ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದರಾಮಯ್ಯನವರ ಊರಲ್ಲೇ ಇಂಗ್ಲೀಷ್ ಮಾಧ್ಯಮಕ್ಕೆ ಡಿಮ್ಯಾಂಡ್

|
Google Oneindia Kannada News

ಮೈಸೂರು, ಜೂನ್ 7: ಇಂಗ್ಲೀಷ್ ಮಾಧ್ಯಮಕ್ಕೆ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಿದ್ದ ಸಮನ್ವಯ ಸಮಿತಿ ಅಧ್ಯಕ್ಷರು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯರವರ ತವರೂರು ಮೈಸೂರಿನ ಸಿದ್ದರಾಮನ ಹುಂಡಿ ಶಾಲೆಯಲ್ಲೇ ಇಂಗ್ಲೀಷ್ ಮಾಧ್ಯಮ ತರಗತಿಗಳಿಗೆ ಹೆಚ್ಚು ಡಿಮ್ಯಾಂಡ್ ಶುರುವಾಗಿದೆ.

ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ಪ್ರಾರಂಭವಾಗಿದೆ. ಸಿದ್ದರಾಮಯ್ಯನವರ ಹುಟ್ಟೂರಾದ ಈ ಕ್ಷೇತ್ರದಲ್ಲಿ ಇಂಗ್ಲೀಷ್ ಮಾಧ್ಯಮಕ್ಕೆ ಮಕ್ಕಳನ್ನು ಸೇರಿಸಲು ಪೋಷಕರು ಮುಗಿಬಿದ್ದಿದ್ದಾರೆ. ಕನ್ನಡ ಮಾಧ್ಯಮ ಶಾಲೆಯೆಡೆಗೆ ಆಸಕ್ತಿ ತೋರುತ್ತಿಲ್ಲ. ಮೊದಲ ವರ್ಷವೇ ಇಂಗ್ಲೀಷ್ ಕಲಿಕೆಗೆ ಪೋಷಕರಿಂದ ಹೆಚ್ಚಿನ ಆಸಕ್ತಿ ವ್ಯಕ್ತವಾಗುತ್ತಿರುವುದು ಸಿದ್ದರಾಮಯ್ಯನವರ ನಿಲುವನ್ನು ಅಣಕಿಸುವಂತೆ ಮಾಡುತ್ತಿದೆ. ಎಲ್‍ಕೆಜಿಯ ಇಂಗ್ಲೀಷ್ ಮಾಧ್ಯಮ ತರಗತಿಗೆ 30 ಮಕ್ಕಳು ದಾಖಲಾತಿ ಪಡೆದಿದ್ದಾರೆ. ಎಲ್‍ಕೆಜಿ ಕನ್ನಡ ಮಾಧ್ಯಮಕ್ಕೆ ಒಂದೇ ಒಂದು ದಾಖಲಾತಿಯೂ ಆಗಿಲ್ಲ. ಹೀಗಾಗಿ ಒಂದನೇ ತರಗತಿಯ ಕನ್ನಡ ತರಗತಿಗಳು ಖಾಲಿ ಖಾಲಿಯಾಗಿವೆ.

ಇಂಗ್ಲಿಷ್ ಮಾಧ್ಯಮದ ಶಿಕ್ಷಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ಇಂಗ್ಲಿಷ್ ಮಾಧ್ಯಮದ ಶಿಕ್ಷಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ

ಪ್ರಸಕ್ತ ವರ್ಷದಿಂದ ಜಿಲ್ಲೆಯ 46 ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ಆರಂಭವಾಗಿದೆ. ಇದರಲ್ಲಿ 29 ಕನ್ನಡ ಮಾಧ್ಯಮ ಶಾಲೆಗಳಿಗೆ ಪೋಷಕರು ಮಕ್ಕಳನ್ನು ಕಳಿಸಿಲ್ಲ. 30 ಸಾವಿರ ರೂಪಾಯಿ ನೀಡಿ ಮಕ್ಕಳನ್ನು ಇಂಗ್ಲೀಷ್ ಮಾಧ್ಯಮವಿರುವ ಖಾಸಗಿ ಶಾಲೆಗಳಿಗೆ ಕಳುಹಿಸಲು ನಮ್ಮಿಂದ ಸಾಧ್ಯವಾಗುತ್ತಿರಲಿಲ್ಲ. ಆದರೆ ಈಗ ಸರ್ಕಾರವೇ ಇಂಗ್ಲೀಷ್ ಮಾಧ್ಯಮ ಆರಂಭಿಸಿದ್ದು ನಮಗೆ ಹೆಚ್ಚು ಅನುಕೂಲವಾಗಿದೆ ಎಂದು ಪೋಷಕರು ತಿಳಿಸಿದ್ದಾರೆ.

New English medium school started in Siddaramaiah native Siddaramana hundi

ಕನ್ನಡದ ಉಳಿವಿನ ವಿಚಾರಕ್ಕೆ ಯಾವುದೇ ಕಾರಣಕ್ಕಾಗಿ ನಾನು ರಾಜಿಯಾಗುವುದಿಲ್ಲ ಎಂದು ಘೋಷಿಸಿದ್ದ ಸಮನ್ವಯ ಸಮಿತಿಯ ಅಧ್ಯಕ್ಷರಾದ ಸಿದ್ದರಾಮಯ್ಯ ಅವರ ಜಿಲ್ಲೆಯಲ್ಲೇ ಈ ಪರಿ ಬದಲಾವಣೆಯಾಗಿರುವುದು ಅಚ್ಚರಿ.

English summary
New English medium school has been started in Siddaramaiah native place Siddaramana hundi. parents are rushing towards english medium schools. 30 students has been admitted in this school.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X