ಮೈಸೂರು ಕಲಾವಿದನ ಕುರಿತು ನರೇಂದ್ರ ಮೋದಿ ಟ್ವೀಟ್!
ಮೈಸೂರು, ಏಪ್ರಿಲ್ 05; ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಪ್ರಧಾನಿ ನರೇಂದ್ರ ಮೋದಿಯನ್ನು ಮಂಗಳವಾರ ಭೇಟಿ ಮಾಡಿದರು. ಕಲಾವಿದನ ಕುರಿತು ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಕುರಿತು ಟ್ವೀಟ್ ಮಾಡಿದ್ದಾರೆ.
ಅರುಣ್ ಯೋಗಿರಾಜ್ ನವದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿ ಮಾಡಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆಯನ್ನು ಕಾಣಿಕೆಯಾಗಿ ನೀಡಿದರು. ಕೆಲವು ದಿನಗಳ ಹಿಂದದೆ ಕೇದಾರನಾಥದಲ್ಲಿ ಪ್ರತಿಷ್ಠಾಪನೆಗೊಂಡಿರವ ಶಂಕರಾಚಾರ್ಯರ ಪ್ರತಿಮೆಯನ್ನು ಕೆತ್ತನೆ ಮಾಡಿರುವುದು ಇದೇ ಅರುಣ್.
Glad to have met @yogiraj_arun today. Grateful to him for sharing this exceptional sculpture of Netaji Bose. pic.twitter.com/DeWVdJ6XiU
— Narendra Modi (@narendramodi) April 5, 2022
ಅಂತರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿರುವ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಅರುಣ್ ಕೆತ್ತನೆ ಮಾಡಿರುವ ನೇತಾಜಿ ಪ್ರತಿಮೆ ಕಂಡು ತುಂಬಾ ಸಂತೋಷವಾಯಿತು ಎಂದು ಟ್ವೀಟ್ ಮಾಡಿದ್ದಾರೆ.

ಅರುಣ್ ಯೋಗಿರಾಜ್ ಮೋದಿ ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದರು. 2 ಅಡಿ ಎತ್ತರದ ಸುಭಾಷ್ ಚಂದ್ರ ಬೋಸ್ ಕಲ್ಲಿನ ಪ್ರತಿಮೆಯನ್ನ ಉಡುಗೊರೆಯಾಗಿ ನೀಡಿದರು. ಅರುಣ್ ಭೇಟಿ ಮಾಡಿದ ಫೋಟೋವನ್ನು ಮೋದಿ ಹಂಚಿಕೊಂಡಿದ್ದಾರೆ.
ಮೋದಿ ಭೇಟಿಗೆ ಅವಕಾಶ ಕಲ್ಪಿಸಿದ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹಗೆ ಸಹ ಶಿಲ್ಪಿ ಅರುಣ್ ಯೋಗಿರಾಜ್ ಧನ್ಯವಾದ ಹೇಳಿದ್ದಾರೆ. ಮೋದಿ ಭೇಟಿಗೆ ಮುನ್ನ ಅರುಣ್ ಜೊತೆ ತೆಗೆಸಿಕೊಂಡ ಫೋಟೋವನ್ನು ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.












Click it and Unblock the Notifications