ಧ್ರುವನಾರಾಯಣ ಬೆಂಬಲಿಗರು ಧ್ರುವನಾರಾಯಣ್ ಮಗ ದರ್ಶನ್‌ಗೆ ಟಿಕೆಟ್ ಕೊಡಬೇಕು ಇಲ್ಲದಿದ್ದರೆ ನಾವು ಸುಮ್ಮನಿರುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಅಷ್ಟು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನೆಂದು ಬೆಂಬಲಿಸುವುದಿಲ್ಲ. ಕಾಂಗ್ರೆಸ್ ಪಕ್ಷವನ್ನು ನಾವು ಸೋಲಿಸಿಯೇ ತೀರುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ ಬಿ ಹರ್ಷವರ್ಧನ್ ಶಾಸಕ
ಸದ್ಯ ನಂಜನಗೂಡು ಕ್ಷೇತ್ರ ಬಿಜೆಪಿಯ ಬಿ ಹರ್ಷವರ್ಧನ್ ಅವರು ಶಾಸಕರಾಗಿದ್ದಾರೆ. ಇವರು ಚಾಮರಾಜನಗರ ಲೋಕಸಭಾ ಕ್ಷೇತ್ರದ ವಿ ಶ್ರೀನಿವಾಸ್‌ಪ್ರಸಾದ್ ಅವರ ಅಳಿಯ ಆಗಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸಂಪುಟಲ್ಲಿ ಕಾಂದಾಯ ಸಚಿವರಾಗಿದ್ದ ಶ್ರೀನಿವಾಸ್ ಪ್ರಸಾದ್ ಅವರು ಸಿದ್ದರಾಮಯ್ಯ ಅವರೊಂದಿಗಿನ ವೈಮನಸ್ಸಿನಿಂದ ಕಾಂಗ್ರೆಸ್‌ನಿಂದ ಹೊರ ಬಂದು ಚಾಮರಾಜನಗರದ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.

ಮೂವರಿಂದ ಟಿಕೆಟ್‌ಗಾಗಿ ಅರ್ಜಿ
ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿದ್ದ ಆರ್. ಧ್ರುವನಾರಾಯಣ, ಮಾಜಿ ಸಚಿವ ಮಹದೇವಪ್ಪ ಅವರಲ್ಲದೆ ಕಾಂಗ್ರೆಸ್ ಮುಖಂಡರಾದ ಕಳಲೆ ಕೇಶವಮೂರ್ತಿ, ಸಿ.ನರೇಂದ್ರ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದರು. ಇದಲ್ಲದೆ ಬೆಂಗಳೂರಿನ ರಾಜಾಜಿನಗರ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಸೋಮವಾರ ಶಿವಕುಮಾರ್ ಅವರನ್ನು ಭೇಟಿ ಮಾಡಿ, ಕಳೆದ ವಾರ ಪಕ್ಷಕ್ಕೆ ಸೇರ್ಪಡೆಗೊಂಡ ಬಿಜೆಪಿ ಎಂಎಲ್‌ಸಿ ಪುಟ್ಟಣ್ಣ ಅವರಿಗೆ ಟಿಕೆಟ್ ನೀಡುವ ಬಗ್ಗೆ ಯೋಚಿಸಬೇಡಿ ಎಂದು ಒತ್ತಾಯಿಸಿದರು. ರಾಜಾಜಿನಗರ ಟಿಕೆಟ್ ಆಕಾಂಕ್ಷಿಗಳಲ್ಲಿ ಒಬ್ಬರಾದ ಕಾಂಗ್ರೆಸ್‌ನ ಭವ್ಯ ನರಸಿಂಹಮೂರ್ತಿ ಅವರು ಪಕ್ಷದ ಸಿದ್ಧಾಂತಕ್ಕೆ ಬದ್ಧತೆ ಪ್ರದರ್ಶಿಸುವ ಮೊದಲು ಪಕ್ಷೇತರರಿಗೆ ಟಿಕೆಟ್ ನೀಡುವುದನ್ನು ವಿರೋಧಿಸಿದ್ದಾರೆ.

ಯಾವುದು ಸರಿ ಎಂಬುದನ್ನು ಪಕ್ಷ ನಿರ್ಧರಿಸುತ್ತದೆ
ಪುಟ್ಟಣ್ಣ ಅವರಿಗೆ ಟಿಕೆಟ್ ನೀಡುತ್ತೇವೆ ಎಂದು ಯಾರು ಹೇಳಿದರು. ಯಾವುದು ಸರಿ ಎಂಬುದನ್ನು ಪಕ್ಷ ನಿರ್ಧರಿಸುತ್ತದೆ ಎಂದು ಶಿವಕುಮಾರ್ ಹೇಳಿದರು. 2019 ರಲ್ಲಿ ಕಾಂಗ್ರೆಸ್-ಜೆಡಿ (ಎಸ್) ಸಮ್ಮಿಶ್ರವನ್ನು ಉರುಳಿಸಿದ ಆಪರೇಷನ್ ಕಮಲದ ರೂವಾರಿಗಳಲ್ಲಿ ಒಬ್ಬರು ಎಂದು ನಂಬಲಾದ ಕದಲೂರು ಉದಯ್ ಗೌಡ ಎಂದು ಕರೆಯಲ್ಪಡುವ ಉದ್ಯಮಿ ಉದಯ್ ಕೆಎಂ ಸೋಮವಾರ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ಆಪರೇಷನ್ ಕಮಲದಲ್ಲಿ ಉದಯ್‌ಗೌಡ ಪಾತ್ರ
ಉದಯ್‌ಗೌಡ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರ್ಪಡೆ ಮಾಡಿಕೊಂಡಿದ್ದಾರೆ. ಶಾಸಕರ ಪಕ್ಷಾಂತರದಲ್ಲಿ ಉದಯ್ ಅವರ ಪಾತ್ರದ ಹೊರತಾಗಿಯೂ ಶಿವಕುಮಾರ್ ಅವರನ್ನು ಸೇರಿಸಿಕೊಳ್ಳುವುದರ ಕುರಿತು ಕೇಳಲಾದ ಪ್ರಶ್ನೆಗೆ ಶಿವಕುಮಾರ್ ಎ ಮಂಜು, ಶ್ರೀನಿವಾಸ್ ಗೌಡ, ಗುಬ್ಬಿ ವಾಸು, ಶಿವಲಿಂಗೇಗೌಡ, ಮಧು ಬಂಗಾರಪ್ಪ ಅವರು ಕಾಂಗ್ರೆಸ್‌ಗೆ ಮರಳಿದ್ದಾರೆ. ಇದು ರಾಜಕೀಯ, ಒತ್ತಾಯಗಳು ಇರುತ್ತವೆ ಎಂದು ತಿಳಿಸಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications