ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗ-ಮೈಸೂರಿನಲ್ಲಿ ಇಂದು ಮೋದಿ ಬೃಹತ್ ಸಮಾವೇಶ

|
Google Oneindia Kannada News

ಚಿತ್ರದುರ್ಗ/ಮೈಸೂರು, ಏಪ್ರಿಲ್ 09: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಇಂದು ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಐತಿಹಾಸಿಕ ಹಿರಿಮೆಯ ಚಿತ್ರದುರ್ಗ ಮತ್ತು ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಪ್ರಧಾನಿ ಮೋದಿ ಅವರ ಸಮಾವೇಶಕ್ಕೆ ಸಾಕಷ್ಟು ಜನ ಸೇರುವ ನಿರೀಕ್ಷೆ ಇದೆ.

ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮತ್ತು ಮೈಸೂರಿನಲ್ಲಿ ಬಿಗಿಬಂದೋಬಸ್ತ್ ನಿಯೋಜಿಸಲಾಗಿದೆ. ಮೊದಲಿಗೆ ಮಹಾರಾಷ್ಟ್ರದಲ್ಲಿ ಸಮಾವೇಶ ಮುಗಿಸಿದ ನಂತರ ಚಿತ್ರದುರ್ಗಕ್ಕೆ ಆಗಮಿಸಲಿರುವ ಮೋದಿ, ಪ್ರಥಮ ಬಾರಿಗೆ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿರುವ DRDO ಒಳಗಿರುವ ರನ್ ವೇಗೆ ವಿಶೇಷ ವಿಮಾನದಲ್ಲಿ ಮಧ್ಯಾಹ್ನ 1.50 ಕ್ಕೆ ಆಗಮಿಸಲಿದ್ದಾರೆ.

ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ರಣಕಹಳೆ, ಬಿಜೆಪಿಯಲ್ಲಿ ಪುಳಕ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ರಣಕಹಳೆ, ಬಿಜೆಪಿಯಲ್ಲಿ ಪುಳಕ

ನಂತರ ವಿಶೇಷ ಹೆಲಿಕಾಪ್ಟರ್ ಮೂಲಕ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ನಡೆಯಲಿರುವ ಬಿಜೆಪಿ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ 35 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದ್ದು, ಲಕ್ಷಾಂತರ ಜನ ಸೇರುವ ನಿರೀಕ್ಷೆ ಇದೆ. 1,500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

Narendra Modi to address public rally in Chitradurga and Mysuru today

ಟೈಮ್ಸ್ ನೌ ಸಮೀಕ್ಷೆ: ಮ್ಯಾಜಿಕ್ ನಂಬರ್ ದಾಟಲಿದೆ ಮೋದಿ ಪಡೆಟೈಮ್ಸ್ ನೌ ಸಮೀಕ್ಷೆ: ಮ್ಯಾಜಿಕ್ ನಂಬರ್ ದಾಟಲಿದೆ ಮೋದಿ ಪಡೆ

ನಂತರ ಮೋದಿ ಅವರು ಅಪರಾಹ್ನ 4:15 ಕ್ಕೆ ಮೈಸೂರಿಗೆ ತೆರಳಲಿದ್ದು, ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾವೇಶವನ್ನುದ್ದೇಶಿಸಿ ಸಂಜೆ 5 ಗಂಟೆಗೆ ಭಾಷಣ ಮಾಡಲಿದ್ದಾರೆ. ಮೈಸೂರು ಸಮಾವೇಶದ ನಂತರ ಮೋದಿ, ತಮಿಳುನಾಡಿನ ಕೋಯಿಮತ್ತೂರಿಗೆ ತೆರಳಲಿದ್ದಾರೆ.

ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಎ.ನಾರಾಯಣಸ್ವಾಮಿ ಅವರ ಪರವಾಗಿ ಮತ್ತು ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರ ಪರವಾಗಿ ಮೋದಿ ಮತಯಾಚಿಸಲಿದ್ದಾರೆ

English summary
Ahead of Lok Sabha elections 2019, PM Narendradre Modi to address rallies in Karnataka's Chitradurga and Mysuru today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X