Breaking; ಜೂ.19ರಿಂದ ಮೂರು ದಿನ ಮೈಸೂರು ಅರಮನೆ ಪ್ರವೇಶಕ್ಕೆ ನಿರ್ಬಂಧ

ಮೈಸೂರು, ಜೂನ್ 18; ಪ್ರಧಾನಿ ನರೇಂದ್ರ ಮೋದಿ ಮೈಸೂರು ಭೇಟಿ ಹಿನ್ನಲೆಯಲ್ಲಿ ಜೂನ್ 19ರಿಂದ ಮೂರು ದಿನಗಳ ಕಾಲ ಮೈಸೂರು ಅರಮನೆಗೆ ಪ್ರವಾಸಿಗರ ಭೇಟಿಗೆ ನಿರ್ಬಂಧ ಹೇರಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಜೂನ್ 20ರ ಸಂಜೆ ಮೈಸೂರಿಗೆ ಆಗಮಿಸಲಿದ್ದಾರೆ. ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದರಿಂದಾಗಿ ನಗರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಮೋದಿ ಭೇಟಿಯ ಹಿನ್ನಲೆಯಲ್ಲಿ ಮೂರು ದಿನ ಅರಮನೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೂ 21ರ ಮಧ್ಯಾಹ್ನ 12 ಗಂಟೆಯವರೆಗೂ ಅಂಬಾವಿಲಾಸ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

Narendra Modi Visit To Mysuru Tourist Entry To Palace Banned

ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಜೂನ್ 21ರಂದು ಅರಮನೆ ಆವರಣದಲ್ಲಿ ನಡೆಯುವ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೋದಿ ಭೇಟಿ ಹಿನ್ನಲೆಯಲ್ಲಿ ಅರಮನೆಯಲ್ಲಿ ವಿವಿಧ ಕಾಮಗಾರಿ ಹಿನ್ನೆಲೆ ಮೂರು ದಿನಗಳ ಕಾಲ ಪ್ರವೇಶ ನಿರ್ಬಂಧಿಸಲಾಗಿದೆ. ಅರಮನೆ ಆಡಳಿತ ಮಂಡಳಿ ಈ ಕುರಿತು ಪ್ರಕಟಣೆ ಹೊರಡಿಸಿದೆ.

Narendra Modi Visit To Mysuru Tourist Entry To Palace Banned

ಅರಮನೆ ಭೇಟಿ ಮಾತ್ರವಲ್ಲ ಜೂನ್ 22ರವರೆಗೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಮೈಸೂರಿನಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಪ್ರಧಾನಿಗೆ ಭದ್ರತೆ ನೀಡುವ ಎಸ್‌ಪಿಜಿ ಅಧಿಕಾರಿಗಳು ಸಹ ನಗರಕ್ಕೆ ಆಗಮಿಸಿದ್ದಾರೆ.

2019ರ ಬಳಿಕ ಭೇಟಿ; ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನಲೆಯಲ್ಲಿ ಎರಡು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಮೈಸೂರು ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಮೋದಿ ಭೇಟಿಯ ಹಿನ್ನಲೆಯಲ್ಲಿ ಒಂದೆಡೆ ನಗರದಲ್ಲಿ ಗುಂಡಿಬಿದ್ದ ರಸ್ತೆಗಳನ್ನು ಡಾಂಬರ್‌ ಹಾಕಿ ಸುಂದರಗೊಳಿಸಲಾಗುತ್ತಿದೆ. ಮತ್ತೊಂದೆಡೆ ದಸರಾ ಮಾದರಿಯಲ್ಲಿ ಅಲಂಕಾರಕ್ಕೆ ಸಿದ್ಧತೆ ಕೈಗೊಳ್ಳಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ 2019ರಲ್ಲಿ ಮೈಸೂರಿಗೆ ಆಗಮಿಸಿದ್ದರು. ಆದರೆ ಆಗ ಅವರು ಚುನಾವಣಾ ಪ್ರಚಾರಕ್ಕೆ ಬಂದಿದ್ದರು. ಆದರೆ ಈ ಬಾರಿ ಸರ್ಕಾರಿ ಕ್ರಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+