ಮೈಸೂರಿಗೆ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆಯಲ್ಲಿ ಹೊಸ ದಾಖಲೆ
ಮೈಸೂರು, ಜೂನ್ 16 : ಪ್ರವಾಸೋದ್ಯಮ ಕೇಂದ್ರ ಹಾಗೂ ಸಾಂಸ್ಕೃತಿಕ ನಗರಿ ಮೈಸೂರು ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನೂತನ ದಾಖಲೆ ನಿರ್ಮಿಸಿದೆ. ಪ್ರವಾಸಿಗರ ಸ್ವರ್ಗ ಮೈಸೂರಿಗೆ ಬೇಸಿಗೆ ರಜೆ ಹಿನ್ನೆಲೆಯಲ್ಲಿ 2017ರ ಏಪ್ರಿಲ್, ಮೇ ತಿಂಗಳುಗಳಲ್ಲಿ ದಾಖಲೆಯ ಸಂಖ್ಯೆಯಲ್ಲಿ ಪ್ರವಾಸಿಗರು ದಾಂಗುಡಿ ಇಟ್ಟಿದ್ದರು. ಏಪ್ರಿಲ್ ತಿಂಗಳಿನಲ್ಲಿ ಅಧಿಕೃತ ಅಂಕಿ-ಅಂಶಗಳ ಪ್ರಕಾರ ಮೈಸೂರು ಅರಮನೆಯನ್ನು 3,19,437 ಮಂದಿ ವೀಕ್ಷಿಸಿದ್ದು, ಇದು ನೂತನ ದಾಖಲೆಯನ್ನು ನಿರ್ಮಿಸಿದೆ.
ಇದುವರೆಗೆ ಏಪ್ರಿಲ್‍ನಲ್ಲಿ 3 ಲಕ್ಷ ಪ್ರವಾಸಿಗರು ಅರಮನೆಗೆ ಭೇಟಿ ನೀಡಿದ ನಿದರ್ಶನ ಈವರೆಗೆ ಇಲ್ಲ. ಅದೇ ರೀತಿ ಮೇ ಮಾಹೆಯಲ್ಲಿ 5 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಆಗಮಿಸಿದ್ದರು. ಇದೂ ಕೂಡ ಸಾರ್ವಕಾಲಿಕ ದಾಖಲೆಯಾಗಿದೆ. ಕಳೆದ ವರ್ಷ ಏಪ್ರಿಲ್ ಮಾಹೆಯಲ್ಲಿ 2,88,332 ಮಂದಿ ವೀಕ್ಷಕರು ಅರಮನೆಗೆ ಭೇಟಿ ನೀಡಿದ್ದರು. ಇದು ಈವರೆಗಿನ ದಾಖಲೆಯಾಗಿತ್ತು. ಇದನ್ನು ಮೀರಿ 31 ಸಾವಿರಕ್ಕೂ ಹೆಚ್ಚು ಮಂದಿ ಈ ಬಾರಿ ಅರಮನೆ ವೀಕ್ಷಣೆಗೆ ಆಗಮಿಸಿದ್ದಾರೆ.

ಅದೇ ರೀತಿ ಮೇ ತಿಂಗಳಿನಲ್ಲಿ 5,27,186 ಮಂದಿ ಪ್ರವಾಸಿಗರು ಆಗಮಿಸಿ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದ್ದಾರೆ. ಏಪ್ರಿಲ್ ಕೊನೆ ಎರಡು ದಿನ ಸುಮಾರು 47 ಸಾವಿರ ಮಂದಿ ಹಾಗೂ ಮೇ 1 ರಂದು 26 ಸಾವಿರಕ್ಕೂ ಹೆಚ್ಚು ಮಂದಿ ಭೇಟಿ ನೀಡಿ ಅರಮನೆಯನ್ನು ವೀಕ್ಷಿಸಿದ್ದಾರೆ. ಮೇ ತಿಂಗಳಿನಲ್ಲಿ 14 ರಂದು ಅತಿ ಹೆಚ್ಚು ಮಂದಿ ಅಂದರೆ 28,943 ಮಂದಿ ಭೇಟಿ ನೀಡಿದ್ದರು. . ಅದೇ ರೀತಿ ಮೈಸೂರು ಮೃಗಾಲಯಕ್ಕೂ ದಾಖಲೆ ಪ್ರಮಾಣದಲ್ಲಿ ವೀಕ್ಷಕರು ಭೇಟಿ ನೀಡಿದ್ದು, ಏಪ್ರಿಲ್ ಮತ್ತು ಮೇ ಮಾಹೆಯಲ್ಲಿ ಹಿಂದಿನ ಎಲ್ಲಾ ದಾಖಲೆಗಳನ್ನೂ ಮುರಿದಿದ್ದಾರೆ.
