ಮೈಸೂರಿನಲ್ಲಿ ಜಿಲ್ಲಾಡಳಿತ ಭವನ ನಿರ್ಮಾಣಕ್ಕೆ ಜಾಗ ಸಿಕ್ತು

ಮೈಸೂರು, ಜೂ. 11 : ಮೈಸೂರಿನಲ್ಲಿ ಜಿಲ್ಲಾಡಳಿತ ಭವನ ನಿರ್ಮಾಣ ಮಾಡಲು ಸ್ಥಳವನ್ನು ಗುರುತಿಸಲಾಗಿದೆ. ಜರ್ಮನ್ ಪ್ರೆಸ್‌ಗೆ ಸೇರಿದ 15 ಎಕರೆ ಜಾಗದಲ್ಲಿ ಎಲ್ಲಾ ಜಿಲ್ಲಾ ಕಚೇರಿಗಳು ಒಂದೇ ಸೂರಿನಡಿ ಸಿಗುವಂತೆ ಜಿಲ್ಲಾಡಳಿತ ಭವನ ನಿರ್ಮಾಣವಾಗಲಿದೆ.

ಸಿದ್ಧಾರ್ಥನಗರದ ಮಲೆಮಹದೇಶ್ವರ ರಸ್ತೆಯಲ್ಲಿರುವ ಈ ಜಾಗ ಕೇಂದ್ರ ಸರ್ಕಾರದ ಸ್ವಾಧೀನದಲ್ಲಿತ್ತು. ಬುಧವಾರ ನವದೆಹಲಿಯಲ್ಲಿ ಈ ಭೂಮಿಯನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರ ಮಾಡಲು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅನುಮತಿ ಪತ್ರವನ್ನು ನೀಡಿದ್ದಾರೆ.

siddaramaiah

ಜರ್ಮನ್ ಪ್ರೆಸ್ ಇದ್ದ 100 ಎಕರೆ ಜಾಗವನ್ನು 1963ರಲ್ಲಿ ಕೇಂದ್ರ ಸರ್ಕಾರಕ್ಕೆ ನೀಡಲಾಗಿತ್ತು. ನಂತರ ಆ ಜಾಗ ಖಾಲಿ ಬಿದ್ದಿತ್ತು. ನಗರದಲ್ಲಿ ಜಿಲ್ಲಾಡಳಿತ ಭವನ ನಿರ್ಮಾಣ ಮಾಡುವುದಾಗಿ ಬಜೆಟ್‌ನಲ್ಲಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದರು. [ಮೈಸೂರು-ಚೆನ್ನೈ ನಡುವೆ ಸೆಮಿ ಸ್ಪೀಡ್ ರೈಲು ಸಂಚಾರ]

ಜಿಲ್ಲಾಡಳಿತ ಭವನಕ್ಕೆ ಸೂಕ್ತ ನಿವೇಶನ ಗುರುತಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು. ಜಿಲ್ಲಾಧಿಕಾರಿ ಸಿ.ಶಿಖಾ ಅವರು ಪರಿಶೀಲನೆ ನಡೆಸಿ, ಜರ್ಮನ್ ಪ್ರೆಸ್‌ ಇರುವ ಜಾಗದಲ್ಲಿ 15 ಎಕರೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. [ಜುಲೈನಿಂದ ಬೆಂಗಳೂರು-ಮೈಸೂರು ಏರ್ ಇಂಡಿಯಾ ಸಂಚಾರ]

ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿದಾಗ, ನಿವೇಶನ ಹಸ್ತಾಂತರ ಮಾಡುವ ಪತ್ರವನ್ನು ನೀಡಿದ್ದಾರೆ. ಶೀಘ್ರದಲ್ಲಿಯೇ ಈ ಜಾಗದಲ್ಲಿ ಜಿಲ್ಲಾಡಳಿತ ಭವನ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+