ಮುಂದಿನ ಚುನಾವಣೆ ಬಹುಶಃ ನನ್ನ ಕೊನೆಯ ಚುನಾವಣೆ: ಸಿದ್ದರಾಮಯ್ಯ
ಮೈಸೂರು, ಜುಲೈ 15: 'ಮುಂದಿನ ಚುನಾವಣೆ ಬಹುಶಃ ನನ್ನ ಕೊನೆಯ ಚುನಾವಣೆಯಾಗಬಹುದು' ಎಂದು ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬೆಳಗ್ಗೆ ಘೋಷಿಸಿದ್ದಾರೆ. 2013ರ ಚುನಾವಣೆ ಸಂದರ್ಭದಲ್ಲಿ ಕೂಡಾ ಇದೇ ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
'ನನಗೆ ರಾಜಕೀಯ ಪುನರ್ಜನ್ಮ ನೀಡಿದ ಚಾಮುಂಡೇಶ್ವರಿ ಕ್ಷೇತ್ರದಿಂದ ಚುನಾವಣೆ ಯಲ್ಲಿ ಸ್ಪರ್ಧಿಸಲು ಬಯಸಿದ್ದೇನೆ' ಎಂದು ಮತ್ತೊಮ್ಮೆ ಹೇಳಿದರು.

ರಾಮಕೃಷ್ಣನಗರದಲ್ಲಿರುವ ತಮ್ಮ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರುಣಾ ಕ್ಷೇತ್ರದ ಜನರು ತಮ್ಮ ಕ್ಷೇತ್ರದಲ್ಲೇ ಸ್ಪರ್ಧಿಸುವಂತೆ ಹೇಳಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಜನರು ಹೇಳುತ್ತಿದ್ದಾರೆ. ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದಂತೆ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದರು.












Click it and Unblock the Notifications