ಏಪ್ರಿಲ್‍ನಲ್ಲಿ ಇದೇ ಮೊದಲ ಬಾರಿಗೆ 3 ಲಕ್ಷಕ್ಕೂ ಹೆಚ್ಚು ಮಂದಿ ಭೇಟಿ ನೀಡಿದ್ದರೆ, ಮೇನಲ್ಲಿ 4.93 ಲಕ್ಷ ವೀಕ್ಷಕರೊಂದಿಗೆ ಅತಿ ಹೆಚ್ಚು ಮಂದಿ ಭೇಟಿ ನೀಡಿ ಇತಿಹಾಸ ಸಾವಿರ ಮಂದಿ ಭೇಟಿ ನೀಡಿದ್ದರು. ಈ ಮೂರು ದಿನ (ಮೇ 1 ಸೇರಿ)ಗಳಲ್ಲಿ ಸುಮಾರು 73 ಸಾವಿರ ಪ್ರವಾಸಿಗರು ಅರಮನೆಗೆ ಟಿಕೆಟ್ ಮೂಲಕ ಪ್ರವೇಶ ಪಡೆದು ವೀಕ್ಷಿಸಿದ್ದಾರೆ.
30 ಸಾವಿರಕ್ಕೂ ಹೆಚ್ಚು ಮಂದಿ ಇದೇ ಅವಧಿಯಲ್ಲಿ ಅರಮನೆ ಆವರಣದಿಂದಲೇ ಅರಮನೆಯ ವೈಭವವನ್ನು ಕಣ್ತುಂಬಿಕೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಹೀಗಾಗಿ 1 ಲಕ್ಷ ಪ್ರವಾಸಿಗರು ಮೂರು ದಿನಗಳ ಅವಧಿಯಲ್ಲಿ ಆಗಮಿಸಿದ್ದು, ದಾಖಲೆ ನಿರ್ಮಾಣವಾಗಿದೆ. ಮೇ ತಿಂಗಳಿನಲ್ಲಿ ಈವರೆಗಿನ ದಾಖಲೆ 4,97,916 ಆಗಿತ್ತು. ಆದರೆ ಈ ಬಾರಿ 30 ನಿರ್ಮಿಸಿದ್ದಾರೆ. ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಇದ್ದ ಕಾರಣ ಹಾಗೂ ಪ್ರವಾಸಕ್ಕೆ ಪ್ರಶಸ್ತ ಸ್ಥಳವಾದ ಹಿನ್ನೆಲೆಯಲ್ಲಿ ಎಲ್ಲರೂ ಮೈಸೂರಿನತ್ತ ಮುಖ ಮಾಡಿದ್ದರು.
ರಾಜ್ಯವಷ್ಟೇ ಅಲ್ಲ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಸೇರಿದಂತೆ ದೇಶದ ಮೂಲೆ, ಮೂಲೆಗಳಿಂದ ಪ್ರವಾಸಿಗರು ಮೈಸೂರಿಗೆ ಆಗಮಿಸಿದ್ದರು. ವಿದೇಶಿ ಪ್ರವಾಸಿಗರೂ ಹೆಚ್ಚಿನ ಸಂಖ್ಯೆಯಲ್ಲಿ ಮೈಸೂರಿಗೆ ಬಂದಿದ್ದಾರೆ. ಮೈಸೂರು ಜಿಲ್ಲೆ ಮತ್ತು ಸುತ್ತಮುತ್ತಲಿನ ಪ್ರವಾಸಿ ತಾಣಗಳು ತುಂಬಿ ತುಳುಕಿದ್ದವು.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications