• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರು ವಿಶ್ವವಿದ್ಯಾನಿಲಯದ 100ನೇ ಘಟಿಕೋತ್ಸವದಲ್ಲಿ ಮೋದಿ ಭಾಷಣ

By ಮೈಸೂರು ಪ್ರತಿನಿಧಿ
|

ಮೈಸೂರು, ಅಕ್ಟೋಬರ್ 13: ಮೈಸೂರು ವಿಶ್ವವಿದ್ಯಾನಿಲಯದ 100ನೇ ಘಟಿಕೋತ್ಸವವನ್ನು ಇದೇ ಅಕ್ಟೋಬರ್ 19ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದಲ್ಲಿ ಏರ್ಪಡಿಸಲಾಗಿದೆ.

100ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿಶ್ವ ವಿದ್ಯಾಲಯದ ಕುರಿತು ಆನ್ ಲೈನ್ ಭಾಷಣ ಮಾಡಲಿರುವುದು ವಿಶೇಷವಾಗಿದೆ. ಅಲ್ಲದೇ ಇದೇ ಮೊದಲ ಬಾರಿಗೆ 600 ಮಂದಿ ಪಿಎಚ್​ಡಿ ಪಡೆಯುತ್ತಿದ್ದಾರೆ. ಆದರೆ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಪೋಷಕರಿಗೆ ಪ್ರವೇಶಕ್ಕೆ ಅನುಮತಿ ನೀಡಲಾಗಿಲ್ಲ. ಘಟಿಕೋತ್ಸವದ ಕಾರ್ಯಕ್ರಮದಲ್ಲಿ ಬೆಳಿಗ್ಗೆ ಸಾಂಕೇತಿಕವಾಗಿ 30 ಮಂದಿಗೆ ಪಿಎಚ್​ಡಿ ಪ್ರದಾನ ಮಾಡಲಾಗುವುದು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಶಿಕ್ಷಣ ನೀತಿ‌ ಜಾರಿ ಮಾಡಲೂ ಮೈಸೂರು ವಿವಿ ಮುಂದಾಗಲಿದೆ.

ಪ್ರಥಮ ಡಿಜಿಟಲ್ ಯೂನಿವರ್ಸಿಟಿಯಾಗಲು ಪಣತೊಟ್ಟ ಮೈಸೂರು ವಿವಿ

ರಾಜ್ಯಪಾಲ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ವಜುಭಾಯ್ ರೂಡಾಭಾಯ್ ವಾಲಾ ಅವರು ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸುವರು. ಉನ್ನತ ಶಿಕ್ಷಣ ಸಚಿವ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಸಮ ಕುಲಾಧಿಪತಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರು ಉಪಸ್ಥಿತರಿರುವರು ಎಂದು ಮೈಸೂರು ವಿಶ್ವವಿದ್ಯಾನಿಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಮೈಸೂರು ವಿವಿ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್, "ಫೆಬ್ರವರಿಯಲ್ಲಿ 100ನೇ ಘಟಿಕೋತ್ಸವ ಕಾರ್ಯಕ್ರಮ ಮಾಡಲು ನಿರ್ಧರಿಸಲಾಗಿತ್ತು. ‌ಆದರೆ, ಪ್ರಧಾನಿ ಮೋದಿ ಅವರಿಗೆ ಸಮಯದ ಅಭಾವವಿರುವುದರಿಂದ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು" ಎಂದು ತಿಳಿಸಿದ್ದಾರೆ.

English summary
The 100th convocation of the University of Mysuru is held on October 19th. Prime Minister Narendra Modi will deliver an online speech
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X